ರಾಜ್ಯದ ಸಾಂಸ್ಕ್ರತಿಕ ರಾಯಭಾರಿ ಬಸವಣ್ಣ ಸ್ವಾಗತಾರ್ಹ: ಶಂಕರಗೌಡ

| Published : Jan 21 2024, 01:34 AM IST

ಸಾರಾಂಶ

ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ರಾಯಭಾರಿ ಎಂದು ರಾಜ್ಯದ ಮಂತ್ರಿಮಂಡಲದಲ್ಲಿ ನಿರ್ಣಯ ತೆಗೆದುಕೊಂಡು ಘೋಷಣೆ ಮಾಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಅಭಿನಂದನೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ರಾಯಭಾರಿ ಎಂದು ರಾಜ್ಯದ ಮಂತ್ರಿಮಂಡಲದಲ್ಲಿ ನಿರ್ಣಯ ತೆಗೆದುಕೊಂಡು ಘೋಷಣೆ ಮಾಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಅಭಿನಂದನೆ ಸಲ್ಲಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಈ ಹಿಂದೆ ಕೂಡಾ ಮುಖ್ಯಮಂತ್ರಿಗಳಾದ ಸಂದರ್ಭದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರಗಳನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಹಾಕಬೇಕು ಎಂದು ಆದೇಶ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕು. ವಿಜಯಪುರದ ವಿಶ್ವವಿದ್ಯಾಲಯಕ್ಕೆ ಅಕ್ಕ ಮಹಾದೇವಿ ಹೆಸರನ್ನು ನಾಮಕರಣ ಮಾಡಿದ್ದು ಇತಿಹಾಸ. ಅಲ್ಲದೆ ಇತ್ತೀಚೆಗೆ ವಿಜಯಪುರದ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರನ್ನು ನಾಮಕರಣ ಮಾಡುವ ಮೂಲಕ ನಿಜವಾದ ಶರಣರ ತತ್ವಗಳನ್ನು ತಮ್ಮ ಆಡಳಿತದಲ್ಲಿ ಅಳವಡಿಸಿಕೊಂಡ ನಾಯಕರು ಯಾರಾದರೂ ಇದ್ದಾರೆ ಅವರು ಸಿದ್ದರಾಮಯ್ಯನವರು ಮಾತ್ರ. ಮುಂಬರುವ ಬಜೆಟ್‌ನಲ್ಲಿ ಬಸವ ಜನ್ಮ ಸ್ಥಳ ಬಸವನಬಾಗೇವಾಡಿ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.