ಸಾರಾಂಶ
ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚನೆಕನ್ನಡಪ್ರಭ ವಾರ್ತೆ ಚಿತ್ರದುರ್ಗ ಕನಿಷ್ಠ ವೇತನ ಕಾಯ್ದೆಯ ಬಗ್ಗೆ ಕಾರ್ಮಿಕರಿಗೆ ಮಾಹಿತಿ ಇಲ್ಲ. ಮಾಹಿತಿ ಇದ್ದವರಿಗೆ ಯಾರಿಗೆ ದೂರು ನೀಡಬೇಕು ಎಂಬುದರ ಬಗ್ಗೆ ಗೊಂದಲ ವಿರುತ್ತದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಪ್ರತ್ಯೇಕ ಸಹಾಯವಾಣಿ ಆರಂಭಿಸಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಚಿತ್ರದುರ್ಗ ಹಾಗೂ ದಾವಣಗೆರೆ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಕನಿಷ್ಠ ವೇತನ ಕಾಯ್ದೆ ಅಡಿ ಉಲ್ಲಂಘನೆಯ ಕೇವಲ ನಾಲ್ಕು ಪ್ರಕರಣಗ ಳು ದಾಖಲಾಗಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇದು ಅಧಿಕಾರಿಗಳ ನಿರ್ಲಿಪ್ತ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ ಎಂದರು. ರಾಜ್ಯದ ಕಾರ್ಮಿಕರ ಕಲ್ಯಾಣ ಹಾಗೂ ಹಿತಾಸಕ್ತಿ ಕಾಪಾಡುವ ಹೊಣೆ ಕಾರ್ಮಿಕ ಇಲಾಖೆ ಹೊತ್ತಿದೆ. ಇಲಾಖೆಯಲ್ಲಿ ಬದಲಾವಣೆ ತಂದು, ಶಿಸ್ತು ಮೂಡಿಸಲು ಪ್ರಯತ್ನಿಸಲಾಗುತ್ತದೆ. ಅಧಿಕಾರಿಗಳು ಯಾರಿಗೂ ಭಯಪಡದೆ ಕಾರ್ಮಿಕ ಕಾನೂನುಗಳನ್ನು ಜಾರಿ ಮಾಡಬೇಕು. ಬಡ ಕೂಲಿ ಕಾರ್ಮಿಕರಿಗೆ ಕನಿಷ್ಠ ವೇತನ ದೊರೆಯುವಂತೆ ನೋಡಿಕೊಳ್ಳಬೇಕು. ಜನರಿಗೆ ನ್ಯಾಯ ದೊರಕಿಸಿಕೊಡುವ ಮೂಲಕ ಕಾರ್ಮಿಕ ಇಲಾಖೆಯ ಬಗ್ಗೆ ಭರವಸೆ ಮೂಡಿಸುವ ಕೆಲಸ ಮಾಡಬೇಕು. ಕಾರ್ಮಿಕ ನಿರೀಕ್ಷಕರು ಹಾಗೂ ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಕಾರ್ಖಾನೆಗಳಿಗೆ ಹಾಗೂ ಕಾರ್ಯ ಕ್ಷೇತ್ರಗಳಿಗೆ ತೆರಳಿ ಪರಿಶೀಲನೆ ನಡೆಸಿ ಮಾಲೀಕರು ಕಾರ್ಮಿಕರಿಗೆ ಕನಿಷ್ಠ ವೇತನ ಪಾವತಿಸುತ್ತಿದ್ದಾರೆಯೇ ಎನ್ನುವುದ ಖಚಿತಪಡಿಸಿಕೊ ಳ್ಳುವಂತೆ ಸೂಚಿಸಿದರು.
