ಸುಳ್ಳು ಗ್ಯಾರಂಟಿಗಳಿಂದಾಗಿ ರಾಜ್ಯ ದಿವಾಳಿ: ಗೋವಿಂದ ಎಂ ಕಾರಜೋಳ

| Published : Apr 08 2024, 01:02 AM IST

ಸುಳ್ಳು ಗ್ಯಾರಂಟಿಗಳಿಂದಾಗಿ ರಾಜ್ಯ ದಿವಾಳಿ: ಗೋವಿಂದ ಎಂ ಕಾರಜೋಳ
Share this Article
  • FB
  • TW
  • Linkdin
  • Email

ಸಾರಾಂಶ

ಕೊಂಡ್ಲಹಳ್ಳಿ ಗ್ರಾಮದಲ್ಲಿ ನಡೆದ ಬಜೆಪಿ, ಜೆಡಿಎಸ್ ಸಮನ್ವಯ ಸಮಿತಿ ಸಭೆಯನ್ನು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಉದ್ಘಾಟಿಸಿದರು.

ಕನ್ನಡ ಪ್ರಭ ವಾರ್ತೆ, ಮೊಳಕಾಲ್ಮುರು

ಅಧಿಕಾರಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಿರುವ ಕಾಂಗ್ರೆಸ್ ನಾಯಕರು ರಾಜ್ಯ ದಿವಾಳಿಯಾಗಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಗೋವಿಂದ ಎಂ ಕಾರಜೋಳ ಹೇಳಿದರು.ತಾಲೂಕಿನ ಕೊಂಡ್ಲಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದ ಬಜೆಪಿ, ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.ರಾಜ್ಯದಲ್ಲಿ ಬಿಜೆಪಿಗೆ ಸಿಗುತ್ತಿರುವ ಜನಬೆಂಬಲದಿಂದಾಗಿ ಕಾಂಗ್ರೆಸ್ ನಾಯಕರಲ್ಲಿ ನಡುಕ ಶುರುವಾಗಿದೆ. ಗ್ಯಾರಂಟಿಯಿಂದಾಗಿ ಸರ್ಕಾರದಲ್ಲಿ ಹಣವಿಲ್ಲದೆ ಅಭಿವೃದ್ದಿ ಕಾರ್ಯಗಳು ಸ್ಥಗಿತ ಗೊಂಡಿದ್ದರೂ ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಪರಸ್ಪರ ಹೊರಾಟ ಮಾಡುತ್ತಿದ್ದಾರೆ ಎಂದರು.

ಮೊಳಕಾಲ್ಮುರು ತೀರಾ ಹಿಂದುಳಿದ ಪ್ರದೇಶವಾಗಿದ್ದು ಸದಾ ಬರಕ್ಕೆ ತುತ್ತಾಗುತ್ತಿದೆ. ಕುಡಿಯುವ ನೀರಿಗೂ ಪರಿತಪಿಸುವಂತಾಗಿದೆ. ಮತದಾರರು ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿ ಆಶೀರ್ವದಿಸಿದರೆ ನೀರಾವರಿ ಮತ್ತು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತೇನೆಂದರು. ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮಾತನಾಡಿ, ಪ್ರಧಾನಿ ಮೋದಿ ದೂರ ದೃಷ್ಟಿಯಿಂದಾಗಿ ದೇಶ ಅಭಿವೃದ್ದಿಯತ್ತ ಸಾಗುತ್ತಿದೆ. ರೈತರಿಗೆ, ಬಡವರಿಗೆ ಹಲವು ಯೋಜನೆ ಜಾರಿಗೆ ತಂದು ಪ್ರಪಂಚದ ಮುಂಚೂಣಿ ರಾಷ್ಟ್ರಗಳ ಸಾಲಲ್ಲಿ ನಿಲ್ಲಿಸಿದ್ದಾರೆ. ಈ ಬಾರಿಯೂ ಮೋದಿ ಪ್ರಧಾನಿಯಾಗಬೇಕಾದರೆ ಪ್ರತಿಯೊಬ್ಬರು ಬಿಜೆಪಿಗೆ ಮತ ನೀಡಬೇಕು ಎಂದರು. ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಮಾತನಾಡಿ ಸುಳ್ಳು ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿ ಬಯಸುತ್ತಿಲ್ಲ. ಬರಕ್ಕೆ ತುತ್ತಾಗಿರುವ ರಾಜ್ಯವನ್ನು ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಕುಡಿಯುವ ನೀರಿಗೂ ಸರ್ಕಾರದಲ್ಲಿ ಹಣವಿಲ್ಲದಾಗಿದೆ. ಲೋಕಸಭಾ ಚುನಾವಣಾ ನಂತರ ರಾಜ್ಯದಲ್ಲಿ ಗ್ಯಾರಂಟಿಗಳು ಇಲ್ಲವಾಗುತ್ತವೆ ಎಂದರು. ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ ಮಾತನಾಡಿ ಅಭಿವೃದ್ದಿಯ ಹರಿಕಾರ ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗಬೇಕಾದರೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಪ್ರತಿ ಮನೆಗೂ ಭೇಟಿ ನೀಡಿ ಕೇಂದ್ರ ಸರ್ಕಾರದ ಯೋಜನೆ ತಿಳಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಕು ಎಂದರು.ಈ ವೇಳೆ ವಿಧಾನ ಪರಿಷತ್ ಸದಸ್ಯ ಕೆ.ಎಸ್ .ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ಕ್ಷೇತ್ರಾಧ್ಯಕ್ಷ ಕರಿಬಸಪ್ಪ, ಜೆಡಿಎಸ್ ಪರಾಜಿತ ಅಭ್ಯರ್ಥಿ ಪಿ. ವೀರಭದ್ರಪ್ಪ, ತಾಪಂ ಮಾಜಿ ಸದಸ್ಯ ಟಿ.ರೇವಣ್ಣ, ಬಿಜೆಪಿ ಮಂಡಲ ಅಧ್ಯಕ್ಷರಾದ ಡಾ.ಪಿ.ಎಂ. ಮಂಜುನಾಥ, ಇ. ರಾಮರೆಡ್ಡಿ, ಹಿರಿಯ ಮುಖಂಡ ರಾಮದಾಸಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಂಜಣ್ಣ, ಚಂದ್ರಶೇಖರ ಗೌಡ, ಶ್ರೀರಾಮರೆಡ್ಡಿ, ಒಬಿಸಿ ಜಿಲ್ಲಾಧ್ಯಕ್ಷ ವೆಂಕಟೇಶ, ಜಿಂಕ್ಲ ಬಸವರಾಜ, ಕಾಲುವೆ ಹಳ್ಳಿ ಶ್ರೀನಿವಾಸ, ಹನುಮಂತನಹಳ್ಳಿ ನಾಗರಾಜ,ಸೂರಮ್ಮನಹಳ್ಖಿ ನಾಗರಾಜ, ಪ್ರಭಾಕರ್,ಸಿದ್ದಾರ್ಥ ಇದ್ದರು.