ಪ್ರಮುಖ ಬೇಡಿಕೆಗಳಿಗೆ ರಾಜ್ಯ ಬಜೆಟ್‌ ಸ್ಪಂದನೆ

| Published : Mar 07 2025, 11:46 PM IST

ಸಾರಾಂಶ

ಹಾಸನ ಜಿಲ್ಲೆಯ ಪ್ರಮುಖ ಬೇಡಿಕೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಮನ್ನಣೆ ಸಿಕ್ಕಿದೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಪ್ರಮುಖವಾಗಿ ಬೇಲೂರು ಸೇರಿದಂತೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಿತಿ ಮೀರಿರುವ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯವ ಸಂಬಂಧ, ಭದ್ರಾ ಅಭಯಾರಣ್ಯದಲ್ಲಿ ಆನೆಧಾಮ ನಿರ್ಮಾಣಕ್ಕೆ ಆರಂಭಿಕವಾಗಿ ಸಿಎಂ ಸಿದ್ದರಾಮಯ್ಯ ಅವರು ೨೦ ಕೋಟಿ ರು. ಅನುದಾನ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯ ಪ್ರಮುಖ ಬೇಡಿಕೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಮನ್ನಣೆ ಸಿಕ್ಕಿದೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಪ್ರಮುಖವಾಗಿ ಬೇಲೂರು ಸೇರಿದಂತೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಿತಿ ಮೀರಿರುವ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯವ ಸಂಬಂಧ, ಭದ್ರಾ ಅಭಯಾರಣ್ಯದಲ್ಲಿ ಆನೆಧಾಮ ನಿರ್ಮಾಣಕ್ಕೆ ಆರಂಭಿಕವಾಗಿ ಸಿಎಂ ಸಿದ್ದರಾಮಯ್ಯ ಅವರು ೨೦ ಕೋಟಿ ರು. ಅನುದಾನ ನೀಡಿದ್ದಾರೆ.

ಹಾಗೆಯೇ ಆನೆ ದಾಳಿಯಿಂದ ಜೀವ ಕಳೆದುಕೊಂಡ ಕುಟುಂಬಕ್ಕೆ ಪರಿಹಾರ ಮೊತ್ತ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದ್ದೆವು. ಇದಕ್ಕೆ ಸ್ಪಂದಿಸಿರುವ ಸಿಎಂ ಅವರು, ಹಾಲಿ ಇದ್ದ ೧೫ ಲಕ್ಷ ರು. ಪರಿಹಾರ ಮೊತ್ತವನ್ನು ೨೦ ಲಕ್ಷಕ್ಕೆ ಹೆಚ್ಚಳ ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಹೇಳುವೆ ಎಂದಿದ್ದಾರೆ. ಹಾಗೆಯೇ ಹಾಸನ ಸೇರಿದಂತೆ ರಾಜ್ಯದ ೭ ಜಿಲ್ಲೆಗಳಲ್ಲಿ ಮಳೆಗಾಲ ಸಂದರ್ಭದಲ್ಲಿ ಭೂಕುಸಿತ ತಡೆಗೆ ತಡೆಗೋಡೆ ನಿರ್ಮಿಸಲು ೨೦೦ ಕೋಟಿ ಕೊಟ್ಟಿದ್ದಾರೆ. ಹಾಸನ ನಗರಪಾಲಿಕೆಗೆ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೆ. ಹಾಸನ ವಿಮಾನ ನಿಲ್ದಾಣಕ್ಕೆ ಮುಂದುವರಿದ ಅನುದಾನದಡಿ ಹಣ ಸಿಗಲಿದೆ ಎಂದರು.

ನಿರ್ಮಾಣ ಹಂತದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ೯ ಕೋಟಿ ನೀಡಿದ್ದು, ಮುಂದೆ ೩೦ ಕೋಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ರಾಜ್ಯವ್ಯಾಪಿ ಜಾರಿಗೊಳಿಸಲು ಘೋಷಣೆ ಮಾಡಿರುವ ಯೋಜನೆಗಳು ನಮ್ಮ ಜಿಲ್ಲೆಗೂ ಸಿಗಲಿವೆ. ಒಟ್ಟಾರೆಯಾಗಿ ಜಿಲ್ಲೆಗೆ ನಾವು ಕೇಳಿದ್ದನ್ನು ಸಿಎಂ ಅವರು ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಜನರ ಪರವಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವೆ ಎಂದು ನುಡಿದರು.