ಅರಸೀಕೆರೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು; 3,442 ವಿದ್ಯಾರ್ಥಿಗಳು ಹಾಜರು

| Published : Mar 25 2024, 12:46 AM IST

ಅರಸೀಕೆರೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು; 3,442 ವಿದ್ಯಾರ್ಥಿಗಳು ಹಾಜರು
Share this Article
  • FB
  • TW
  • Linkdin
  • Email

ಸಾರಾಂಶ

ಮಾ 25 ರಿಂದ ಏ 6 ರ ವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅರಸೀಕೆರೆಯ 3,442 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು ಅವರಿಗೆ 11 ಕೇಂದ್ರಗಳಲ್ಲಿಯೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಮಾಹಿತಿ । ಇಂದಿನಿಂದ ಏ.6ರ ವರೆಗೆ ಪರೀಕ್ಷೆಕನ್ನಡಪ್ರಭ ವಾರ್ತೆ ಅರಸೀಕೆರೆ

ಮಾ 25 ರಿಂದ ಏ 6 ರ ವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿನ 3,442 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು ಅವರಿಗೆ 11 ಕೇಂದ್ರಗಳಲ್ಲಿಯೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಹೇಳಿದರು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು 1669 ವಿದ್ಯಾರ್ಥಿಗಳು 1273 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ, ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಸಿಸಿ ಕ್ಯಾಮೆರಾ, ಕುಡಿಯುವ ನೀರಿನ ವ್ಯವಸ್ಥೆ, ಆಸನಗಳ ವ್ಯವಸ್ಥೆ, ಮೂಲಭೂತ ಸೌಕರ್ಯ ಒದಗಿಸಲಾಗಿದೆ. ಇಬ್ಬರು ಕಸ್ತೋಡಿಯನ್, ಮುಖ್ಯ ಅಧಿಕ್ಷಕರು, ಉಪ ಅಧೀಕ್ಷಕರು, ಸ್ಥಾನಿಕ ಜಾಗೃತ ದಳ ಸೇರಿದಂತೆ 250 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಬಾಣಾವರ, ಜಾವಗಲ್, ಚಿಂದೇನಹಳ್ಳಿ ಗಡಿ ಮತ್ತು ಹಾರನಹಳ್ಳಿ ಈ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ 350 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಅದಕ್ಕೆ ಅನುಗುಣವಾಗಿ ಸಜ್ಜುಗೊಳಿಸಲಾಗಿದೆ ಎಂದರು

ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೇ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರತಿ ಶಾಲೆಯಲ್ಲಿ ವಿಶೇಷ ತರಗತಿಗಳನ್ನು ನಡೆಸಲಾಗಿದೆ, ಘಟಕ ಪರೀಕ್ಷೆ ಮತ್ತು ರಸಪ್ರಶ್ನೆ ಕಾರ್ಯಕ್ರಮ ನಡೆಸಲಾಗಿದೆ. ಅಲ್ಲದೆ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯವನ್ನು ತುಂಬುವ ಸಲುವಾಗಿ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರಗಳನ್ನು ನಡೆಸಲಾಗಿದೆ, ವಾರ್ಷಿಕ ಪರೀಕ್ಷೆಗೆ ಪೂರ್ವಭಾವಿಯಾಗಿ ನಾಲ್ಕು ಪರೀಕ್ಷೆಗಳನ್ನು ನಡೆಸಲಾಗಿದೆ, ಶಾಲಾ ಹಂತದಲ್ಲಿ ರಾಜ್ಯ ಮಟ್ಟದಿಂದಲೂ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗಿತ್ತು ಎಂದು ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿದರು