ಸಾರಾಂಶ
ಗಜೇಂದ್ರಗಡ: ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿ ಸಮೂಹದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ನಿರಂತರ ಅಧ್ಯಯನವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಜಿ.ಎಸ್. ಪಾಟೀಲ ಹೇಳಿದರು.
ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವಿವಿಧ ಸಾಂಘಿಕ ಚಟುವಟಿಕೆಗಳ ಉದ್ಘಾಟನಾ ಸಮಾರಭದಲ್ಲಿ ಮಾತನಾಡಿದರು.ವಿದ್ಯಾರ್ಥಿ ಶಕ್ತಿಯೇ ದೇಶದ ಶಕ್ತಿಯಾಗಿದ್ದು, ನೀವು ಪಡೆಯುವ ಶಿಕ್ಷಣ ದೇಶದ ಪಥವನ್ನು ಬದಲಿಸಲಿದೆ. ವಿದ್ಯಾರ್ಥಿ ಸಮೂಹದ ಶೈಕ್ಷಣಿಕ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ವಿದ್ಯಾರ್ಥಿಗಳು ಯೋಜನೆಗಳ ಸದುಪಯೋಗಕ್ಕೆ ಮುಂದಾಗಬೇಕು. ಕಾಲೇಜಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಆಡಳಿತ ಒದಗಿಸಲಿದೆ ಎಂದ ಅವರು, ದೇಶದಲ್ಲಿ ಸಮಾನತೆ, ಭಾತೃತ್ವ ಹಾಗೂ ಜಾತ್ಯತೀತತೆ ದೇಶದ ಪ್ರತಿಬಿಂಬವಾಗಿವೆ. ಹೀಗಾಗಿ ಸಂವಿಧಾನ ನೀಡಿರುವ ಎಲ್ಲ ಅವಕಾಶ ಹಾಗೂ ಹಕ್ಕುಗಳನ್ನು ಪಡೆಯುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಜೀವನದ ಜತೆಗೆ ಕ್ರೀಡೆ ಸೇರಿದಂತೆ ಸಾಂಸ್ಕೃತಿಕ ಚಟಿವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಪರಿಪೂರ್ಣ ಶಿಕ್ಷಣ ಪಡೆಯಲು ಮುಂದಾಗಬೇಕು. ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ್ದು ನೀರಿನ ಮಹತ್ವ ಅರಿತುಕೊಳ್ಳಬೇಕು ಎಂದರು.ಕಾಲೇಜಿನ ಪ್ರಭಾರಿ ಪ್ರಾಚಾರ್ಯ ರಮೇಶ ಮರಾಠಿ ಹಾಗೂ ವಿಶ್ರಾಂತ ಉಪನ್ಯಾಸಕ ಶಿವಾನಂದ ಮುಚಖಂಡಿ ಮಾತನಾಡಿದರು.
ಈ ವೇಳೆ ಕಾಲೇಜು ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಘಟಕದ ಉದ್ಘಾಟನೆ ನೆರವೇರಿಸಿದ ಬಳಿಕ ೨೦೨೪ನೇ ಸಾಲಿನ ವಿವಿಧ ವಿಭಾಗಗಳಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ, ಸ್ಥಾಯಿ ಸಮಿತಿ ಚೇರ್ಮನ್ ಮುದಿಯಪ್ಪ ಮುಧೋಳ, ಪುರಸಭೆ ಸದಸ್ಯರಾದ ಶಿವರಾಜ ಘೋರ್ಪಡೆ, ರಾಜು ಸಾಂಗ್ಲೀಕರ, ವೆಂಕಟೇಶ ಮುದಗಲ್, ಮುಖಂಡ ಸಿದ್ದಪ್ಪ ಬಂಡಿ, ಅಮರೇಶ ಬಳಿಗೇರ, ಯಲ್ಲಪ್ಪ ಬಂಕದ, ಶ್ರೀಧರ ಬಿದರಳ್ಳಿ, ಬಸವರಾಜ ಕೊಟಗಿ, ಈಶಪ್ಪ ರಾಠೋಡ, ಉಮೇಶ ಚನ್ನುಪಾಟೀಲ ಹಾಗೂ ಹಿರಿಯ ಉಪನ್ಯಾಸಕ ಬಸಪ್ಪ ಜೆ, ಎಂ.ಎಂ.ಕಂದಗಲ್ಲ, ಸಿದ್ದಪ್ಪ ಪೂಜಾರ, ಸಂಗಮೇಶ ಹುನಗುಂದ, ಬಸಮ್ಮ ತಳವಾರ ಸೇರಿ ಇತರರು ಇದ್ದರು.