ಸುಂಟಿಕೊಪ್ಪ: ಎರಡು ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

| Published : Mar 26 2024, 01:20 AM IST

ಸುಂಟಿಕೊಪ್ಪ: ಎರಡು ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ಪರೀಕ್ಷಾ ಕೇಂದ್ರದ 200 ಮೀಟರ್‌ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆರೋಗ್ಯ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೋಮವಾರದಿಂದ ಆರಂಭವಾಗಿದೆ. ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ ಹಾಗೂ ಸಂತಮೇರಿ 2 ಪರೀಕ್ಷಾ ಕೇಂದ್ರಗಳನ್ನು ಮಾರ್ಪಡಿಸಲಾಗಿದೆ. 9 ಪ್ರೌಢಶಾಲೆಗಳ 381 ವಿದ್ಯಾರ್ಥಿಗಳಿಗೆ ಏ. 6 ರವರೆಗೆ ಸುಂಟಿಕೊಪ್ಪದ 2 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ನಿರ್ಮಲ ವಿದ್ಯಾಭವನ ಹಟ್ಟಿಹೊಳೆ, ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಪ್ರೌಢಶಾಲೆ ಮಾದಾಪುರ, ಚೆನ್ನಮ್ಮ ಪ್ರೌಢಶಾಲೆ ಗರಗಂದೂರು, ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸುಂಟಿಕೊಪ್ಪ, ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ, ಕಾನ್‌ಬೈಲ್ ಸರ್ಕಾರಿ ಪ್ರೌಢಶಾಲೆ, ಶಾಂತಿನಿಕೇತನ, ಸುಂಟಿಕೊಪ್ಪ ನಾಡು ಪ್ರೌಢಶಾಲೆ ಕೊಡಗರಹಳ್ಳಿ, ಒಟ್ಟು 381 ವಿದ್ಯಾರ್ಥಿಗಳು. ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ 150 ಮಕ್ಕಳಲ್ಲಿ ಓರ್ವ ವಿದ್ಯಾರ್ಥಿ ಗೈರಾಗಿದ್ದಾರೆ. 149 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದಾರೆ. ಸಂತ ಮೇರಿ ಆಂಗ್ಲ ಮಾಧ್ಯಮ ಪರೀಕ್ಷಾ ಕೇಂದ್ರದಲ್ಲಿ 231 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆಯನ್ನು ಎದುರಿಸಿದ್ದಾರೆ.

ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ ಹಾಗೂ ಸಂತಮೇರಿ ಆವರಣದಲ್ಲಿ ಪರೀಕ್ಷೆಗೆ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ನಡೆಯಿತು. ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಬಾಲಕೃಷ್ಣ ಅಧ್ಯಕ್ಷತೆ ವಹಿಸಿ ಹಾಗೂ ಸಂತ ಮೇರಿ ಆಂಗ್ಲಮಾಧ್ಯಮ ಶಾಲೆಯಲ್ಲಿ ವ್ಯವಸ್ಥಾಪಕರಾದ ರೇ.ಫಾ.ಅರುಳ್‌ಸೇಲ್ವಕುಮಾರ್ ಹಾಗೂ ಮುಖ್ಯೋಪಾಧ್ಯಾಯರಾದ ಸೇಲ್ವರಾಜ್ ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರದ 200 ಮೀಟರ್ ವರೆಗೆ ಪ್ರವೇಶಕ್ಕೆ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪೊಲೀಸ್ ಪಹರೆ ಹಾಗೂ ಆರೋಗ್ಯ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿತ್ತು.