ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೇಲ್ವಿಚಾರಕ ಅಮಾನತು

| Published : Mar 28 2024, 12:48 AM IST

ಸಾರಾಂಶ

ಹರಿಹರ ತಾಲೂಕಿನಲ್ಲಿ ಎಂಕೆಇಟಿಎಲ್‌ಕೆಯಲ್ಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅವರನ್ನು ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಅಮಾನತುಗೊಳಿಸಿ, ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ. ಇಟ್ನಾಳ್ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ: ಹರಿಹರ ತಾಲೂಕಿನಲ್ಲಿ ಎಂಕೆಇಟಿಎಲ್‌ಕೆಯಲ್ಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅವರನ್ನು ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಅಮಾನತುಗೊಳಿಸಿ, ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ. ಇಟ್ನಾಳ್ ಆದೇಶ ಹೊರಡಿಸಿದ್ದಾರೆ.

ಬುಧವಾರ ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ವೇಳೆ ಕೊಠಡಿಯಲ್ಲಿ ವಿದ್ಯಾರ್ಥಿಗಳು ಪರಸ್ಪರ ಸಂಭಾಷಣೆಯಲ್ಲಿ ತೊಡಗಿದ್ದರು. ಈ ವೇಳೆ ಮೇಲ್ವಿಚಾರಕರಾಗಿ ಪರೀಕ್ಷಾ ಶಿಸ್ತು, ಗೋಪ್ಯತೆ ಕಾಪಾಡುವಲ್ಲಿ ರಿಯಾಜ್‌ ವಿಫಲವಾಗಿದ್ದರು. ಈ ಹಿನ್ನೆಲೆ ಅಮಾನತು ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದ ಕೊಠಡಿಯಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದ್ದು, ನೇರ ದೃಶ್ಯಾವಳಿಗಳನ್ನು ಶಿಕ್ಷಣ ಇಲಾಖೆ ಆಯುಕ್ತರು ವೀಕ್ಷಣೆ ಮಾಡಿರುತ್ತಾರೆ. ಆಯುಕ್ತರು ನೀಡಿದ ನಿರ್ದೇಶನದ ಮೇರೆಗೆ ಹರಿಹರ ತಾಲೂಕು ಬನ್ನಿಕೋಡು ಕರ್ನಾಟಕ ಪಬ್ಲಿಕ್ ಸ್ಕೂಲ್ ಚಿತ್ರಕಲಾ ಶಿಕ್ಷಕ ರಿಯಾಜ್ ಅಹಮದ್ ಅವರನ್ನು ಅಮಾನತು ಮಾಡಲಾಗಿದೆ.