ಸಾರಾಂಶ
ಕನ್ನಡಪ್ರಭ ವಾರ್ತೆಮಂಡ್ಯ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುಕ್ರವಾರ (ಮಾ.೨೧)ದಿಂದ ಆರಂಭಗೊಳ್ಳಲಿದ್ದು, ಜಿಲ್ಲೆಯಲ್ಲಿ ಒಟ್ಟು ೨೧೨೭೮ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿಯಾಗಿದ್ದಾರೆ. ಇವರಲ್ಲಿ ೧೦೬೬೧ ಬಾಲಕರು, ೯೮೩೫ ಬಾಲಕಿಯರು ಸೇರಿ ೨೦೪೬೯ ಹೊಸ ವಿದ್ಯಾರ್ಥಿಗಳಿದ್ದರೆ, ೭೮೨ ಮಂದಿ ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ.ಜಿಲ್ಲೆಯಲ್ಲಿ ಒಟ್ಟು ೪೭೮ ಪ್ರೌಢಶಾಲೆಗಳಿದ್ದು, ಅದರಲ್ಲಿ ೬೨ ಪ್ರೌಢಶಾಲೆಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಓರ್ವ ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು ಮುಖ್ಯ ಅಧೀಕ್ಷಕರನ್ನಾಗಿ ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ೩೫೦ ವಿದ್ಯಾರ್ಥಿಗಳು ನೋಂದಣಿಯಾಗಿದ್ದಲ್ಲಿ ಅಂತಹ ಪರೀಕ್ಷಾ ಕೇಂದ್ರಗಳಿಗೆ ಓರ್ವ ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಓರ್ವ ಪೇಪರ್ ಕಸ್ಟೋಡಿಯನ್‌ಗಳನ್ನು ನೇಮಕ ಮಾಡಲಾಗಿದೆ.
ಪರೀಕ್ಷಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಎಲ್ಲಾ ಕೊಠಡಿಗಳಿಗೆ ಸಿ.ಸಿ.ಟೀವಿ ಅಳವಡಿಸಲಾಗಿದೆ. ಪರೀಕ್ಷೆಯ ಚಲನ- ವಲನಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆಯಲಾಗಿರುವ ಕಂಟ್ರೋಲ್ ರೂಂನಲ್ಲಿ ಅಧಿಕಾರಿಗಳನ್ನು ನೇಮಿಸಿ ವೀಕ್ಷಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಅಕ್ರಮಗಳು ನಡೆಯದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತದಳ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಎಲ್ಲಾ ಬ್ಲಾಕ್‌ಗಳಿಗೆ ಉತ್ತರ ಪತ್ರಿಕೆಗಳು ಮಂಡಳಿಯಿಂದ ಸರಬರಾಜಾಗಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸ್ವೀಕರಿಸಿ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ನೀಡಲಾಗಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ.
ಜಿಲ್ಲೆಯಲ್ಲಿ ಯಾವುದೇ ವಿದ್ಯಾರ್ಥಿ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯಬಾರದು. ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲು ಉತ್ತಮ ಬೆಂಚ್ ಮತ್ತು ಡೆಸ್ಕ್ ವ್ಯವಸ್ಥೆ, ಮಕ್ಕಳಿಗೆ ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಶಿಕ್ಷಕರೂ ಸಹ ಮೊಬೈಲ್‌ನ್ನು ಪರೀಕ್ಷಾ ಕೊಠಡಿಗಳಿಗೆ ತೆಗೆದುಕೊಂಡು ಹೋಗದಂತೆ ನಿರ್ಬಂಧಿಸಲಾಗಿದೆ.ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಸೆಂಟರ್‌ಗಳು ತೆರೆಯದಂತೆ ಸೂಚಿಸಲಾಗಿದೆ.
ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ಸಂರಕ್ಷಿಸಿಡಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಮೊದಲನೇ ಮಹಡಿಯ ಒಂದು ಕೊಠಡಿಯನ್ನು ಸ್ಟ್ರಾಂಗ್ ರೂಮ್ ಆಗಿ ಮಾಡಲಾಗುವುದು. ಕೊಠಡಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ನಡೆಯುವ ದಿನ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡುವಂತೆ ಚೆಸ್ಕಾಂಗೆ ತಿಳಿಸಲಾಗಿದೆ.ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ನೋಂದಣಿಯಾದ ಹೊಸ ವಿದ್ಯಾರ್ಥಿಗಳುತಾಲೂಕುಶಾಲೆಗಳುಬಾಲಕರುಬಾಲಕಿಯರುಒಟ್ಟುಕೆ.ಆರ್.ಪೇಟೆ೫೯೧೪೧೯೧೨೬೦೨೬೭೯ಮದ್ದೂರು೯೧೧೮೫೨೧೬೯೫೩೫೪೭
ಮಳವಳ್ಳಿ೭೫೧೬೬೨೧೬೨೩೩೨೮೫ಮಂಡ್ಯ (ದಕ್ಷಿಣ)೩೩೧೬೭೬೧೫೭೧೩೨೪೭
ಮಂಡ್ಯ (ಉತ್ತರ)೭೦೬೫೨೬೧೩೧೨೬೫ನಾಗಮಂಗಲ೫೩೧೨೬೦೧೦೬೦೨೩೨೦
ಪಾಂಡವಪುರ೪೯೧೧೦೦೧೦೧೮೨೧೧೮ಶ್ರೀರಂಗಪಟ್ಟಣ೫೪೧೦೪೦೯೯೫೨೦೩೫
ಒಟ್ಟು೪೮೪೧೦೬೬೧೯೮೩೫೨೦೪೯೬