ರಾಷ್ಟ್ರೀಯ ಲೋಕ ಅದಾಲತ್- 6505 ಪ್ರಕರಣಗಳು ಇತ್ಯರ್ಥ

| Published : Sep 15 2024, 01:55 AM IST

ಸಾರಾಂಶ

58688 ಸಿವಿಲ್ ಪ್ರಕರಣಗಳು ಹಾಗೂ 60286 ಕ್ರಿಮಿನಲ್ ಪ್ರಕರಣ

ಕನ್ನಡಪ್ರಭ ವಾರ್ತೆ ಮೈಸೂರು

ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 6505 ಪ್ರಕರಣಗಳು ಇತ್ಯರ್ಥವಾಗಿದೆ.ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಶನಿವಾರ ಮೈಸೂರು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿತ್ತು.ಮೈಸೂರು ನಗರ ಮತ್ತು ತಾಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 118974 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 58688 ಸಿವಿಲ್ ಪ್ರಕರಣಗಳು ಹಾಗೂ 60286 ಕ್ರಿಮಿನಲ್ ಪ್ರಕರಣಗಳಿದ್ದು, ಸದರಿ ಪ್ರಕರಣಗಳಲ್ಲಿ 19363 ಪ್ರಕರಣಗಳನ್ನು ರಾಜಿಯಾಗಬಹುದಾದ ಪ್ರಕರಣಗಳಿದ್ದು, ಅವುಗಳ ಪೈಕಿ 9126 ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ರಾಜಿ ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ (ನ್ಯಾಯಾಲಯದಲ್ಲಿ ಬಾಕಿ ಇರುವ) 6505 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಇತ್ಯರ್ಥಪಡಿಸಲಾಗಿದೆ.31 ಜೋಡಿ ಒಂದಾದರುಈ ಬಾರಿ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ತಾಲೂಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು 31 ದಂಪತಿ ತಮ್ಮ ಮಧ್ಯದ ವಾಜ್ಯಗಳನ್ನು ಬಗೆಹರಿಸಿಕೊಂಡು ಒಂದಾಗಿರುತ್ತಾರೆ. ಲೋಕ್ ಅದಾಲತ್ ನಲ್ಲಿ ಒಟ್ಟಾರೆಯಾಗಿ 6505 ನ್ಯಾಯಾಲಯದಲ್ಲಿ ಬಾಕಿಯಿದ್ದ ಪ್ರಕರಣಗಳು ತೀರ್ಮಾನವಾಗಿರುತ್ತದೆ. ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನ ಮೂಲಕ ಒಟ್ಟು 36,36,02,361 ರೂ. ಇತ್ಯರ್ಥವಾಗಿರುತ್ತದೆ.ಈ ಯಶಸ್ಸಿಗೆ ಸಹಕರಿಸಿದ ವಕೀಲರ ಸಂಘದ ಪದಾಧಿಕಾರಿಗಳು, ಎಲ್ಲಾ ವಕೀಲರು ಹಾಗೂ ಕಕ್ಷಿಗಾರರು, ಪೊಲೀಸ್ ಇಲಾಖೆಯನ್ನೊಳಗೊಂಡಂತೆ ಎಲ್ಲಾ ಇಲಾಖೆಗಳಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರವೀಂದ್ರ ಹೆಗಡೆ ಕೃತಜ್ಞತೆ ಸಲ್ಲಿಸಿದರು.