ಎಸ್‌ಎಸ್‌ಎಂ ಜನ್ಮದಿನ: ಬಾಸ್ಕೆಟ್ ಬಾಲ್ ಪಂದ್ಯಕ್ಕೆ ಚಾಲನೆ

| Published : Sep 22 2024, 01:54 AM IST

ಎಸ್‌ಎಸ್‌ಎಂ ಜನ್ಮದಿನ: ಬಾಸ್ಕೆಟ್ ಬಾಲ್ ಪಂದ್ಯಕ್ಕೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ದಾವಣಗೆರೆಯಲ್ಲಿ ಎಸ್‌ಎಸ್‌ಎಂ ಜನ್ಮದಿನದ ಅಂಗವಾಗಿ ನಡೆದ ಬಾಸ್ಕೆಟ್‌ ಬಾಲ್ ಪಂದ್ಯಾವಳಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಜನ್ಮದಿನದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಒಂದು ದಿನದ ರಾಜ್ಯಮಟ್ಟದ 3*3 ಆಹ್ವಾನಿತ ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸ್ವತಃ ಬಾಸ್ಕೆಟ್ ಬಾಲ್ ಆಡುವುದರ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಸದೃಢತೆ ಹೆಚ್ಚಾಗುವುದರ ಒತೆಗೆ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡುತ್ತದೆ. ಈ ರೀತಿಯ ಪಂದ್ಯಾವಳಿಗಳು ಹೆಚ್ಚಾಗಿ ನಡೆಯಲಿ ಎಂದರು.

ಇದರ ಜೊತೆಗೆ 16 ವರ್ಷ ವಯೋಮಿತಿಯ ಬಾಲಕರಿಗೆ ಜಿಲ್ಲಾ ಮಟ್ಟದ 3*3 ಬಾಸ್ಕೆಟ್ ಬಾಲ್ ಪಂದ್ಯಗಳು ನಡೆದವು. ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ರಾಜ್ಯದ ವಿವಿಧ ತಂಡಗಳು ಭಾಗವಹಿಸಿದ್ದವು.

ಈ ವೇಳೆ ಜಿಲ್ಲಾ ಬಾಸ್ಕೆಟ್ ಬಾಲ್ ಕ್ಲಬ್‌ನ ಗೌರವಾಧ್ಯಕ್ಷ ಸಿ.ರಾಮಮೂರ್ತಿ, ಉಪಾಧ್ಯಕ್ಷ ಗಡಿಗುಡಾಳ್ ಮಂಜುನಾಥ್, ವಸಂತಕುಮಾರ್, ದರ್ಶನ್, ಸಚಿನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.