ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸುರಕ್ಷತೆಯ ದೃಷ್ಟಿಯಿಂದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಹಾಕಲಾದ ದಪ್ಪನೆಯ ವಾಟರ್ ಮಾರ್ಕ್‌ನಿಂದಾಗಿ ಶನಿವಾರ ನಡೆದ ಗಣಿತ ಪರೀಕ್ಷೆಯಲ್ಲಿ ಅಕ್ಷರಗಳು ಕಾಣದೆ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.

ಬಂಟ್ವಾಳ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸುರಕ್ಷತೆಯ ದೃಷ್ಟಿಯಿಂದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಹಾಕಲಾದ ದಪ್ಪನೆಯ ವಾಟರ್ ಮಾರ್ಕ್‌ನಿಂದಾಗಿ ಶನಿವಾರ ನಡೆದ ಗಣಿತ ಪರೀಕ್ಷೆಯಲ್ಲಿ ಅಕ್ಷರಗಳು ಕಾಣದೆ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.

ಪ್ರಶ್ನೆ ಪತ್ರಿಕೆಗಳ ನಕಲಿಗೆ ಅವಕಾಶ ದೊರಕಬಾರದು ಎನ್ನುವ ಉದ್ದೇಶಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯು ಕೋಡ್ ಮಾದರಿಯ ಸಂಖ್ಯೆಯನ್ನು ವಾಟರ್‌ಮಾರ್ಕ್ ರೀತಿಯಲ್ಲಿ ಪ್ರಶ್ನೆ ಪತ್ರಿಕೆಗಳಿಗೆ ಹಾಕುತ್ತಿದೆ.ಶನಿವಾರ ನಡೆದ ಗಣಿತ ಪರೀಕ್ಷೆಯಲ್ಲಿ ಸಂಖ್ಯೆಗಳೇ ಕಾಣದಂತೆ ವಾಟರ್ ಮಾರ್ಕ್ ಹಾಕಲಾಗಿದೆ. ಸಂಖ್ಯೆಗಳೇ ಕಾಣದಿದ್ದರೆ ಉತ್ತರ ಬರೆಯುವುದು ಹೇಗೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.

ಕಳೆದ ವರ್ಷ ಕೂಡ ಇದೇ ಮಾದರಿಯಲ್ಲಿ ವಾಟರ್ ಮಾರ್ಕ್ ಹಾಕಲಾಗಿತ್ತು, ಈ ಬಾರಿ ಇನ್ನೂ ದಪ್ಪ ಅಕ್ಷರಗಳಲ್ಲಿ ಹಾಕಲಾಗಿದೆ, ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ. ಕನ್ನಡಮಾಧ್ಯಮದ ಪ್ರಶ್ನೆಪತ್ರಿಕೆಗಳಲ್ಲಿ ಮಾತ್ರ ಈ ಸಮಸ್ಯೆ ಕಂಡು ಬಂದಿದೆ , ಇಂಗ್ಲೀಷ್ ಮಾಧ್ಯಮದ ಪ್ರಶ್ನೆಪತ್ರಿಕೆಗಳು ಸ್ಪಷ್ಟವಾಗಿತ್ತು ಎಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ಲಕ್ಷ್ಮೀನಾರಾಯಣ ಅವರು ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.