ಕೋಡಿಮಠ ಬಸವೇಶ್ವರ ಪ್ರೌಢಶಾಲೆ ಹಾಗೂ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ನಡೆದ ವಿಷಯವಾರು ಬ್ಲೂಪ್ರಿಂಟ್ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದ ಅವರು ಈಗಾಗಲೇ ವಿಷಯವಾರು ಬ್ಲೂಪ್ರಿಂಟ್ ಮತ್ತು ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆಗೊಂಡಿದೆ. ಇದನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಉಪಯೋಗಿಸಿ, ವಿದ್ಯಾರ್ಥಿಗಳು ಕನಿಷ್ಠ 40, 50 ಅಂಕಗಳನ್ನು ಸುರಕ್ಷಿತವಾಗಿ ಪಡೆಯುವಂತೆ ತಯಾರಿಸಬೇಕು. ಆಂತರಿಕ ಅಂಕಗಳು ಸೇರಿಕೊಂಡು ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಲು ಇದು ಸಹಕಾರಿಯಾಗುತ್ತದೆ ಎಂದು ಹೇಳಿದರು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಗಮನ, ಪ್ರತಿಭಾವಂತರಿಗೆ ಮಾರ್ಗದರ್ಶನ ನೀಡುವಂತೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

2025- 26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೋಂದಾಯಿತ ವಿದ್ಯಾರ್ಥಿಗಳಲ್ಲಿ ಯಾರೂ ಗೈರು ಆಗದಂತೆ ನೋಡಿಕೊಳ್ಳುವುದು ಪ್ರತಿಯೊಂದು ಶಾಲೆಯ ಪ್ರಮುಖ ಜವಾಬ್ದಾರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‌ ಕುಮಾರ್‌ ಹೇಳಿದರು.

ನಗರದ ಕೋಡಿಮಠ ಬಸವೇಶ್ವರ ಪ್ರೌಢಶಾಲೆ ಹಾಗೂ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ನಡೆದ ವಿಷಯವಾರು ಬ್ಲೂಪ್ರಿಂಟ್ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದ ಅವರು ಈಗಾಗಲೇ ವಿಷಯವಾರು ಬ್ಲೂಪ್ರಿಂಟ್ ಮತ್ತು ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆಗೊಂಡಿದೆ. ಇದನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಉಪಯೋಗಿಸಿ, ವಿದ್ಯಾರ್ಥಿಗಳು ಕನಿಷ್ಠ 40, 50 ಅಂಕಗಳನ್ನು ಸುರಕ್ಷಿತವಾಗಿ ಪಡೆಯುವಂತೆ ತಯಾರಿಸಬೇಕು. ಆಂತರಿಕ ಅಂಕಗಳು ಸೇರಿಕೊಂಡು ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಲು ಇದು ಸಹಕಾರಿಯಾಗುತ್ತದೆ ಎಂದು ಹೇಳಿದರು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಗಮನ, ಪ್ರತಿಭಾವಂತರಿಗೆ ಮಾರ್ಗದರ್ಶನ ನೀಡುವಂತೆ ಸೂಚಿಸಿದರು.

ಯಾರೇ ವಿದ್ಯಾರ್ಥಿ ಪರೀಕ್ಷೆಗೆ ಗೈರಾಗಬಾರದು. ಗೈರಾದರೆ ಅವರು ಮುಂದಿನ ಪರೀಕ್ಷೆಯನ್ನೂ ಸುಲಭವಾಗಿ ಪಾಸ್ ಮಾಡಲು ಸಾಧ್ಯವಿಲ್ಲ. ಶಿಕ್ಷಕರು ವಿದ್ಯಾರ್ಥಿಗಳನ್ನು ಸಂಪರ್ಕಿಸಿ ತರಗತಿಗೆ ಹಾಗೂ ಪರೀಕ್ಷೆಗೆ ಹಾಜರಾಗುವಂತೆ ಮನವೊಲಿಸಬೇಕು ಎಂದು ಎಚ್ಚರಿಸಿದರು. ಎಸ್‌ಎಸ್‌ಎಲ್‌ಸಿ ಜೀವನದ ಮಹತ್ವದ ಹಂತವಾಗಿರುವುದರಿಂದ ಪ್ರತಿ ವಿದ್ಯಾರ್ಥಿಯೂ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗುವಂತೆ ನೋಡಿಕೊಳ್ಳಬೇಕೆಂದು ಹೇಳಿದರು.

ಹಾಸನ ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಉಪಯೋಜನಾಧಿಕಾರಿ ಚಂದ್ರಯ್ಯ ಮಾತನಾಡಿ, ಒಬ್ಬ ವಿದ್ಯಾರ್ಥಿ ಗೈರಾದರೂ ಶಾಲೆಯ ಶೇ. 100 ಫಲಿತಾಂಶಕ್ಕೆ ಹಿನ್ನಡೆ. ಪ್ರತಿಭಾವಂತ ವಿದ್ಯಾರ್ಥಿಗಳ ಜೊತೆ ಕಲಿಕೆಯಲ್ಲಿ ಹಿಂದುಳಿದವರಿಗೆ ಹೆಚ್ಚಿನ ಆದ್ಯತೆ ನೀಡಿ. ಬ್ಲೂಪ್ರಿಂಟ್ ಪ್ರಶ್ನಾಪತ್ರಿಕೆಗಳು ಯಾವ ಪ್ರಶ್ನೆಗೆ ಹೆಚ್ಚಿನ ಒತ್ತುಕೊಡಬೇಕು ಎಂಬುದನ್ನು ವಿದ್ಯಾರ್ಥಿಗಳು ಸುಲಭವಾಗಿ ತಿಳಿಯುವಂತೆ ರಚಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ನಟರಾಜ್ ಸೇರಿದಂತೆ ಶಿಕ್ಷಕರು ಹಾಜರಿದ್ದರು.