ಸಾರಾಂಶ
ಕಾರ್ಯಕಾರಣಿಯಲ್ಲಿ ಬೇರೆ ಜಿಲ್ಲೆ ರಾಜ್ಯಗಳಿಂದ ಬರುವ ಮಾಲಾಧಾರಿಗಳಿಗೆ ತಮ್ಮ ಜಿಲ್ಲೆಗಳಲ್ಲಿ ಸಮಸ್ಯೆ ಉಂಟಾದಲ್ಲಿ ಕೂಡಲೇ ಸ್ಪಂದಿಸಬೇಕು, ಸ್ವಚ್ಛ ಶಬರಿಮಲೆ ಕಾರ್ಯಕ್ರಮದಲ್ಲಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು, ಗುರುಸ್ವಾಮಿಗಳು ಮತ್ತು ಮಾಲಾಧಾರಿಗಳು ವ್ರತ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಮೊದಲಾದ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಕನ್ನಡಪ್ರಭ ವಾರ್ತೆ ಕಾಪು
ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (ಸಾಸ್)ನ ರಾಜ್ಯ ಕಾರ್ಯಕಾರಿಣಿ ಸಭೆಯು ಇತ್ತೀಚೆಗೆ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ರಾಜ್ಯಾಧ್ಯಕ್ಷ ಡಾ. ಜಯರಾಮ್ ಜಿ. ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಟಿ.ಬಿ. ಶೇಖರ್ ಕಾರ್ಯಾಕಾರಣಿಯನ್ನು ಉದ್ಘಾಟಿಸಿದರು.ವೇದಿಕೆಯಲ್ಲಿ ಸಾಸ್ ಉಡುಪಿ ಜಿಲ್ಲಾ ಗೌರವಧ್ಯಕ್ಷ ಹರಿಯಪ್ಪ ಕೋಟ್ಯಾನ್, ಗೌರವ ಸಲಹೆಗಾರ ಆನಂದ್ ಪಿ. ಸುವರ್ಣ, ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ. ಕೋಟ್ಯಾನ್, ದಕ್ಷಿಣ ಪ್ರಾಂತಿಯ ಕಾರ್ಯದರ್ಶಿ ಎಸ್.ಎನ್.ಕೃಷ್ಣಯ್ಯ, ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಎನ್.ಎಂ. ಹೆಗ್ಡೆ, ರಾಜ್ಯ ಉಪಾಧ್ಯಕ್ಷ ಸಂಪತ್ ಕುಮಾರ್, ಮಹಿಳಾ ಸಾಸ್ ಜಿಲ್ಲಾಧ್ಯಕ್ಷೆ ತಾರಾ ಉಮೇಶ್ ಆಚಾರ್ಯ, ಕಾಪು ತಾಲೂಕು ಅಧ್ಯಕ್ಷ ರಘುರಾಮ್ ಶೆಟ್ಟಿ, ದ.ಕ. ಜಿಲ್ಲಾಧ್ಯಕ್ಷ ಗಣೇಶ್ ಪೊದುವಾಲ್ ಉಪಸ್ಥಿತರಿದ್ದರು.ಉಡುಪಿ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಮೆಂಡನ್ ಸ್ವಾಗತಿಸಿದರು. ಉಪಾಧ್ಯಕ್ಷ ವಿಜಯ ಕೊಡವೂರು ಪ್ರಾಸ್ತಾವಿಕವಾಗಿ ಮಾತಾಡಿದರು. ಪ್ರಧಾನ ಕಾರ್ಯದರ್ಶಿ ರಂಜಿತ್ ಶೆಟ್ಟಿ ವಂದಿಸಿದರು.ನಂತರ ನಡೆದ ಕಾರ್ಯಕಾರಣಿಯಲ್ಲಿ ಬೇರೆ ಜಿಲ್ಲೆ ರಾಜ್ಯಗಳಿಂದ ಬರುವ ಮಾಲಾಧಾರಿಗಳಿಗೆ ತಮ್ಮ ಜಿಲ್ಲೆಗಳಲ್ಲಿ ಸಮಸ್ಯೆ ಉಂಟಾದಲ್ಲಿ ಕೂಡಲೇ ಸ್ಪಂದಿಸಬೇಕು, ಸ್ವಚ್ಛ ಶಬರಿಮಲೆ ಕಾರ್ಯಕ್ರಮದಲ್ಲಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು, ಗುರುಸ್ವಾಮಿಗಳು ಮತ್ತು ಮಾಲಾಧಾರಿಗಳು ವ್ರತ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು, ಶಬರಿಮಲೆಯಲ್ಲಿ ಇರುಮುಡಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಸೂಚನೆ ನೀಡಲಾಯಿತು. ಮಹಿಳೆಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಈ ಸಂಘಟನೆಯಲ್ಲಿ ಸೇರಿಕೊಳ್ಳುವ ಮೂಲಕ ಅಯ್ಯಪ್ಪ ಧರ್ಮ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಲಾಯಿತು.