ಇಲ್ಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಬುಧವಾರ ಒಟ್ಟು 612 ಮಕ್ಕಳ ಪೈಕಿ 6 ಮಕ್ಕಳು ಗೈರು ಹಾಜರಾಗಿದ್ದಾರೆ ಎಂದು ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಇಲ್ಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಬುಧವಾರ ಒಟ್ಟು 612 ಮಕ್ಕಳ ಪೈಕಿ 6 ಮಕ್ಕಳು ಗೈರು ಹಾಜರಾಗಿದ್ದಾರೆ ಎಂದು ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು ತಿಳಿಸಿದ್ದಾರೆ.ಸುಂಟಿಕೊಪ್ಪ ಪರೀಕ್ಷಾ ಕೇಂದ್ರದಲ್ಲಿ ನಿರ್ಮಲ ವಿದ್ಯಾಭವನ ಹಟ್ಟಿಹೊಳೆ, ಮಾದಾಪುರ ಸರ್ಕಾರಿ ಪ್ರೌಢಶಾಲೆ, ಗರಗಂದೂರು ಶ್ರೀಮತಿ ಡಿ.ಚೆನ್ನಮ್ಮ ಜೂನಿಯರ್ ಕಾಲೇಜು ಪ್ರೌಢಶಾಲೆ, ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ, ಸಂತ ಮೇರಿ ಆಂಗ್ಲ ಮಧ್ಯಮ ಶಾಲೆ, ಶಾಂತಿ ನಿಕೇತನ ಆಂಗ್ಲ ಮಾಧ್ಯಮ ಶಾಲೆ, ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಮಕ್ಕಳು ಸುಂಟಿಕೊಪ್ಪದ 2 ಪರೀಕ್ಷಾ ಕೇಂದ್ರಗಳಲ್ಲಿ ಆಗಮಿಸಿ ಪರೀಕ್ಷೆಯನ್ನು ಎದುರಿಸಿದರು. ಸುಂಟಿಕೊಪ್ಪದ ಎರಡು ಪರೀಕ್ಷಾ ಕೇಂದ್ರಗಳ ಪೈಕಿ ಸಂತ ಮೇರಿ ಕೇಂದ್ರ 298 ಮಕ್ಕಳ ಪೈಕಿ 4 ಮಕ್ಕಳು ಗೈರು ಹಾಜರಾಗಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ( ಪ್ರೌಢಶಾಲೆಯ ಕೇಂದ್ರದಲ್ಲಿ 142 ಮಕ್ಕಳ ಪೈಕಿ 140 ಮಕ್ಕಳು ಪರೀಕ್ಷೆಯನ್ನು ಎದುರಿಸಿದ್ದು 2 ಮಕ್ಕಳು ಗೈರುಹಾಜರಿಗೊಂಡಿದ್ದಾರೆ.ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಭದ್ರತೆಯನ್ನು ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್‌ರಾಜ್ ಹಾಗೂ ಸಿಬ್ಬಂದಿ ನೀಡಿದರು.