ಎಸ್ಸೆಸ್ಸೆಲ್ಸಿ ಪರೀಕ್ಷೆ: 3350 ವಿದ್ಯಾರ್ಥಿಗಳು ಹಾಜರು

| Published : Mar 26 2024, 01:15 AM IST

ಸಾರಾಂಶ

ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಸೂತ್ರವಾಗಿ ಯಾವುದೇ ತೊಂದರೆ ಇಲ್ಲದೇ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಉತ್ತಮವಾಗಿ ನಡೆದಿವೆ ಎಂದು ತಾಲೂಕು ಎಸ್.ಎಸ್.ಎಲ್.ಸಿ. ಪರೀಕ್ಷಾ ನೋಡಲ್ ಅಧಿಕಾರಿ ಅಶೋಕ ಹೂವಿನಬಾವಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಂಚೋಳಿ

ತಾಲೂಕಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಸೂತ್ರವಾಗಿ ಯಾವುದೇ ತೊಂದರೆ ಇಲ್ಲದೇ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಉತ್ತಮವಾಗಿ ನಡೆದಿವೆ ಎಂದು ತಾಲೂಕು ಎಸ್.ಎಸ್.ಎಲ್.ಸಿ. ಪರೀಕ್ಷಾ ನೋಡಲ್ ಅಧಿಕಾರಿ ಅಶೋಕ ಹೂವಿನಬಾವಿ ತಿಳಿಸಿದ್ದಾರೆ.

ಪ್ರಸಕ್ತಸಾಲಿನಲ್ಲಿ ತಾಲೂಕಿನಲ್ಲಿ ಒಟ್ಟು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿದ್ದು ಸೋಮವಾರ ನಡೆದ ಪ್ರಥಮ ಭಾಷೆಯಲ್ಲಿ ಒಟ್ಟು ೩೫೦೦ ವಿದ್ಯಾರ್ಥಿಗಳಲ್ಲಿ ೩೩೫೦ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ೧೫೦ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿರುವುದಿಲ್ಲ.

ಸುಲೇಪೇಟ-೨, ಚಿಂಚೋಳಿ-೩, ಕೋಡ್ಲಿ, ಚಿಮ್ಮನಚೋಡ, ಚಂದನಕೇರಾ, ಕುಂಚಾವರಂ ಪರೀಕ್ಷೆ ಕೇಂದ್ರಗಳಿವೆ ಎಲ್ಲ ಪರೀಕ್ಷೆ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಪೋಲಕಪಳ್ಳಿ ಆದರ್ಶ ವಿದ್ಯಾಲಯದಲ್ಲಿ ವೆಬ್‌ಕ್ಯಾಸ್ಟಿಂಗ್‌ ಲೈವ್‌ ಸಿಸಿ ಕ್ಯಾಮೆರಾ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷೆ ಕೇಂದ್ರಗಳಲ್ಲಿ ನಡೆಯುವ ಎಲ್ಲ ಚಟುವಟಿಕೆಗಳನ್ನು ವೀಕ್ಷಣೆ ಮಾಡಲು ೯ ಸಿಬ್ಬಂದಿ ನೇಮಕ ಮಾಡಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕುಳಿತುಕೊಳ್ಳುವ ವಿದ್ಯಾರ್ಥಿಗಳಿಗೆ ಡೆಸ್ಕ್‌, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಫ್ಯಾನ್‌ ಅಳವಡಿಸಲಾಗಿದೆ. ಪರೀಕ್ಷೆಗೆ ಒಟ್ಟು ೧೫೦ ಕೋಣೆಗಳನ್ನು ಬಳಸಿಕೊಳ್ಳಲಾಗಿದೆ. ಅಲ್ಲದೇ ೨೦೦ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗಿದೆ ಎಂದು ನೋಡಲ್ ಅಧಿಕಾರಿ ಅಶೋಕ ಹೂವಿನಬಾವಿ ಹೇಳಿದ್ದಾರೆ.