ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಸಾಮೂಹಿಕ ಹೊಣೆಗಾರಿಕೆ ವಹಿಸುವುದು ನಮ್ಮೆಲ್ಲರ ಜವಾಬ್ದಾರಿ

| Published : Feb 18 2025, 12:33 AM IST

ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಸಾಮೂಹಿಕ ಹೊಣೆಗಾರಿಕೆ ವಹಿಸುವುದು ನಮ್ಮೆಲ್ಲರ ಜವಾಬ್ದಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಶಿಕ್ಷಕರು ಮತ್ತು ಗ್ರಾಪಂ ಪಿಡಿಒಗಳಿಗೆ ಆಯೋಜಿಸಿದ್ದ ಒಂದು ದಿನದ ಅರಿವು ಕಾರ್ಯಾಗಾರ

ಕನ್ನಡಪ್ರಭ ವಾರ್ತೆ ಹುಣಸೂರುಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಸಾಮೂಹಿಕ ಹೊಣೆಗಾರಿಕೆ ವಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ. ದಿನೇಶ್ ಅಭಿಪ್ರಾಯಪಟ್ಟರು.ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಪಂ, ತಾಲೂಕು ಆಡಳಿತ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಮಕ್ಕಳ ಹಕ್ಕುಗಳು ಮತ್ತು ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಮುಖ್ಯಶಿಕ್ಷಕರು ಮತ್ತು ಗ್ರಾಪಂ ಪಿಡಿಒಗಳಿಗೆ ಆಯೋಜಿಸಿದ್ದ ಒಂದು ದಿನದ ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳೊಂದಿಗೆ ಹೆಚ್ಚು ಕಾಲ ಮತ್ತು ನೇರವಾಗಿ ಸಂಪರ್ಕ ಹೊಂದಿದವರು ಶಿಕ್ಷಕರು. ಅಲ್ಲದೇ ಶಿಕ್ಷಕರ ಮಾತಿನಲ್ಲಿ ವಿದ್ಯಾರ್ಥಿಗಳಿಗೆ ಅತಿಹೆಚ್ಚಿನ ವಿಶ್ವಾಸ ಮತ್ತು ನಂಬಿಕೆಯಿರುತ್ತದೆ. ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆ, ಜೀತವಿಮುಕ್ತ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ ಮುಂತಾದವುಗಳು ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಜಾರಿಗೊಳ್ಳಬೇಕಾದ ಕಾಯ್ದೆಗಳಾಗಿವೆ. ಇದು ಕೇವಲ ಒಬ್ಬ ವ್ಯಕ್ತಿ, ಇಲಾಖೆಯ ಕಾರ್ಯವಲ್ಲ, ಬದಲಾಗಿ ಎಲ್ಲ ಇಲಾಖೆಗಳು, ಅಧಿಕಾರಿಗಳು ಮತ್ತು ನಾಗರಿಕರು ಸೇರಿದಂತೆ ಸಾಮೂಹಿಕ ಹೊಣೆಗಾರಿಕೆಯನ್ನು ಹೊಂದಿದವರಾಗಿದ್ದಾರೆ. ಅದರಲ್ಲು ಶಿಕ್ಷಕರು ಬಹುಮುಖ್ಯ ಪಾತ್ರ ವಹಿಸುತ್ತಾರೆ ಎಂದರು.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಎಸ್.ಟಿ. ಯೋಗೇಶ್ ಮಾತನಾಡಿದರು.ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಎಸ್.ಮಂಜು ಮಕ್ಕಳ ಹಕ್ಕುಗಳು ಮತ್ತು ಮಕ್ಕಳಿಗ ಸಂಬಂಧಿಸಿದ ಕಾಯ್ದೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.ತಹಸೀಲ್ದಾರ್ ಜೆ. ಮಂಜುನಾಥ್, ಇಒ ಕೆ. ಹೊಂಗಯ್ಯ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಜಿ. ಹರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹದೇವ, ಬಿಆರ್‌ಸಿ ಹೇಮಲತಾ, ಲೋಕೇಶ್, ನೋಡಲ್ ಅಧಿಕಾರಿ ರಾಜಪ್ಪ, ಮುಖ್ಯಶಿಕ್ಷಕರು ಮತ್ತು ಪಿಡಿಒ ಇದ್ದರು.