ಜ.21ರಂದು ಎಸ್ಸೆಸ್ಸೆಲ್ಸಿ-ಪಿಯುಸಿ ಪ್ರತಿಭೆಗಳಿಗೆ ಪುರಸ್ಕಾರ

| Published : Jan 17 2024, 01:48 AM IST

ಜ.21ರಂದು ಎಸ್ಸೆಸ್ಸೆಲ್ಸಿ-ಪಿಯುಸಿ ಪ್ರತಿಭೆಗಳಿಗೆ ಪುರಸ್ಕಾರ
Share this Article
  • FB
  • TW
  • Linkdin
  • Email

ಸಾರಾಂಶ

2022-23ನೇ ಶೈಕ್ಷಣಿಕ ಸಾಲಿನಲ್ಲಿ ಶೇ.90 ಹಾಗೂ ಅದಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದಿರುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಸತ್ಕಾರ.

ಕನ್ನಡಪ್ರಭ ವಾರ್ತೆ ಕಲಬುರಗಿ

ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಜ.21ರಂದು ಬೆ.10ಕ್ಕೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ್ ಮೋದಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2022-23ನೇ ಶೈಕ್ಷಣಿಕ ಸಾಲಿನಲ್ಲಿ ಶೇ.90 ಹಾಗೂ ಅದಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದಿರುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಂದು ಸನ್ಮಾನಿಸಲಾಗುವುದು ಎಂದರು.

ಈ ಬಾರಿ ಎಸ್ಸೆಸ್ಸೆಲ್ಸಿ ವಿಭಾಗದಲ್ಲಿ 108 ಹಾಗೂ ಪಿಯುಸಿ ವಿಭಾಗದಲ್ಲಿ 87 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ, ಇ‍ರಿಗೆ ತಲಾ 2 ಸಾವಿರ ರು. ನಗದು ಹಣ, ಫಲಕ, ಸ್ಮರಣಿಕೆನೀಡಿ ಗೌರವಿಸಲಾಗುತ್ತದೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳ ರಾಜ್ಯದ ವೀರಶೈವ-ಲಿಂಗಾಯತ ಸಮುದಾಯದ ಏಳು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಈ ಉದ್ದೇಶಕ್ಕಾಗಿ ಮಹಾಸಭಾ ವಾರ್ಷಿಕ ಎರಡು ಕೋಟಿ ರೂ. ನೀಡುತ್ತಿದೆ ಎಂದು ಮೋದಿ ವಿವರಿಸಿದರು.

ಸಮಾರಂಭದಲ್ಲಿ ವಿವಿಧ ಮಠಗಳ ಮಠಾಧೀಶರು, ಸಚಿವರು, ಶಾಸಕರು ಹಾಗೂ ವೀರಶೈವ-ಲಿಂಗಾಯತ ಸಮಾಜದ ಹಿರಿಯರು ಪಾಲ್ಗೊಳ್ಳಲಿದ್ದಾರೆಂದರು. ಪ್ರತಿಭಾ ಪುರಸ್ಕಾರ ಸ್ವಾಗತ ಸಮಿತಿಯ ಅಧ್ಯಕ್ಷ ರಾಜುಗೌಡ ನಾಗನಳ್ಳಿ, ಮಹಾಸಭಾ ಪದಾಧಿಕಾರಿಗಳಾದ ಸಿದ್ದುಗೌಡ ಅಫಜಲಪುರಕರ್, ಸೋಮಶೇಖರ ಹಿರೇಮಠ, ಚೆನ್ನಪ್ಪ ದಿಗ್ಗಾವಿ, ಶಂಭುಲಿಂಗ ಪಾಟೀಲ್, ಭೀಮಾಶಂಕರ ಮಿಟೇಕರ್ ಹಾಗೂ ಜ್ಯೋತಿ ಮರಗೋಳ ಇದ್ದರು.