ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಮರೀಚಿಕೆ : ಕಾಗೇರಿ

| Published : Oct 01 2024, 01:41 AM IST / Updated: Oct 01 2024, 12:30 PM IST

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಮರೀಚಿಕೆ : ಕಾಗೇರಿ
Share this Article
  • FB
  • TW
  • Linkdin
  • Email

ಸಾರಾಂಶ

ವಾಲ್ಮೀಕಿ ನಿಗಮದ ಹಗರಣದ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಮುಡಾ ಹಗರಣದ ದೂರು ದಾಖಲಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು.

ದಾಂಡೇಲಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ರಾಜ್ಯ ಸರ್ಕಾರ ಎಟಿಎಂ ಆಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಾಗ್ದಾಳಿ ನಡೆಸಿದರು.

ನಗರದ ಬಿಜೆಪಿ ಸದಸ್ಯತ್ವ ಅಭಿಯಾನ ಉದ್ಘಾಟಿಸಿ ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ, ಮುಡಾ ಹಗರಣ ಪ್ರಜಾತಂತ್ರ ವ್ಯವಸ್ಥೆಗೆ ಶೋಭೆ ತರುವಂಥದ್ದಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವಕಾಶವಾದಿ ರಾಜಕಾರಣ ಮಾಡಬಾರದು ಎಂದರು.

ವಾಲ್ಮೀಕಿ ನಿಗಮದ ಹಗರಣದ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಮುಡಾ ಹಗರಣದ ದೂರು ದಾಖಲಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಪಾಕಿಸ್ತಾನ ಜಿಂದಾಬಾದ್ ಎನ್ನುವವರಿಗೆ ವಿಶೇಷವಾದ ಗೌರವ, ಸ್ಥಾನಮಾನ ನೀಡುತ್ತಿರುವ ಕಾಂಗ್ರೆಸ್‌ಗೆ ನಾಡಿನ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ವಿಶ್ವನಾಯಕರಾಗಿ ರೂಪುಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಸದಸ್ಯರಾಗುವ ನಿಟ್ಟಿನಲ್ಲಿ ಒಂದಾಗಿ ಶ್ರಮಿಸಬೇಕು ಎಂದರು.

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಭ್ರಷ್ಟಾಚಾರದಲ್ಲಿ ಸರ್ಕಾರ ಮುಳುಗಿದೆ. ರಾಜ್ಯದಲ್ಲಿ ಆದಷ್ಟು ಶೀಘ್ರ ಬಿಜೆಪಿ ಮತ್ತೆ ಆಡಳಿತಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ಮುಖಂಡರಾದ ಮಂಗೇಶ ದೇಶಪಾಂಡೆ, ಬಿಜೆಪಿ ತಾಲೂಕು ಅಧ್ಯಕ್ಷ ಬುದವಂತ ಗೌಡ ಪಾಟೀಲ, ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಕಾಂತ ಕ್ಷೀರಸಾಗರ, ಎಂ.ಸಿ. ಹೆಗಡೆ, ರೋಶನ ನೇತ್ರಾವಳಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಮಿಥುನ ನಾಯಕ, ಗಿರೀಶ, ಉಪಾಧ್ಯಕ್ಷ ಗುರು ಮಠಪತಿ, ಬಿಜೆಪಿ ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಗೀತಾ ಶಿಕಾರಿಪುರ, ಮುಖಂಡ ಅಶೋಕ ಪಾಟೀಲ ಉಪಸ್ಥಿತರಿದ್ದರು.