ಸಾರಾಂಶ
ಕನ್ನಡಪ್ರಭ ವಾರ್ತೆ ಮೂಡಲಗಿ
ರಾಷ್ಟ್ರದ ಕಲ್ಯಾಣಕ್ಕಾಗಿ ಇಂದಿನ ಯುವಕರು ಸಂಕಲ್ಪ ಮಾಡಿಕೊಳ್ಳಬೇಕು. ಪ್ರತಿಯೊಬ್ಬರೂ ದೇಶಪ್ರೇಮ ಬೆಳೆಸಿಕೊಂಡು ಹೋಗಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ತಾಲೂಕಿನ ನಾಗನೂರ ಪಟ್ಟಣದ ಮಾಧವಾನಂದ ಆಶ್ರಮದ ಬಳಿ 79ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಶಕ್ತ ಭಾರತ ನಿರ್ಮಾಣಕ್ಕೆ ನಾವೆಲ್ಲರೂ ಟೊಂಕ ಕಟ್ಟಿ ನಿಲ್ಲಬೇಕು. ವಿಶ್ವದಲ್ಲಿ ನಮ್ಮ ರಾಷ್ಟ್ರವು ಶಕ್ತಿ ಶಾಲಿ ರಾಷ್ಟ್ರವಾಗುವ ದಿನಗಳು ದೂರವಿಲ್ಲ. ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಕಲ ಭಾರತೀಯರ ಕನಸುಗಳನ್ನು ಸಾಕಾರಗೊಳಿಸುವತ್ತ ಮುನ್ನಡೆದಿದ್ದಾರೆ ಎಂದು ತಿಳಿಸಿದರು.ಪ್ರಮುಖರಾದ ವಿಠ್ಠಲ ಗುಡೆನ್ನವರ, ರಾಮಣ್ಣ ನಾಯಿಕ, ಗಜಾನನ ಯರಗಣವಿ, ಭೀಮಗೌಡ ಹೊಸಮನಿ, ಪಾವಾಡಿ ಗೋಟೂರ, ಬಸು ಹಳಿಗೌಡರ, ಮುತ್ತೆಪ್ಪ ಖಾನಪ್ಪಗೋಳ, ಸಿದ್ದಪ್ಪ ಯಾದಗೂಡ, ಅಜಯ ಗೋಟೂರ, ನಾಗೇಶ ಯಡ್ರಾವಿ, ಶಿವಾನಂದ ಗೋಟೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಮೂಡಲಗಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಬರುವಾಗ ಇಲ್ಲಿಯೇ ಧ್ವಜಾರೋಹಣ ನೆರವೇರಿಸಿಕೊಂಡು ಹೋಗಿರಿ ಎಂದು ಪ್ರಮುಖರು ಮನವಿ ಮಾಡಿದರು. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ರಾತ್ರಿ 12 ಗಂಟೆಯ ಸಮಯದಲ್ಲಿ ನಾಗನೂರ ಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸುವ ಅವಕಾಶ ದೊರೆತಿರುವುದು ನನ್ನ ಅದೃಷ್ಟ. ಇಲ್ಲಿನ ನೇತಾಜಿ ಸುಭಾಸ್‌ಚಂದ್ರ ಬೋಸ್ ಯುವಕ ಮಂಡಳಿಯವರು ಕಳೆದ ೨೫ ವರ್ಷಗಳಿಂದ ಸ್ವಾತಂತ್ರ್ಯ ದಿನವನ್ನು ಆ.೧೪ರ ರಾತ್ರಿ ೧೨ ಗಂಟೆಗೆ ಆಚರಿಸುವ ಮೂಲಕ ಮಾದರಿಯಾಗಿದ್ದಾರೆ.
-ಬಾಲಚಂದ್ರ ಜಾರಕಿಹೊಳಿ, ಶಾಸಕರು.