ಕನ್ನಡಪ್ರಭ ವಾರ್ತೆ ಬೆಳಗಾವಿ

ಕೇಂದ್ರ ಸರ್ಕಾರದ ನೆರವಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರು ಬೆಳೆದ ಆಹಾರ ಧಾನ್ಯಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದುವರೆಗೆ ಕೇವಲ 2.57 ಲಕ್ಷ ಟನ್ ಆಹಾರ ಧಾನ್ಯಗಳನ್ನು ಮಾತ್ರ ಬೆಂಬಲ ಬೆಲೆ ಅಡಿಯಲ್ಲಿ ಖರೀದಿಸಲಾಗಿದೆ ಎಂದು ಎಫ್‌ಸಿಐ ಕಾರ್ಯನಿರ್ವಹಣೆ ರಾಜ್ಯಮಟ್ಟದ ಸಲಹಾ ಸಮಿತಿ ಅಧ್ಯಕ್ಷ ಹಾಗೂ ರಾಜ್ಯಸಭಾ ಮಾಜಿ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಕರ್ನಾಟಕ ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ಸುಮಾರು 54.54 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು ಸುರಕ್ಷಿತವಾಗಿ ಸಾಗಿಸಿ, ಶೂನ್ಯ ಹಾನಿ ಸಾಧನೆ ಮಾಡಿದೆ. ಅತ್ಯಂತ ಕಡಿಮೆ ಸಂಗ್ರಹಣಾ ಹಾಗೂ ಸಾಗಾಣಿಕೆ ನಷ್ಟ ದಾಖಲಿಸಿದೆ ಎಂದರು.ಆಹಾರ ಧಾನ್ಯಗಳ ಸಂಗ್ರಹಣೆ, ಸಾಗಣೆ ಮತ್ತು ಗುಣಮಟ್ಟ ನಿರ್ವಹಣೆಯಲ್ಲಿ ಕರ್ನಾಟಕ ಪ್ರದೇಶವು ಕೇಂದ್ರ ಕಚೇರಿ ಹಾಗೂ ಆಹಾರ ಮತ್ತು ಸಾರ್ವಜನಿಕ ವಿತರಣೆ ಇಲಾಖೆಯು ನಿಗದಿಪಡಿಸಿರುವ ಮಾನದಂಡಗಳನ್ನು ಸಮರ್ಪಕವಾಗಿ ಪಾಲಿಸಿದೆ. ಬೆಳಗಾವಿ ಜಿಲ್ಲೆಯ ಬೆನಕನಹಳ್ಳಿಯಲ್ಲಿರುವ ಭಾರತೀಯ ಆಹಾರ ನಿಗಮದ ಡಿಪೋ ದಕ್ಷಿಣ ಭಾರತದ ಅತ್ಯುತ್ತಮ ಡಿಪೋ ಎಂಬ ಪ್ರಶಸ್ತಿಗೆ ಪಾತ್ರವಾಗಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಮಹೇಶ್ವರಪ್ಪ, ಶ್ರೀಕಾಂತ ಕೌಜಲಗಿ, ಬಸವರಾಜ‌ ಗಾಡಬಿ,ಮಂಜುನಾಥ ಹೊಂಗಲ್, ಭಕ್ತವಸ್ತಲಂ, ಶಶಿ ಬಾಡ್ಕರ್ ಉಪಸ್ಥಿತರಿದ್ದರು.ಕುಂಬಳಕಾಯಿ ಕಳ್ಳ ಎಂದರೆ ಏಕೆ ಹೆಗಲು ಮುಟ್ಟಿಕೊಂಡು ನೋಡಿಕೊಳ್ಳುತ್ತಾರೆ? ಆರ್‌ಎಸ್‌ಎಸ್ ಸಂವಿಧಾನವನ್ನು ಪಾಲಿಸುವ ಸಂಘಟನೆ. ವಿನಾಕಾರಣ ಆರ್‌ಎಸ್‌ಎಸ್ ವಿಚಾರವನ್ನು ಉದ್ದೇಶಪೂರ್ವಕವಾಗಿ ಕೆಣಕುವ ಕೆಲಸವನ್ನು ಪ್ರಿಯಾಂಕ್ ಖರ್ಗೆ ಮಾಡುತ್ತಿದ್ದಾರೆ.

-ಈರಣ್ಣ ಕಡಾಡಿ,


ರಾಜ್ಯಸಭಾ ಮಾಜಿ ಸದಸ್ಯರು.