ಸಾರಾಂಶ
ಸರ್ಕಾರ ಈ ಬಾರಿ ಮೂರು ಪರೀಕ್ಷೆಗಳನ್ನು ಪರಿಚಯಿಸಿದ್ದು ಮಕ್ಕಳು ತಮ್ಮ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಇನ್ನಷ್ಟು ಅವಕಾಶ ಲಭಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು.
-ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರಿಗೆ ಆಡಳಿತಾಧಿಕಾರಿ ರಿಶ್ವಂತ್ ರಾಮ್ ಅಭಿನಂದನೆ
ಕನ್ನಡಪ್ರಭ ವಾರ್ತೆ ದಾಬಸ್ಪೇಟೆಎಸ್ಆರ್ಎಸ್ ವಿದ್ಯಾನಿಕೇತನ ಶಾಲೆಗೆ ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿಪರೀಕ್ಷೆಯಲ್ಲಿ ಶೇ.98ರಷ್ಟು ಫಲಿತಾಂಶ ಲಭಿಸಿದ್ದು, ವಿದ್ಯಾರ್ಥಿಗಳ ಸಾಧನೆ ಸಂತಸ ತಂದಿದೆ ಎಂದು ಎಸ್‌ಆರ್‌ಎಸ್ ವಿದ್ಯಾನಿಕೇತನ ಶಾಲೆಯ ಆಡಳಿತಾಧಿಕಾರಿ ರಿಶ್ವಂತ್ ರಾಮ್ ತಿಳಿಸಿದರು.
ಫಲಿತಾಂಶ ಕುರಿತು ಮಾತನಾಡಿದ ಅವರು, ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಆಂಗ್ಲ ಮಾಧ್ಯಮದ ಶಿಕ್ಷಣ ನೀಡುತ್ತಿದ್ದು 9 ಹಾಗೂ 10ನೇ ತರಗತಿಗೆ ಉಚಿತ ಶಿಕ್ಷಣ ನೀಡುವ ಶಾಲೆ ಎಂಬ ಹೆಮ್ಮೆ ಇದೆ. ಈ ಬಾರಿ ಪರೀಕ್ಷಾ ಕ್ರಮಗಳ ಬದಲಾವಣೆಯ ಹೊರತಾಗಿಯೂ ನಮ್ಮ ಶಾಲೆಯ ವಿದ್ಯಾರ್ಥಿಗಳ ಫಲಿತಾಂಶ ಹೆಮ್ಮೆ ಪಡುವಂತೆ ಮಾಡಿದೆ. ವಿದ್ಯಾರ್ಥಿಗಳ ಸಾಧನೆಗೆ ನುರಿತ ಶಿಕ್ಷಕರು ಶ್ರಮ ವಹಿಸಿದ್ದು ಸಂಜೆ ತರಗತಿಗಳು, ವಿಶೇಷ ತರಗತಿಗಳು ಸಹಕಾರಿಯಾಗಿವೆ ಎಂದರು.ಶಾಲೆಯ ಸಂಸ್ಥಾಪಕ ಜಯರಾಮ್ ಮಾತನಾಡಿ, ಸರ್ಕಾರ ಈ ಬಾರಿ ಮೂರು ಪರೀಕ್ಷೆಗಳನ್ನು ಪರಿಚಯಿಸಿದ್ದು ಮಕ್ಕಳು ತಮ್ಮ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಇನ್ನಷ್ಟು ಅವಕಾಶ ಲಭಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಉತ್ತಮ ಫಲಿತಾಂಶಕ್ಕೆ ಶ್ರಮಿಸಿದ ಶಿಕ್ಷಕ ವೃಂದ, ಮಕ್ಕಳು, ಪೋಷಕರನ್ನು ಅಭಿನಂದಿಸಿದರು.
ಶಾಲೆಯ ಪಲ್ಲವಿ 568, ರಿಷಿತಾ 548, ವಂಶಿತಾ 546, ಪೂರ್ವಿಕ್ 530, ಗಣೇಶ್ 519, ಶಶಾಂಕ್ 491, ಶರ‍್ವಿ ವಿಶಾಲ್ 487, ಸ್ವಾತಿ 469 ಸೇರಿದಂತೆ ಎಲ್ಲಾ ಮಕ್ಕಳು ಉತ್ತಮ ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದು ಅವರನ್ನು ಸಂಸ್ಥೆಯ ನಿರ್ದೇಶಕರಾದ ಹೇಮಾ, ಜಯಶ್ರೀ, ಮುಖ್ಯ ಶಿಕ್ಷಕಿ ಮೀನಾಕುಮಾರಿ, ಶಿಕ್ಷಕರಾದ ಶೋಭಾ, ಲಕ್ಷ್ಮೀದೇವಿ, ಯಮುನಾ, ಗಂಗರಾಜು, ಪ್ರದೀಪ್ ಕುಮಾರ್ ಅಭಿನಂದಿಸಿದ್ದಾರೆ.13ಪೋಟೋ7 :ದಾಬಸ್‌ಪೇಟೆಯ ಎಸ್‌ಆರ್‌ಎಸ್ ವಿದ್ಯಾನಿಕೇತನ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಹಾಗೂ ಶಿಕ್ಷಕರು ಅಭಿನಂದಿಸಿದರು.