ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

| Published : Mar 25 2024, 12:46 AM IST

ಸಾರಾಂಶ

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯು ಮಾ.25ರಿಂದ ಆರಂಭವಾಗುತ್ತಿದ್ದು, ಜಿಲ್ಲೆಯ 82 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದರೊಂದಿಗೆ ಪರೀಕ್ಷೆಯನ್ನು ಸುಗಮವಾಗಿ ನಡೆಸಿಕೊಡಲು ಎಲ್ಲ ಸಿದ್ಧತೆ ಕೈಗೊಂಡಿರುವುದಾಗಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ದಾವಣಗೆರೆ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯು ಮಾ.25ರಿಂದ ಆರಂಭವಾಗುತ್ತಿದ್ದು, ಜಿಲ್ಲೆಯ 82 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದರೊಂದಿಗೆ ಪರೀಕ್ಷೆಯನ್ನು ಸುಗಮವಾಗಿ ನಡೆಸಿಕೊಡಲು ಎಲ್ಲ ಸಿದ್ಧತೆ ಕೈಗೊಂಡಿರುವುದಾಗಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 166 ಸರ್ಕಾರಿ, 172 ಅನುದಾನಿತ, 134 ಅನುದಾನ ರಹಿತ ಸೇರಿ 472 ಪ್ರೌಢಶಾಲೆಗಳಿಂದ 11131 ಗಂಡು ಮಕ್ಕಳು, 11130 ಹೆಣ್ಣು ಮಕ್ಕಳು ಸೇರಿ 22261 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ 41 ಕೇಂದ್ರಗಳು ಸರ್ಕಾರಿ ಪ್ರೌಢಶಾಲೆ, 35 ಅನುದಾನಿತ, 6 ಅನುದಾನ ರಹಿತ ಪ್ರೌಢಶಾಲೆಗಳು ಸೇರಿ 82 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ತಾಲೂಕುವಾರು ವಿವರದನ್ವಯ ಚನ್ನಗಿರಿ 16, ದಾವಣಗೆರೆ ಉತ್ತರ 14, ದಾವಣಗೆರೆ ದಕ್ಷಿಣ 17, ಹರಿಹರ 12, ಹೊನ್ನಾಳಿ 11 ಹಾಗೂ ಜಗಳೂರು ತಾಲೂಕಿನ 12 ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದೆ. ಒಟ್ಟು ಪರೀಕ್ಷಾ ಕೇಂದ್ರಗಳಲ್ಲಿ 40 ಗ್ರಾಮೀಣ, 42 ನಗರ, ಪಟ್ಟಣದ ಕೇಂದ್ರಗಳಾಗಿವೆ. ಪರೀಕ್ಷೆ ನಡೆಯುತ್ತಿರುವ ಎಲ್ಲ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸಲಾಗುತ್ತಿದ್ದು, ಇದರಲ್ಲಿ 10 ಕೇಂದ್ರಗಳನ್ನು ಸೂಕ್ಷ್ಮ, ಅತಿಸೂಕ್ಷ್ಮ ಎಂದು ಗುರುತಿಸಿದ್ದು, ಇಲ್ಲಿ ವಿಶೇಷ ಭದ್ರತೆ ಮತ್ತು ನಿಗಾ ವಹಿಸಲು ಅವರು ಸೂಚನೆ ನೀಡಿದ್ದಾರೆ.

ಪರೀಕ್ಷಾ ವೇಳಾಪಟ್ಟಿ:

ಮಾ.25ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಪ್ರಥಮ ಭಾಷೆ ಪರೀಕ್ಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ ಎನ್.ಸಿ.ಇ.ಆರ್.ಟಿ, ಸಂಸ್ಕೃತ, ಮಾ.27ರಂದು ಸಮಾಜ ವಿಜ್ಞಾನ, ಮಾ.30ರಂದು ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ 2ರಿಂದ ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಏ.2ರಂದು ಗಣಿತ, ಸಮಾಜಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್, ಏ.3ರಂದು ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್, ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್, ಏ.4ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಉರ್ದು, ತುಳು, ಅರೆಬಿಕ್, ಸಂಸ್ಕೃತ, ಮತ್ತು ಏ.6ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದಾರೆ.

- - - (-ಸಾಂದರ್ಭಿಕ ಚಿತ್ರ)