ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಸಂಖ್ಯೆಯಲ್ಲಿ ದಾಖಲೆಯಾಗಿದೆಯೇ ಹೊರತು, ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ದಾಖಲೆ ಸೃಷ್ಟಿಸಿಲ್ಲ. ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ಬಯಲುಸೀಮೆ ಭಾಗಕ್ಕೆ ಈ ಬಜೆಟ್ ದೊಡ್ಡ ವಂಚನೆ ಮಾಡಿದೆ ಎಂದು ಸಂಸದ ಡಾ.ಕೆ. ಸುಧಾಕರ್ ಕಟುವಾಗಿ ಟೀಕಿಸಿದರು.ಅಭಿವೃದ್ಧಿ ಯೋಜನೆಗೆ ಹಣವಿಲ್ಲರಾಜ್ಯ ಬಜೆಟ್‌ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು, ₹4 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದರೂ ಅದರಲ್ಲಿ ಬಹುಪಾಲು ಅಂದರೆ 51,034 ಕೋಟಿ ರು. ಅನುದಾನವನ್ನು ಗ್ಯಾರಂಟಿಗಳಿಗೆ ಮೀಸಲಿಡಲಾಗಿದೆ. ಇದರಿಂದಾಗಿ ಅಭಿವೃದ್ಧಿ ಯೋಜನೆಗಳಿಗೆ ಹಣ ಕಡಿಮೆಯಾಗಿದೆ. ಈ ತಪ್ಪನ್ನು ಮುಚ್ಚಿಡಲು ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಬಜೆಟ್‌ನಲ್ಲಿ ಆರೋಪಿಸಲಾಗಿದೆ ಎಂದಿದ್ದಾರೆ.
ಯಾವುದೇ ಹೊಸ ಯೋಜನೆ ಇಲ್ಲಚಿಕ್ಕಬಳ್ಳಾಪುರ, ಕೋಲಾರ ಸೇರಿ ಬಯಲಸೀಮೆ ಭಾಗಕ್ಕೆ ಬಜೆಟ್‌ನಲ್ಲಿ ಮಹಾ ಅನ್ಯಾಯ ಮಾಡಲಾಗಿದೆ. ಇಲ್ಲಿನ ನೀರಾವರಿಗೆ ಸಂಬಂಧಿಸಿದಂತೆ ಹೊಸ ಯೋಜನೆ ನೀಡಿಲ್ಲ. ರೇಷ್ಮೆ ಕ್ಷೇತ್ರದಲ್ಲಿ ರಾಮನಗರ, ಮೈಸೂರು ಜಿಲ್ಲೆಗಳಿಗೆ ಕೆಲವು ಕೊಡುಗೆಗಳನ್ನು ನೀಡಲಾಗಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮೊದಲಾದ ಭಾಗಗಳಲ್ಲೂ ರೇಷ್ಮೆ ಮಾರುಕಟ್ಟೆ ಅಭಿವೃದ್ಧಿಗೆ ಅನುದಾನ ಅಥವಾ ಯೋಜನೆ ನೀಡಬೇಕಿತ್ತು ಎಂದು ಹೇಳಿದರು.ಚಿಕ್ಕಬಳ್ಳಾಪುರದಲ್ಲಿ ಸುಸಜ್ಜಿತ ಮೆಡಿಕಲ್ ಕಾಲೇಜನ್ನು ಬಿಜೆಪಿ ಸರ್ಕಾರವಿದ್ದಾಗ ನಿರ್ಮಿಸಲಾಗಿತ್ತು. ಈ ಕಾಲೇಜಿನ ಆರಂಭಕ್ಕೆ ಇನ್ನಷ್ಟು ಅನುದಾನದ ಕುರಿತು ಬಜೆಟ್‌ನಲ್ಲಿ ಹೇಳಿಲ್ಲ. ಎಚ್‌ಎನ್ ವ್ಯಾಲಿ ಯೋಜನೆ ನೀರಿನ ಮೂರನೇ ಹಂತರ ಶುದ್ಧೀಕರಣ, ಕೆರೆಗಳ ರಕ್ಷಣೆಗೆ ಕ್ರಮ ಸೇರಿದಂತೆ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ಅವರು ದೂರಿದರು. ಬಿಜೆಪಿ ರೂಪಿಸಿದ ಯೋಜನೆಚಿಕ್ಕಬಳ್ಳಾಪುರದಲ್ಲಿ ಹೈಟೆಕ್ ಹೂ ಮಾರುಕಟ್ಟೆಯ ಬಗ್ಗೆ ಪ್ರಸ್ತಾಪಿಸಲಾಗಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯ ಬಜೆಟ್‌ನಲ್ಲೇ ಇದನ್ನು ಘೋಷಿಸಲಾಗಿತ್ತು. ಅದನ್ನೇ ಜಾರಿ ಮಾಡಿದ್ದರೆ ಆಗುತ್ತಿತ್ತು. ಅದನ್ನು ಬಿಟ್ಟು ಮತ್ತೆ ಈ ಯೋಜನೆ ಘೋಷಣೆ ಮಾಡಲಾಗಿದೆ. ಬಿಜೆಪಿ ಯೋಜನೆಗೆ ಕಾಂಗ್ರೆಸ್ ಬಣ್ಣ ಬಳಿಯಲಾಗಿದೆ. ಎತ್ತಿನಹೊಳೆ ಯೋಜನೆಯಡಿ ತುಮಕೂರಿನಲ್ಲಿ ಕಾಮಗಾರಿ ಪೂರ್ಣಗೊಳಿಸುವುದರ ಬಗ್ಗೆ ಮಾತ್ರ ಪ್ರಸ್ತಾಪ ಮಾಡಲಾಗಿದೆ. ಉಳಿದಂತೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕಿಡಿಕಾರಿದರು. ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಮೀಸಲಿಡಿಈ ಬಾರಿ ಎಸ್ ಸಿ ಎಸ್ ಪಿ , ಟಿಎಸ್ ಪಿ ಅಡಿಯಲ್ಲಿ ಒಟ್ಟು 42,018 ಕೋಟಿ ರು. ಮೀಸಲಿಡಲಾಗಿದೆ. ಆದರೆ ಈಗ ಮೀಸಲಿಟ್ಟು ನಂತರ ಅನುದಾನ ವರ್ಗಾವಣೆ ಮಾಡಬಾರದು ಎಂದು ಡಾ.ಕೆ. ಸುಧಾಕರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.