ಸಾರಾಂಶ
State level award ceremony at 17
ಬೀದರ್: ಪುನೀತ ರಾಜಕುಮಾರ 50ನೇ ಜನ್ಮದಿನ ನಿಮಿತ್ತ ಕರ್ನಾಟಕ ಸಾಹಿತ್ಯ ಸಾಂಸ್ಕೃತಿಕ ಸಭಾಂಗಣದಲ್ಲಿ 17ರಂದು ಬೆಳಗ್ಗೆ 11.30ರವರೆಗೆ ಕರವೇ ಕಾವಲು ಪಡೆಯಿಂದ ಪುನೀತ್ ರಾಜಕುಮಾರ ಅವರ 50ನೇ ಜನ್ಮ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.
ಕರವೇ ಕಾವಲು ಪಡೆ ಜಿಲ್ಲಾಧ್ಯಕ್ಷರಾದ ಅವಿನಾಶ ಬುದೇರಾಕರ್ ಅವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಯ ಸಾಧಕರಿಗೆ ರಾಜ್ಯ ಮಟ್ಟದ ಕರ್ನಾಟಕ ರತ್ನ ಡಾ. ಪುನೀತ ರಾಜಕುಮಾರ ಪ್ರಶಸ್ತಿ ಪ್ರದಾನ, ಕನ್ನಡ ಹಾಡುಗಳ ಗಾಯನ್ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ಹವಾಮಲ್ಲಿನಾಥ ಸ್ವಾಮಿಜಿ ಸಾನಿಧ್ಯ ವಹಿಸಲಿದ್ದು, ನಗರ ಸಭೆ ಅಧ್ಯಕ್ಷ ಎಂಡಿ ಗೌಸ್ ಉದ್ಘಾಟಿಸುವರು. ಕರವೇ ಕಾವಲುಪಡೆ ರಾಜ್ಯಾಧ್ಯಕ್ಷ ಎಚ್ ಸುರೇಶ ಬೆಂಗಳೂರು ಅಧ್ಯಕ್ಷತೆ ವಹಿಸುವರು. ಸಚಿವ ಈಶ್ವರ ಖಂಡ್ರೆ, ಪೌರಾಡಳಿತ, ಹಜ್ ಸಚಿವರಾದ ರಹೀಂ ಖಾನ್ ಸಂಸದರಾದ ಸಾಗರ ಖಂಡ್ರೆ, ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಅಮೃತರಾವ ಚಿಮಕೊಡೆ ಸೇರಿದಂತೆ ಇನ್ನಿತರರು ಭಾಗವಹಿಸುವರು.
ಇದೇ ಸಂದರ್ಭದಲ್ಲಿ 70 ಜನ ವಿವಿಧ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪುನೀತ ರಾಜಕುಮಾರ ಜೀವನ ಮತ್ತು ಸಾಮಾಜ ಸೇವೆ ಕುರಿತು ಸಾಹಿತಿ ಡಾ. ಸುಬ್ಬಣ್ಣ ಕರಕನಳ್ಳಿ ಉಪನ್ಯಾಸ ನೀಡುವರು ಎಂದು ತಿಳಿಸಿದ್ದಾರೆ.--
ಚಿತ್ರ 15ಬಿಡಿಆರ್59ಅವಿನಾಶ ಬುದೇರಾಕರ್