ಮೊಗೇರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ

| Published : May 05 2024, 02:02 AM IST

ಮೊಗೇರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಮೊಗೇರ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು. ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಪಿ. ಎಂ. ರವಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ತಾಲೂಕು ಮೊಗೇರ ಯುವ ವೇದಿಕೆ ವತಿಯಿಂದ ಪಟ್ಟಣದ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ಮೊಗೇರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಶನಿವಾರ ಚಾಲನೆ ನೀಡಲಾಯಿತು.

ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಸದಸ್ಯ ಪಿ.ಎಂ. ರವಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸಂಸ್ಕೃತಿ, ಆಚಾರ-ವಿಚಾರ, ಪದ್ಧತಿ-ಪರಂಪರೆಯನ್ನು ಉಳಿಸಿಕೊಂಡು ಮುಂದೆ ಸಾಗಲು ಸಮಾಜ ಬಾಂಧವರ ಒಗ್ಗೂಡುವಿಕೆ ಅಗತ್ಯ. ಕ್ರೀಡೆಯಿಂದ ಸಂಘಟನೆ ಸಾಧ್ಯ. ಮೊಗೇರ ಸಮಾಜವು ಜಿಲ್ಲೆಯಲ್ಲಿ 2003ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಅಲ್ಲಿಂದ ಇಲ್ಲಿಯವರೆಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿದೆ ಎಂದರು.

ಜಿಲ್ಲೆಯಲ್ಲಿ 40 ಸಾವಿರಕ್ಕೂ ಅಧಿಕ ಮೊಗೇರ ಸಮಾಜ ಬಾಂಧವರಿದ್ದು, ಇನ್ನಷ್ಟು ಒಗ್ಗಟ್ಟು ಸಾಧಿಸಬೇಕಿದೆ. ಸಮುದಾಯದ ಯುವ ಜನಾಂಗ ಸಮಾಜದ ಬೆಳವಣಿಗೆಗೆ ಸಹಕಾರಿಯಾಗಬೇಕು. ಗ್ರಾಮ ಮಟ್ಟದಲ್ಲಿ ಸಂಘಟನೆಗಳು ಬಲಗೊಳ್ಳಬೇಕು ಎಂದು ರವಿ ಅಭಿಪ್ರಾಯಿಸಿದರು.

ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಕೆ.ಎ. ಯಾಕೂಬ್, ಹಲವಷ್ಟು ವರ್ಷಗಳಿಂದ ಲೈನ್‍ಮನೆಗಳಲ್ಲಿಯೇ ನೆಲೆಸಿರುವ ಮೊಗೇರ ಸಮುದಾಯದವರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಸಂಘಟನೆಯವರು ಶಾಸಕರು, ಸರ್ಕಾರದ ಗಮನ ಸೆಳೆಯಬೇಕೆಂದರು.

ತಾಲೂಕು ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಚಕ್ರವರ್ತಿ ಸುರೇಶ್ ಮಾತನಾಡಿ, ಕ್ರೀಡೆಗಳು ಪರಸ್ಪರ ಸಾಮರಸ್ಯ ಮೂಡಿಸಲು ಸಹಕಾರಿ. ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ ನಿರ್ಮಿಸುವ ಮೂಲಕ ಪ್ರತಿಭೆಯನ್ನು ಗುರುತಿಸುವ ಕೆಲಸ ಆಗಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಮೊಗೇರ ಯುವ ವೇದಿಕೆ ಅಧ್ಯಕ್ಷ ಪಿ.ಬಿ. ಸುರೇಶ್ ಮಾತನಾಡಿ, ಕ್ರೀಡೆಯ ಮೂಲಕ ಸಮಾಜದ ಯುವ ಜನಾಂಗವನ್ನು ಒಗ್ಗೂಡಿಸುವ ಪ್ರಯತ್ನ ಮಾಡಲಾಗಿದ್ದು, ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಗಳಿಂದಲೂ 8 ತಂಡಗಳು ಲೀಗ್‍ನಲ್ಲಿ ಭಾಗವಹಿಸಿವೆ ಎಂದರು.

ವೇದಿಕೆಯಲ್ಲಿ ಮೊಗೇರ ಸಮಾಜದ ಗೌರವಾಧ್ಯಕ್ಷ ಪಿ.ಕೆ. ಚಂದ್ರು, ಉಪಾಧ್ಯಕ್ಷ ವೆಂಕಪ್ಪ, ಜಿಲ್ಲಾ ಕ್ರೀಡಾ ಸಮಿತಿ ಅಧ್ಯಕ್ಷ ಎಂ.ಜಿ. ಚಂದ್ರ, ಖಜಾಂಚಿ ದೇವರಾಜ್, ಪ್ರಮುಖರಾದ ಕೆ.ಎನ್. ರಾಜೇಶ್, ಅಪ್ಪು ಸೇರಿದಂತೆ ಇತರರು ಉಪಸ್ಥಿತರಿದ್ದರು.