ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಪ್ರಶಂಸನೀಯ: ಶಾಸಕ ಆರಗ

| Published : May 15 2024, 01:36 AM IST

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಪ್ರಶಂಸನೀಯ: ಶಾಸಕ ಆರಗ
Share this Article
  • FB
  • TW
  • Linkdin
  • Email

ಸಾರಾಂಶ

ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯಾಗಿ 615 ಅಂಕ ಗಳಿಸುವ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪಟ್ಟಣದ ಸರ್ಕಾರಿ ಬಾಲಿಕಾ ಪ್ರೌಢಶಾಲೆಯ ಡಿ. ರಜತ ಮನೆಗೆ ತೆರಳಿ ಆಕೆಗೆ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ನಂತರ 620 ಅಂಕಗಳ ಮೂಲಕ ರಾಜ್ಯಕ್ಕೆ 6ನೇ ಸ್ಥಾನ ಗಳಿಸಿದ ವಾಗ್ದೇವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಛಾಯಾರನ್ನೂ ಅವರ ಮನೆಗೆ ಹೋಗಿ ಗೌರವಿಸಿ ಅಭಿನಂದಿಸಿದರು.

ಕನ್ನಡಪ್ರಭ ವಾರ್ತೆ ತೀರ್ಥಹಳ್ಳಿ

ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ ಫಲಿತಾಂಶ ಹೆಮ್ಮೆ ಪಡುವಂತಿದೆ. ತಾಲೂಕಿನ ಸರ್ಕಾರಿ ಸೇರಿದಂತೆ ಎಲ್ಲಾ 43 ಪ್ರೌಢಶಾಲೆಗಳೂ ಉತ್ತಮ ಫಲಿತಾಂಶ ಪಡೆದಿರುವುದು ಕಳೆದ ಬಾರಿ 9 ನೇ ಸ್ಥಾನದಲ್ಲಿದ್ದ ಜಿಲ್ಲೆಯ ಫಲಿತಾಂಶದಲ್ಲಿ ಸುಧಾರಣೆಯಾಗಿರುವುದು ಪ್ರಶಂಸನೀಯ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಮಂಗಳವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯಾಗಿ 615 ಅಂಕ ಗಳಿಸುವ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪಟ್ಟಣದ ಸರ್ಕಾರಿ ಬಾಲಿಕಾ ಪ್ರೌಢಶಾಲೆಯ ಡಿ. ರಜತ ಮನೆಗೆ ತೆರಳಿ ಆಕೆಗೆ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ನಂತರ 620 ಅಂಕಗಳ ಮೂಲಕ ರಾಜ್ಯಕ್ಕೆ 6ನೇ ಸ್ಥಾನ ಗಳಿಸಿದ ವಾಗ್ದೇವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಛಾಯಾರನ್ನೂ ಅವರ ಮನೆಗೆ ಹೋಗಿ ಗೌರವಿಸಿ ಅಭಿನಂದಿಸಿದರು.ತಾಲೂಕು ಪ್ರಥಮ ಸ್ಥಾನ ಅಭಿಮಾನದ ಸಂಗತಿ:

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಉತ್ತಮ ಫಲಿತಾಂಶ ಬರುವುದಕ್ಕೆ ಕಾರಣರಾದ ಶಾಲಾಭಿವೃದ್ಧಿ ಸಮಿತಿ, ಪೋಷಕರು ಮತ್ತು ಭೋದಕ ವರ್ಗದವರ ಮತು ವಿದ್ಯಾರ್ಥಿಗಳ ಶ್ರಮ ಕಾರಣವಾಗಿದ್ದು ಎಲ್ಲರೂ ಅಭಿನಂದನಾರ್ಹರಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನಕ್ಕೆ ಏರಿರುವುದು ಅದರಲ್ಲೂ ಮುಖ್ಯವಾಗಿ ಜಿಲ್ಲೆಯಲ್ಲಿ ಎಂದಿನಂತೆ ನಮ್ಮ ತಾಲೂಕು ಪ್ರಥಮ ಸ್ಥಾನವನ್ನೂ ಗಳಿಸಿರುವುದು ಅಭಿಮಾನದ ಸಂಗತಿಯಾಗಿದೆ ಎಂದರು.

------------