ಸಾರಾಂಶ
ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಸೋಮವಾರ ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.
ಕನ್ನಡಪ್ರಭ ವಾರ್ತೆ ಪುತ್ತೂರು
ಕೇವಲ ಒಂದು ಸಮುದಾಯಕ್ಕೆ ಮಾತ್ರ ಇರುವ ರಾಜ್ಯ ಸರ್ಕಾರ, ಬಹುಸಂಖ್ಯಾತರ ನಂಬಿಕೆಗಳನ್ನು ದಿಕ್ಕರಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಎಟಿಎಂ ಆಗಿದೆ. ಸಮಾಜವನ್ನು ಒಡೆಯಲು ಜಾತಿಗಣತಿ, ಬಡವರ್ಗಕ್ಕೆ ಮೂಲಸೌಕರ್ಯವಾದ ವಸತಿ ಸಿಗಬೇಕಾದರೆ ಲಂಚ, ಅಧಿಕಾರವನ್ನು ಬಳಸಿಕೊಂಡು ರಾಜ್ಯವನ್ನು ಲೂಟಿ ಮಾಡುತ್ತಿರುವ ಸಿದ್ದರಾಮಯ್ಯ ಸರ್ಕಾರ ಕರ್ನಾಟಕಕ್ಕೊಂದು ಶಾಪ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಆರೋಪಿಸಿದರು.ಅವರು ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಸೋಮವಾರ ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆಗಳಲ್ಲಿ ಯಾವುದೇ ಹೊಸ ಯೋಜನೆಯನ್ನು ತಂದಿಲ್ಲ ಎಂದು ಹೇಳಿದರು.
ಮೆರವಣಿಗೆಯಲ್ಲಿ ನಗರಸಭೆಗೆ ತೆರಳಿ ಪೌರಾಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ ಇದ್ದರು. ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು,ಬಿಜೆಪಿ ನಗರ ಮಂಡಲದ ಉಪಾಧ್ಯಕ್ಷ ಯುವರಾಜ್ ಪೆರಿಯತ್ತೋಡಿ, ನಗರಸಭಾ ಬಿಜೆಪಿ ಸದಸ್ಯರಾದ ಭಾಮಿ ಅಶೋಕ್ ಶೆಣೈ, ಜಯಂತಿ ನಾಯಕ್, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಜಯಲಕ್ಷ್ಮೀ ಶಗ್ರಿತ್ತಾಯ, ಯು.ಲೋಕೇಶ್ ಹೆಗ್ಡೆ, ನಗರಸಭೆ ಮಾಜಿ ಉಪಾಧ್ಯಕ್ಷ ವಿಶ್ವನಾಥ ಗೌಡ, ಟೌನ್ ಬ್ಯಾಂಕ್ ಉಪಾಧ್ಯಕ್ಷ ಶ್ರೀಧರ್ ಕಣಜಾಲು, ನಿರ್ದೇಶಕಾದ ಚಂದ್ರಶೇಖರ್ ರಾವ್ ಬಪ್ಪಳಿಗೆ, ಶ್ರೀಧರ್ ಪಟ್ಲ, ಸುರೇಶ್ ಶೆಟ್ಟಿ, ನಗರ ಯುವ ಮೋರ್ಚಾ ಅಧ್ಯಕ್ಷ ನಿತೇಶ್ ಕಲ್ಲೇಗ ಮತ್ತಿತರರು ಉಪಸ್ಥಿತರಿದ್ದರು.