ವಾಣಿಜ್ಯ ಸಂಸ್ಥೆಗಳ ನೋದಣಿ ಕಡ್ಡಾಯಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಅನುಸಾರ ಎಲ್ಲಾ ರೀತಿಯ ಸಣ್ಣಪುಟ್ಟ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕಾರ್ಮಿಕ ಇಲಾಖೆಯಲ್ಲಿ ನೊಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇದುವರೆಗೂ ವಾಣಿಜ್ಯ ಬಳಕೆಗಾಗಿ 23,597 ವಿದ್ಯುತ್ ಪರವಾನಿಗೆ ನೀಡಲಾಗಿದೆ. ಪ್ರತಿ ಮಾಹೆ 400 ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ನೊಂದಣಿ ಮಾಡಲು ಗುರಿ ನೀಡಲಾಗಿದೆ. ಜಿಲ್ಲೆಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಕೇವಲ 286 ನೊಂದಣಿ ಮಾಡಲಾಗಿದೆ. ಡಾಟಾ ಎಂಟ್ರಿ ಆಪರೇಟರ್ ನೊಂದಣಿ ಮಾಡುವಲ್ಲಿ ನಿರ್ಲಕ್ಷ ತೋರಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಂತೋಷ್ ಲಾಡ್ ಎಚ್ಚರಿಕೆ ನೀಡಿದರು. ಇಲಾಖೆಯ ಆಕಾಶದೀಪ ಯೋಜನೆ ಅಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಕಾರ್ಮಿಕರ ಪಿಎಫ್ ಖಾತೆಗೆ ಹಣ ಜಮೆ ಮಾಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಅಭ್ಯರ್ಥಿಗಳನ್ನು ಕಾರ್ಖಾನೆಗಳಲ್ಲಿ ಅಪ್ರೆಂಟಿಸ್ ತರಬೇತಿಗೆ ಸೇರಿಸಿಕೊಂಡರೆ ಇಲಾಖೆಯಿಂದ ಅಂತಹ ಅಭ್ಯರ್ಥಿಗಳಿಗೆ ಕನಿಷ್ಠ ವೇತನ ಪಾವತಿ ಮಾಡಲಾಗುವುದು. ಈ ಕುರಿತು ಸಂಸ್ಥೆಗಳು ಮಾಲೀಕರಿಗೆ ತಿಳುವಳಿಕೆ ನೀಡಬೇಕು. ಯೋಜನೆಯಡಿ ಹೆಚ್ಚಿನ ಫಲಾನುಭವಿಗಳಿಗೆ ಸಹಾಯ ನೀಡಲು ಗುರಿ ನಿಗದಿಪಡಿಸಿಕೊಂಡು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಕಾರ್ಮಿಕ ಇಲಾಖೆಯಿಂದ ಪತ್ರ ಬರೆಯಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸುವಂತೆ ಸಚಿವ ಲಾಡ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಯೋಜನೆಗಳ ಲಾಭ ಪಡೆಯಲು ಸಲ್ಲಿಸಿದ ಅರ್ಜಿಗಳನ್ನು ಅಧಿಕಾರಿಗಳು ಸೂಕ್ತವಾಗಿ ಪರಿಶೀಲನೆ ನಡೆಸಬೇಕು. ಅರ್ಹ ಫಲಾನುಭವಿಗಳನ್ನು ಗುರುತಿಸಿ ಧನ ಸಹಾಯ ನೀಡಬೇಕು. ಬೇರೆ ಜಿಲ್ಲೆಗಳಲ್ಲಿ ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ಬೇರೆಯವರು ಧನಸಹಾಯ ಪಡೆದ ಉದಾಹರಣೆಗಳಿವೆ. ಇಂತಹ ಸಂಗತಿಗಳಿಗೆ ಅವಕಾಶ ಮಾಡಿಕೊಡಬಾರದು. ಸುಳ್ಳು ಹಾಗೂ ಮೋಸದಿಂದ ಧನ ಸಹಾಯ ಮಂಜೂರಾತಿ ಮಾಡಿರುವುದು ಕಂಡು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.ಜಿಲ್ಲೆಯಲ್ಲಿ ಒಟ್ಟು 223 ಕಾರ್ಖಾನೆಗಳಿದ್ದು, ಈ ಪೈಕಿ 11 ಅಪಾಯಕಾರಿ ವಲಯದ ಕಾರ್ಖಾನೆಗಳಿವೆ, ಒಟ್ಟು 11090 ಕಾರ್ಮಿಕರು ಕೆಲಸ ಮಾಡುತ್ತಿ ದ್ದಾರೆ, ಕಾರ್ಖಾನೆ ಮತ್ತು ಬಾಯ್ಲರ್ ವಿಭಾಗದಿಂದ ಈ ವರ್ಷ 49 ತಪಾಸಣೆಗಳನ್ನು ಕೈಗೊಳ್ಳಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಮಿಕ ಸಚಿವರು, ಕಾರ್ಖಾನೆಗಳಲ್ಲಿನ ಕಾರ್ಮಿಕರಿಗೆ ಕನಿಷ್ಠ ವೇತನ ಕಾಯ್ದೆ ಹಾಗೂ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತಂತೆ ಜಾಗೃತಿ ಮೂಡಿಸಬೇಕು. ಜೊತೆಗೆ ಕಾರ್ಖಾನೆ ಕಾರ್ಮಿಕರುಗಳಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆಯೇ, ಎಂಬುದರ ಬಗ್ಗೆ ವರದಿಯನ್ನು ಪಡೆಯಬೇಕು ಎಂದು ಸೂಚನೆ ನೀಡಿದರು. ಕಾರ್ಮಿಕ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಭಾರತಿ, ಕಾರ್ಮಿಕ ಇಲಾಖೆ ವಲಯದ ಹೆಚ್ಚುವರಿ ಆಯುಕ್ತ ಮಂಜುನಾಥ್, ಕಾರ್ಖಾನೆ ಮತ್ತು ಬಾಯ್ಲರ್ ವಿಭಾಗದ ನಿರ್ದೇಶಕ ಶ್ರೀನಿವಾಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಭೆಯಲ್ಲಿ ಇದ್ದರು.