ಕಾಲ್ತುಳಿತ: ಕುಟುಂಬಸ್ಥರಿಗೆ ಪರಿಹಾರದ ಚೆಕ್‌ ವಿತರಣೆ

| Published : Jun 10 2025, 05:23 AM IST

ಕಾಲ್ತುಳಿತ: ಕುಟುಂಬಸ್ಥರಿಗೆ ಪರಿಹಾರದ ಚೆಕ್‌ ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರ ಘೋಷಣೆ ಮಾಡಿದ ₹25 ಲಕ್ಷ ಪರಿಹಾರವನ್ನು ಮೃತ ಕುಟುಂಬದ ಮನೆ ಬಾಗಿಲಿಗೆ ತೆರಳಿ ಕುಟುಂಬಸ್ಥರಿಗೆ ಚೆಕ್ ವಿತರಿಸಲಾಗಿದೆ

ಕಾರವಾರ: ಇತ್ತೀಚೆಗೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟ ಸಿದ್ದಾಪುರದ ಗೃಹಿಣಿ ಅಕ್ಷತಾ ಅವರ ಕುಟುಂಬದವರಿಗೆ ರಾಜ್ಯ ಸರ್ಕಾರದ ವತಿಯಿಂದ ₹25 ಲಕ್ಷ ಪರಿಹಾರದ ಚೆಕ್ನ್ನು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಸೋಮವಾರ ವಿತರಿಸಿದರು.

ಮೃತರ ಮನೆಗೆ ತೆರಳಿ ಚೆಕ್‌ ವಿತರಿಸಿದ ನಂತರ ಮಾತನಾಡಿದ ಅವರು, ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತಕ್ಕೆ ಒಳಗಾದ ಕುಟುಂಬಕ್ಕೆ ರಾಜ್ಯ ಸರ್ಕಾರ ಘೋಷಣೆ ಮಾಡಿದ ₹25 ಲಕ್ಷ ಪರಿಹಾರವನ್ನು ಮೃತ ಕುಟುಂಬದ ಮನೆ ಬಾಗಿಲಿಗೆ ತೆರಳಿ ಕುಟುಂಬಸ್ಥರಿಗೆ ಚೆಕ್ ವಿತರಿಸಲಾಗಿದೆ ಎಂದರು.

ಈ ಪರಿಹಾರದ ಹಣದಿಂದ ಮೃತರ ಕುಟುಂಬಸ್ಥರ ದುಃಖ ಭರಿಸಲು ಸಾಧ್ಯವಿಲ್ಲ. ಈ ಘಟನೆ ನಡೆಯಬಾರದಿತ್ತು, ಆದರೆ ನಡೆದಿದೆ. ಈ ನೋವುನ್ನು ಭರಿಸುವ ಶಕ್ತಿ ಹಾಗೂ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಿ ಜನಸಾಮಾನ್ಯರ ಜತೆ ಬೆರೆಯುವಂತ ಶಕ್ತಿ ಪರಮಾತ್ಮ ನೀಡಲಿ ಎಂದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಕುಟುಂಬಸ್ಥರಿಗೆ ಯಾವುದೇ ನೆರವಿನ ಅಗತ್ಯವಿದ್ದಲ್ಲಿ ಜಿಲ್ಲಾಡಳಿತದ ಮೂಲಕ ಒದಗಿಸಲಾಗುವುದು ಎಂದರು.

ಸಿದ್ದಾಪುರ ಪಪಂ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಉಪಾಧ್ಯಕ್ಷ ವಿನಯ ಹೊನ್ನೆಗುಂಡಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿಜೇಂದ್ರಗೌಡರ್, ಉಪವಿಭಾಗಾಧಿಕಾರಿ ಕಾವ್ಯಾರಾಣಿ ಕೆ.ವಿ., ತಹಸೀಲ್ದಾರ್ ಎಂ.ಆರ್. ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.