ಎಸ್ಸೆಸ್ಸೆಲ್ಸಿ: ಸಾಧನೆಗೈದವರಿಗೆ ಸಚಿವ ಕೆ.ವೆಂಕಟೇಶ್‌ ಸನ್ಮಾನ

| Published : May 15 2025, 01:54 AM IST

ಸಾರಾಂಶ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ 10 ವಿದ್ಯಾರ್ಥಿಗಳನ್ನು ಚಾಮರಾಜನಗರದಲ್ಲಿ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸನ್ಮಾನಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ 10 ವಿದ್ಯಾರ್ಥಿಗಳನ್ನು ನಗರದಲ್ಲಿ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸನ್ಮಾನಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ಸೆಸ್ಸೆಲ್ಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಹಾರ ಹಾಕಿ, ಫಲ ತಾಂಬೂಲ ನೀಡಿ ಗೌರವಿಸಿದರು. ಮುಂದಿನ ವಿದ್ಯಾರ್ಥಿ ಜೀವನದಲ್ಲಿಯೂ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಸಚಿವರು ಹಾರೈಸಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರು, ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಪಂ ಸಿಇಒ ಮೋನಾರೋತ್, ಎಸ್ಪಿ ಡಾ.ಕವಿತಾ, ಎಡಿಸಿ ಗೀತಾ ಹುಡೇದ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಇತರರು ಇದ್ದರು.

ಗುಂಡ್ಲುಪೇಟೆ ತಾಲೂಕಿನ ಆದರ್ಶ ವಿದ್ಯಾಲಯದ ಹರ್ಷಿಣಿ ಎಂ, ರಾಜೇಶ್ವರಿ, ಕೊಳ್ಳೇಗಾಲದ ಶ್ರೀ ವಾಸವಿ ವಿದ್ಯಾ ಕೇಂದ್ರ ಇಂಗ್ಲೀಷ್ ಮಾಧ್ಯಮದ ಪ್ರೌಢಶಾಲೆಯ ಶರ್ಮಿಳಾ.ಆರ್, ಬೀಬಿ ಸೂಫಿಯಾ, ಚಾಮರಾಜನಗರದ ಆದರ್ಶ ವಿದ್ಯಾಲಯದ ಪೂಜಾ.ಎನ್, ಯಶಸ್ವಿನಿ.ಜೆ, ಹನೂರಿನ ಕ್ರಿಸ್ತರಾಜ ಪ್ರೌಢಶಾಲೆಯ ಕೃತಿಕ್.ಎಲ್, ಹಿತಶ್ರೀ. ಜಿ, ಕೊಳ್ಳೇಗಾಲ ಆದರ್ಶ ವಿದ್ಯಾಲಯದ ಗಾನವಿ.ಆರ್, ಕೊಳ್ಳೇಗಾಲ ತಾಲೂಕು ಕಾಮಗೆರೆಯ ಸಂತ ಫ್ರಾನ್ಸಿಸ್ ಗ್ಸೇವಿಯರ್ ಪ್ರೌಢಶಾಲೆಯ ರಿತು ನಿಸ್ಸಿ.ಎ.ಕೆ, ಸನ್ಮಾನ ಸ್ವೀಕರಿಸಿದರು.