ಎಸ್‌ಎಸ್ಎಂ ಅಭಿವೃದ್ಧಿಯ ರಾಜಕಾರಣಿ: ಬಸವರಾಜ್

| Published : Sep 22 2024, 01:52 AM IST

ಸಾರಾಂಶ

ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‍ರವರ ಹುಟ್ಟುಹಬ್ಬ ನಿಮಿತ್ತ ನಡೆದ ರಕ್ತದಾನ ಶಿಬಿರವನ್ನು ಸಮರ್ಥ ಎಸ್.ಎಸ್.ಮಲ್ಲಿಕಾರ್ಜುನ್ ರಕ್ತದಾನ ಮಾಡುವ ಮೂಲಕ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಹರಿಹರ

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಭಿವೃದ್ಧಿ ಕಾರ್ಯಗಳ ಮೂಲಕ ಜನಪ್ರಿಯ ರಾಜಕಾರಣಿ ಆಗಿದ್ದಾರೆ ಎಂದು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್.ಎಚ್. ಬಸವರಾಜ್ ಬೆಳ್ಳೂಡಿ ಹೇಳಿದರು.

ತಾಲೂಕಿನ ಬೆಳ್ಳೂಡಿ ಗ್ರಾಮದ ಶ್ರೀ ಪಟೇಲ್ ಗುರುಬಸಪ್ಪ ಪ್ರೌಢ ಶಾಲೆಯಲ್ಲಿ ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯ, ಎಸ್.ಎಸ್. ಹೈಟೆಕ್ ಆಸ್ಪತ್ರೆ, ಎಸ್.ಎಸ್. ರಕ್ತನಿಧಿ ಕೇಂದ್ರ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬ ನಿಮಿತ್ತ ಆಯೋಜಿಸಿದ್ದ ರಕ್ತದಾನ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಾಸಕ, ಸಚಿವರಾಗಿ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಸೂಕ್ತ ಯೋಜನೆಗಳನ್ನು ಜಾರಿ ಮಾಡಿದ್ದಾರೆ.

ಶೈಕ್ಷಣಿಕ, ಆರೋಗ್ಯ ಸೇವೆ, ವ್ಯಾಪಾರ ವಹಿವಾಟು ಸೇರಿದಂತೆ ವಿವಿಧ ರಂಗಗಳಲ್ಲಿ ದಾವಣಗೆರೆ ರಾಜ್ಯ ಹಾಗೂ ರಾಷ್ಟ್ರದ ಗಮನ ಸೆಳೆಯಲು ಎಸ್.ಎಸ್. ಮಲ್ಲಿಕಾರ್ಜುನ ಅವರ ಶ್ರಮ ಅಗಾಧವಾಗಿದೆ ಎಂದರು.

ರಕ್ತದಾನ ಮಾಡುವ ಮೂಲಕ ಶಿಬಿರ ಉದ್ಘಾಟಿಸಿದ ಸಮರ್ಥ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿ, ದಾವಣಗೆರೆ ಸೇರಿದಂತೆ ಇಡೀ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ತಂದೆ ಎಸ್.ಎಸ್.ಮಲ್ಲಿಕಾರ್ಜುನ್ ಆಧ್ಯತೆ ನೀಡುತ್ತಿದ್ದಾರೆ. ಅವರ ಹುಟ್ಟುಹಬ್ಬದ ನಿಮಿತ್ತ ಗ್ರಾಮಸ್ಥರು ಈ ಶಿಬಿರ ಆಯೋಜಿಸಿರುವುದು ಸಂತಸ ಮೂಡಿಸಿದೆ ಎಂದು ಸಂತಸ ವ್ಯಕ್ತ ಪಡಿಸಿದರು.

ಶಿಬಿರದಲ್ಲಿ ರಕ್ತದಾನ ಮಾಡಿದ ವಿದ್ಯಾರ್ಥಿಗಳಿಗೆ ಶಬ್ದಕೋಶ, ಯುವಕರಿಗೆ ಟೀಶರ್ಟ್, ರೈತರಿಗೆ ಟಾರ್ಚ್ ಹಾಗೂ ಸಿಹಿ ವಿತರಣೆ ಮಾಡಲಾಯಿತು. ಶಿಬಿರದಲ್ಲಿ 27 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಜಿಪಂ ಮಾಜಿ ಸದಸ್ಯ ಬೆಣ್ಣೆಹಳ್ಳಿ ಹಾಲೇಶಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ನರೇಂದ್ರ ಕೆಜಿ ಗ್ರಾಪಂ ಅಧ್ಯಕ್ಷ ಉಮೇಶ್, ಕಾಂಗ್ರೆಸ್ ಮುಖಂಡರಾದ ನಂದಿಗಾವಿ ಶ್ರೀನಿವಾಸ್, ಮಾಗನೂರು ಹನುಮಂತಪ್ಪ, ಸಿದ್ದಾರ್ಥ್, ನಾಗರಾಜ್, ಎಚ್.ಎಚ್.ಲಿಂಗರಾಜ್, ಎ.ಕೆ.ಪರಮೇಶ್, ಯುವರಾಜ್, ರೇವಣಸಿದ್ದೇಶ್, ಸಾರಥಿ ಉಮೇಶ್, ಹನುಮಂತಗೌಡ್ರು, ಮರುಳಸಿದ್ದಪ್ಪ ಇದ್ದರು.