ಗ್ಯಾರಂಟಿ, ತಾಪಂ ಕಚೇರಿಗಳಲ್ಲಿ ಪ್ರತ್ಯೇಕ ಕಚೇರಿ ಆರಂಭ : ಶಾಸಕ ತಮ್ಮಯ್ಯ

| Published : Aug 11 2024, 01:34 AM IST

ಗ್ಯಾರಂಟಿ, ತಾಪಂ ಕಚೇರಿಗಳಲ್ಲಿ ಪ್ರತ್ಯೇಕ ಕಚೇರಿ ಆರಂಭ : ಶಾಸಕ ತಮ್ಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಸರ್ಕಾರದ ಜನಪರ ಯೋಜನೆಗಳು ಬಡ ಜನರಿಗೆ ತಲುಪಬೇಕೆಂಬ ದೃಷ್ಟಿಯಿಂದ ತಾಲೂಕು ಪಂಚಾಯಿತಿ ಆವರಣದಲ್ಲಿ ಪ್ರತ್ಯೇಕ ಕಚೇರಿ ತೆರೆದು ಗ್ಯಾರಂಟಿ ಯೋಜನೆಗಳ ನೋಂದಣಿಗೆ ಕ್ರಮ ವಹಿಸಲಾಗುವುದೆಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಸರ್ಕಾರದ ಜನಪರ ಯೋಜನೆಗಳು ಬಡ ಜನರಿಗೆ ತಲುಪಬೇಕೆಂಬ ದೃಷ್ಟಿಯಿಂದ ತಾಲೂಕು ಪಂಚಾಯಿತಿ ಆವರಣದಲ್ಲಿ ಪ್ರತ್ಯೇಕ ಕಚೇರಿ ತೆರೆದು ಗ್ಯಾರಂಟಿ ಯೋಜನೆಗಳ ನೋಂದಣಿಗೆ ಕ್ರಮ ವಹಿಸಲಾಗುವುದೆಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹಲವಾರು ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತ ವಾಗಿ ಈಡೇರಿಸಲು ಸರ್ಕಾರದ ಮಟ್ಟದಲ್ಲಿ ಒತ್ತಡ ತರಲಾಗುವುದು ಎಂದು ಭರವಸೆ ನೀಡಿದರು.ಸರ್ಕಾರ ಅಂಗನವಾಡಿ ಉದ್ಯೋಗಿಗಳ ಪರವಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ನಿಮ್ಮ ಕೆಲವು ವರ್ಷಗಳ ಬೇಡಿಕೆಗಳಲ್ಲಿ ಒಂದಾದ ನಿವೃತ್ತ ಕಾರ್ಯಕರ್ತೆಯರಿಗೆ ಗ್ರ್ಯಾಚುಟಿಯನ್ನು (ಉಪ ಧನ) 2022-23 ನೇ ಸಾಲಿನಿಂದ ನಿವೃತ್ತಿಯಾಗುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ನೀಡಲು ಮುಂದಾಗಿದೆ ಎಂದರು.ಅಂಗನವಾಡಿ ಉದ್ಯೋಗಿಗಳ ಸೇವಾ ಭದ್ರತೆ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಜೊತೆಗೆ ಅಕ್ಷರ ದಾಸೋಹ ಕಾರ್ಯಕರ್ತೆಯರಿಗೂ ನಿವೃತ್ತಿ ವೇತನ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.ಸುಮಾರು 22 ಲಕ್ಷ ರು. ವೆಚ್ಚದಲ್ಲಿ ದಿವ್ಯಾಂಗಚೇತನರಿಗೆ ದ್ವಿಚಕ್ರ ವಾಹನ ಹಾಗೂ 76 ಸಾವಿರ ರು. ವೆಚ್ಚದಲ್ಲಿ ಬ್ಯಾಟರಿ ಚಾಲಿತ ವ್ಹೀಲ್‌ ಚೇರನ್ನು ಇದೇ ಸಂದರ್ಭದಲ್ಲಿ ವಿತರಣೆ ಮಾಡಿದ ಶಾಸಕರು ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಮೂಲಕ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶ ಹೊಂದಿದೆ ಎಂದರು.ಕಳೆದ 2 ತಿಂಗಳಿಂದ ತಾಂತ್ರಿಕ ತೊಂದರೆಯಿಂದಾಗಿ ಗೃಹಲಕ್ಷ್ಮಿ ಹಣ ಬಂದಿರುವುದಿಲ್ಲ, ಈ ಬಗ್ಗೆ ಪರಿಶೀಲಿಸಲಾಗುತ್ತಿದೆ. ಈಗಾಗಲೇ ಕೆಲವರಿಗೆ ಡಿಬಿಟಿ ಮೂಲಕ ಫಲಾನುಭವಿ ಖಾತೆಗೆ ಹಣ ರವಾನಿಸಲಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ್, ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಾರಾನಾಥ್, ಕೆಡಿಪಿ ಸದಸ್ಯ ಸಂತೋಷ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ. ರಂಗನಾಥ್, ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಪೃಥ್ವಿ, ಗ್ರಾ.ಪಂ ಸದಸ್ಯ ಎಚ್.ಪಿ ಮಂಜೇಗೌಡ, ಹಿರೇಗೌಜ ಶಿವು, ಬಿಳೆಕಲ್ಲಳ್ಳಿ ಪುಟ್ಟೇಗೌಡ ಉಪಸ್ಥಿತರಿದ್ದರು. 10 ಕೆಸಿಕೆಎಂ 5ಚಿಕ್ಕಮಗಳೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಶಾಸಕ ಎಚ್‌.ಡಿ. ತಮ್ಮಯ್ಯಸಮವಸ್ತ್ರ ವಿತರಿಸಿದರು. ಮಹಾಂತೇಶ್‌, ಎಚ್‌.ಕೆ. ತಾರಾನಾಥ್‌, ಸಿ. ರಂಗನಾಥ್‌, ಮಂಜೇಗೌಡ ಇದ್ದರು.