ಸಾರಾಂಶ
ಮೈಸೂರು : ಜಿಲ್ಲೆಯ ಎಚ್.ಡಿ.ಕೋಟೆ ಮತ್ತು ಸರಗೂರು ಭಾಗದಲ್ಲಿ ಹುಲಿ ದಾಳಿ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಬಂಡೀಪುರದಲ್ಲಿ ಸಂಜೆ ವೇಳೆಯ ಸಫಾರಿಯನ್ನು ರದ್ದುಪಡಿಸಲಾಗಿದೆ.
ಮನುಷ್ಯರ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣ ಹೆಚ್ಚಳ
ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿ ಹುಲಿಗಳು ಕಾಡಿನಿಂದ ಹೊರ ಬಂದು ಮನುಷ್ಯರ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಗೂ ರೈತ ಸಂಘಟನೆಗಳ ಒತ್ತಾಯದ ಮೇರೆಗೆ ಬಂಡೀಪುರ ಸಫಾರಿಯಲ್ಲಿ ಕೊನೆಯ ಒಂದು ಟ್ರಿಪ್ ಅನ್ನು ಕಡಿತಗೊಳಿಸಿ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ.
ನಿರಂತರವಾಗಿ ಹುಲಿ ದಾಳಿ
ಬಂಡೀಪುರ, ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಎಚ್.ಡಿ.ಕೋಟೆ, ಸರಗೂರು, ನಂಜನಗೂಡು, ಗುಂಡ್ಲುಪೇಟೆ ತಾಲೂಕುಗಳಲ್ಲಿ ನಿರಂತರವಾಗಿ ಹುಲಿ ದಾಳಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸುವಂತೆ ಒತ್ತಡ ಹೇರಿದ್ದವು. ಹುಲಿ ದಾಳಿ ತಡೆಗಟ್ಟುವಂತೆ ಒತ್ತಾಯ ಹೆಚ್ಚಾದ ಹಿನ್ನೆಲೆಯಲ್ಲಿ ಸಂಜೆ ವೇಳೆಯ ಸಫಾರಿ ರದ್ದುಪಡಿಸಲಾಗಿದೆ. ಸಫಾರಿ ವಾಹನಗಳ ಬೆಳಕು, ಶಬ್ಧಕ್ಕೆ ಪ್ರಾಣಿಗಳು ಕಾಡಿನಿಂದ ನಾಡಿಗೆ ಬರುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಸರಗೂರು ತಾಲೂಕಿನಲ್ಲಿ ಕಳೆದೊಂದು ವಾರದ ಅವಧಿಯಲ್ಲಿ ಹುಲಿ ಇಬ್ಬರು ರೈತರ ಮೇಲೆ ದಾಳಿ ನಡೆಸಿದ್ದು, ಓರ್ವ ರೈತ ಮೃತಪಟ್ಟಿದ್ದಾನೆ. ಸರಗೂರು ತಾಲೂಕಿನ ಮುಳ್ಳೂರು ಗ್ರಾಮದ ರೈತ ರಾಜಶೇಖರ ಹುಲಿದಾಳಿಗೆ ಮಂಗಳವಾರ ಬಲಿಯಾಗಿದ್ದು, ಈ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು.
;Resize=(690,390))
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))