ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯ 27 ಕೇಂದ್ರಗಳಲ್ಲಿ ಸಿದ್ಧತೆ

| Published : Mar 25 2024, 12:49 AM IST

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯ 27 ಕೇಂದ್ರಗಳಲ್ಲಿ ಸಿದ್ಧತೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯ 171 ಪ್ರೌಢಶಾಲೆಯ 6,517 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 3,340 ಬಾಲಕರು ಮತ್ತು 3,177 ಬಾಲಕಿಯರು. ಮಡಿಕೇರಿ ತಾಲೂಕಿನ 43, ಸೋಮವಾರಪೇಟೆ ತಾಲೂಕಿನ 71 ಮತ್ತು ವಿರಾಜಪೇಟೆ ತಾಲೂಕಿನ 57 ಪ್ರೌಢಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.25ರಿಂದ ಏ.6ರ ವರೆಗೆ ನಡೆಯಲಿದೆ. ಜಿಲ್ಲೆಯ 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಡಿಕೇರಿ ತಾಲೂಕಿನ 8, ಸೋಮವಾರಪೇಟೆ ತಾಲೂಕಿನ 11, ವಿರಾಜಪೇಟೆ ತಾಲೂಕಿನ 8 ಕೇಂದ್ರಗಳಲ್ಲಿ ಪರೀಕ್ಷೆ ನೆರವೇರಲಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್ ಮಾಹಿತಿ ನೀಡಿ, ಜಿಲ್ಲೆಯ 171 ಪ್ರೌಢಶಾಲೆಯ 6,517 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 3,340 ಬಾಲಕರು ಮತ್ತು 3,177 ಬಾಲಕಿಯರು. ಮಡಿಕೇರಿ ತಾಲೂಕಿನ 43, ಸೋಮವಾರಪೇಟೆ ತಾಲೂಕಿನ 71 ಮತ್ತು ವಿರಾಜಪೇಟೆ ತಾಲೂಕಿನ 57 ಪ್ರೌಢಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ನಿಯೋಜಿಸಲು ಕೋರಲಾಗಿದೆ. ಹಾಗೆಯೇ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲು ಮನವಿ ಮಾಡಲಾಗಿದೆ. ಸಿಸಿಟಿವಿ ಅಳವಡಿಸಲಾಗುತ್ತದೆ. ಜೊತೆಗೆ ವೆಬ್‌ಕಾಸ್ಟ್ ಮಾಡಲಾಗುತ್ತದೆ ಎಂದು ಎಂ.ಚಂದ್ರಕಾಂತ್ ವಿವರಿಸಿದರು. ಡಯಟ್ ಹಿರಿಯ ಉಪನ್ಯಾಸಕರ ತಂಡವನ್ನು ರಚಿಸಿ ಜಾಗೃತಿ ದಳ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ: ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪ್ರೌಢಶಾಲೆ, ಸಂತ ಜೋಸೆಫರ ಪ್ರೌಢಶಾಲೆ, ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆ, ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜು, ಮೂರ್ನಾಡು ಪ್ರೌಢಶಾಲೆ, ಸಿದ್ದಾಪುರ ಪ್ರೌಢಶಾಲೆ, ಸಂಪಾಜೆ ಪ್ರೌಢಶಾಲೆ, ಸೋಮವಾರಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಒಎಲ್‌ವಿ ಆಂಗ್ಲ ಮಾಧ್ಯಮ ಶಾಲೆ, ಕುಶಾಲನಗರದ ಫಾತಿಮಾ ಪ್ರೌಢಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು, ಸೇಕ್ರೇಡ್ ಹಾರ್ಟ್ ಪ್ರೌಢಶಾಲೆ, ಸುಂಟಿಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೇರೀಸ್ ಪ್ರೌಢಶಾಲೆ, ಕೊಡ್ಲಿಪೇಟೆಯ ಪದವಿ ಪೂರ್ವ ಕಾಲೇಜು, ನೆಲ್ಯಹುದಿಕೇರಿ ಕರ್ನಾಟಕ ಪಬ್ಲಿಕ್ ಶಾಲೆ, ಹೆಬ್ಬಾಲೆಯ ಪದವಿ ಪೂರ್ವ ಕಾಲೇಜು, ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಅನ್ನಮ್ಮ ಪ್ರೌಢಶಾಲೆ, ಅಮ್ಮತ್ತಿಯ ಗುಡ್ ಸೆಫರ್ಡ್ ಶಾಲೆ(ಹೊಸ ಕೇಂದ್ರ), ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲೆ, ಗೋಣಿಕೊಪ್ಪದ ಸಂತ ಥಾಮಸ್ ಶಾಲೆ, ತಿತಿಮತಿಯ ಸರ್ಕಾರಿ ಪ್ರೌಢಶಾಲೆ, ಪೊನ್ನಂಪೇಟೆಯ ಪಬ್ಲಿಕ್ ಶಾಲೆ, ಶ್ರೀಮಂಗಲದ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.