ಸಾರಾಂಶ
ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ರಾಜ್ಯ ಸರ್ಕಾರ ಖಾತಾ ಪರಿವರ್ತನೆ ಹೆಸರಿನಲ್ಲಿ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಖಾತಾ ಪರಿವರ್ತನೆ ಹೆಸರಿನಲ್ಲಿ ಸರ್ಕಾರ ಒಂದು ಲಕ್ಷ ಕೋಟಿ ಆದಾಯ ತರಲು ಹೊರಟಿದ್ದಾರೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.ತಾಲೂಕಿನ ದೊಡ್ಡಮಳೂರು ಗ್ರಾಮದ ಸಾಯಿ ಮಂದಿರದಲ್ಲಿ ಆಯೋಜಿಸಿದ್ದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಖಾತಾ ಪರಿವರ್ತನೆ ಹೆಸರಿನಲ್ಲಿ ಸರ್ಕಾರ ಒಂದು ಲಕ್ಷ ಕೋಟಿ ಆದಾಯ ತರಲು ಹೊರಟಿದೆ. ಬಡವರ ಹೊಟ್ಟೆ ಮೇಲೆ ಹೊಡೆದು ಆದಾಯ ತರಲು ಹೊರಟಿದ್ದಾರೆ. ಜನರಿಗೆ ಒಳ್ಳೆಯದು ಮಾಡಬೇಕೆಂದರೆ ಅವತ್ತಿನ ಎಸ್‌ಆರ್ ವ್ಯಾಲ್ಯೂ ಮೇಲೆ ದರ ನಿಗದಿ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದರು.ಬೆಂಗಳೂರಲ್ಲಿ ೭.೫ ಲಕ್ಷ ಮನೆಗಳು ಇದಕ್ಕೆ ಒಳಪಡುತ್ತವೆ. ಅದಕ್ಕೆ ೧೦೦ ದಿನ ಟೈಂ ಲೈನ್ ನಿಗದಿ ಮಾಡಿದ್ದಾರೆ. ಖಾತೆ ವರ್ಗಾವಣೆಗೆ ಒಂದೊಂದು ಕಡೆ ಒಂದೊಂದು ಎಸ್‌ಆರ್ ವ್ಯಾಲ್ಯೂ ಇದೆ. ಇದರಿಂದ ಮಾಧ್ಯಮ ವರ್ಗದ ಜನರಿಗೆ ತೊಂದರೆಯಾಗುತ್ತೆ. ಜನರಿಗೆ ಒತ್ತಡ ಹೇರಿ ಅವರ ಬಳಿ ಹಣ ಕಸಿದು ಅವರಿಗೆ ಗ್ಯಾರಂಟಿ ರೂಪದಲ್ಲಿ ವಾಪಸ್ ಕೊಡುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕುಮಾರಸ್ವಾಮಿ ಖಾಲಿ ಟ್ರಂಕ್ ಎಂಬ ಡಿಸಿಎಂ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರ ಕಾಲಘಟ್ಟದಲ್ಲಿ ಏನೇನು ಮಾಡಿದ್ದಾರೆ ಅಂತ ರಾಜ್ಯದ ಜನತೆಗೆ ಗೊತ್ತು. ಅಧಿಕಾರದಲ್ಲಿದ್ದಾಗ ಕೊಟ್ಟಂತಹ ಕಾರ್ಯಕ್ರಮಗಳು ಜನರ ಮನಸ್ಸಿನಲ್ಲಿದೆ. ಚುನಾವಣೆ ಸಂದರ್ಭದಲ್ಲಿ ಏನೆಲ್ಲಾ ಮಾಡಿದ್ದಾರೆ ಮಾತನಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿದರು.ಭವಿಷ್ಯ ನುಡಿಯೋಕೆ ಡಿಕೆಶ ಜ್ಯೋತಿಷಿನಾ?:
ಮುಂದೆ ಜೆಡಿಎಸ್‌ಗೆ ೮ರಿಂದ ೯ ಸ್ಥಾನ ಬರುತ್ತೆ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಭವಿಷ್ಯ ನುಡಿಯೋಕೆ ಅವರ ಯಾರು, ರಾಜ್ಯದ ಜನ ನಮ್ಮ ಭವಿಷ್ಯ ತೀರ್ಮಾನ ಮಾಡ್ತಾರೆ. ಭವಿಷ್ಯ ಹೇಳೋಕೆ ಅವರೇನು ಜ್ಯೋತಿಷಿನಾ? ಅವರು ಭವಿಷ್ಯ ನುಡಿಯಲಿ ಟೈಂ ಬಂದಾಗ ಮಾತಾಡ್ತೀವಿ ಎಂದು ತಿರುಗೇಟು ನೀಡಿದರು.ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಶೂನ್ಯವಾಗಿದೆ. ಶಾಸಕರಿಗೆ ಅನುದಾನ ಕೊಡುತ್ತೇವೆ ಎಂದು ಹೇಳಿ ಕೊಟ್ಟಿಲ್ಲ. ಒಬ್ಬ ಶಾಸಕನಿಗೆ ೧೦ ಕೋಟಿ ರು. ಅನುದಾನವೂ ಸಿಕ್ಕಿಲ್ಲ. ಕಾಂಗ್ರೆಸ್ ಶಾಸಕರೇ ಅನುದಾನ ಸಿಕ್ಕಿಲ್ಲ ಎಂದು ಹೇಳ್ತಾರೆ. ಕಂಟ್ರ್ಯಾಕ್ಟರ್‌ಗಳ ಕಥೆ ಏನಾಗಿದೆ, ಹಣ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರದ ಕಾಲಘಟ್ಟದಲ್ಲಿ ಅಭಿವೃದ್ಧಿ ಆಗ್ತಿಲ್ಲ ದೂರಿದರು.
ಜನರು ಕೆಲವು ಸಂದರ್ಭದಲ್ಲಿ ಅವಕಾಶ ನೀಡುತ್ತಾರೆ. ಜೆಡಿಎಸ್ ಅಧಿಕಾರದಲ್ಲಿ ಇದ್ದಾಗ ಅಧಿಕಾರಿಗಳನ್ನು ಮುಂದೆ ಇಟ್ಟುಕೊಂಡು ರಾಜಕಾರಣ ಮಾಡಿಲ್ಲ. ಇದೀಗ ಕಾಂಗ್ರೆಸ್ ನಮಗೆ ಮೇಲ್ಪಂಕಿ ಹಾಕಿಕೊಡುತ್ತಿದೆ. ನಾವು ಅಧಿಕಾರಕ್ಕೆ ಬಂದಾಗ ಹೀಗೇ ನಡೆದುಕೊಳ್ಳಬೇಕು ಎಂಬ ಚರ್ಚೆ ಹುಟ್ಟುಕೊಂಡಿದೆ. ಗ್ಯಾರಂಟಿ ಯೋಜನೆ ಜನರಿಗೆ ಸಮರ್ಪಕವಾಗಿ ಮುಟ್ಟುತ್ತಿಲ್ಲ ಎಂದರು.ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ. ಈಗಾಗಲೇ ದೇವೇಗೌಡರು ಎಲ್ಲ ಚುನಾವಣೆಯಲ್ಲಿ ಮೈತ್ರಿ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ನಾವು ಬಿಜೆಪಿ ಕೂತು ಚರ್ಚೆ ಮಾಡುತ್ತೇವೆ ಎಂದರು.
;Resize=(128,128))
;Resize=(128,128))
;Resize=(128,128))
;Resize=(128,128))