ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 15,843 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಇದರಲ್ಲಿ 15,476 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಶೇ. 97.68 ಹಾಜರಾತಿ ದಾಖಲಾಗಿದ್ದು, 367 ವಿದ್ಯಾರ್ಥಿಗಳು ಗೈರಾಗಿದ್ದು, ಶೇ. 2.31 ಗೈರು ಹಾಜರಾತಿಯಾಗಿದೆ.

ಗದಗ: ನಗರ ಸೇರಿದಂತೆ ಜಿಲ್ಲೆಯೇ 61 ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಪ್ರಾರಂಭವಾದ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ- 1 ಪರೀಕ್ಷೆ ನಡೆಯಿತು. ಜಿಲ್ಲೆಯೇ ಪ್ರತಿ ಪರೀಕ್ಷಾ ಕೇಂದ್ರಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಪರೀಕ್ಷೆ ಬರೆಯಲು ಆಗಮಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಆರತಿ ಬೆಳಗಿ ಪುಷ್ಪವೃಷ್ಟಿಗೈದು ಸ್ವಾಗತಿಸಲಾಯಿತು.

ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 15,843 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಇದರಲ್ಲಿ 15,476 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಶೇ. 97.68 ಹಾಜರಾತಿ ದಾಖಲಾಗಿದ್ದು, 367 ವಿದ್ಯಾರ್ಥಿಗಳು ಗೈರಾಗಿದ್ದು, ಶೇ. 2.31 ಗೈರು ಹಾಜರಾತಿಯಾಗಿದೆ.

ಗದಗ ಶಹರದ 12 ಪರೀಕ್ಷಾ ಕೇಂದ್ರಗಳಲ್ಲಿ 2656 ವಿದ್ಯಾರ್ಥಿಗಳು ಪ್ರಥಮ ಭಾಷೆ- 1ಕ್ಕೆ ನೋಂದಾಯಿಸಿಕೊಂಡಿದ್ದು, ಈ ಪೈಕಿ 2588 ಹಾಜರಾತಿ ಇದ್ದು, 68 ಗೈರಾಗಿದೆ. ಗದಗ ಗ್ರಾಮೀಣ ಭಾಗದ 10 ಪರೀಕ್ಷಾ ಕೇಂದ್ರಗಳಲ್ಲಿ 2659 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 2616 ವಿದ್ಯಾರ್ಥಿಗಳು ಹಾಜರಾಗಿ, 43 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಮುಂಡರಗಿ ತಾಲೂಕಿನ 8 ಪರೀಕ್ಷಾ ಕೇಂದ್ರಗಳಲ್ಲಿ 2184 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 2088 ಹಾಜರಾತಿ ಇದ್ದು, 96 ಗೈರಾಗಿದೆ. ನರಗುಂದ ತಾಲೂಕಿನ 5 ಪರೀಕ್ಷಾ ಕೇಂದ್ರಗಳಲ್ಲಿ 1468 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 1462 ಹಾಜರಾತಿ ಇದ್ದು, 6 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ರೋಣ ತಾಲೂಕಿನ 14 ಪರೀಕ್ಷಾ ಕೇಂದ್ರಗಳಲ್ಲಿ 4077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 3952 ವಿದ್ಯಾರ್ಥಿಗಳು ಹಾಜರಾಗಿ, 125 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶಿರಹಟ್ಟಿ ತಾಲೂಕಿನ 12 ಪರೀಕ್ಷಾ ಕೇಂದ್ರಗಳಲ್ಲಿ 2799 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 29 ವಿದ್ಯಾರ್ಥಿಗಳು ಗೈರಾಗಿದ್ದಾರೆ.ವಿದ್ಯಾರ್ಥಿಗಳಿಗೆ ಪೆನ್‌, ಸಿಹಿ ನೀಡಿ ಪರೀಕ್ಷೆಗೆ ಸ್ವಾಗತ

ರೋಣ: ತಾಲೂಕಿನ ಬೆಳವಣಕಿ ಗ್ರಾಮದ ಎಸ್.ವಿ. ಸಂಯುಕ್ತ ಪಪೂ ಕಾಲೇಜಿನ ಆಡಳಿತ ಮಂಡಳಿ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಪೆನ್‌ ಹಾಗೂ ಸಿಹಿ ನೀಡುವುದರ ಮೂಲಕ ಸ್ವಾಗತಿಸಲಾಯಿತು.ಈ ವೇಳೆ ನಿರ್ದೇಶಕರಾದ ಗೋಪಾಲರಡ್ಡಿ ಅಳಗವಾಡಿ, ಎಂ.ವಿ. ಪಾಟೀಲ, ಪ್ರಾ. ಎಸ್.ಎಸ್. ನರಗುಂದ, ಡಿ.ಎನ್. ಮರಡ್ಡಿ. ಕಂದಗಲ್, ಎಂ.ಬಿ. ಬಾವಿಕಟ್ಟಿ, ಬಿ.ಎಫ್. ಬೋದ್ಲೆಖಾನ, ಆರ್.ಬಿ. ಮುಂದಿನಮನಿ, ಬಿ.ಆರ್. ಧರ್ಮಟ್ಟಿ ಸೇರಿದಂತೆ ಸಿಬ್ಬಂದಿ ಇದ್ದರು.