ಸಾರಾಂಶ
ದೊಡ್ಡಬಳ್ಳಾಪುರ: ಕೃಷಿ ಹಾಗೂ ಸಹಕಾರ ಕ್ಷೇತ್ರದಲ್ಲಿ ಸಾಧನೆ ಸಲ್ಲಿಸಿರುವ ಆರ್.ಎಲ್. ಜಾಲಪ್ಪ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ದೊಡ್ಡಬಳ್ಳಾಪುರ: ಕೃಷಿ ಹಾಗೂ ಸಹಕಾರ ಕ್ಷೇತ್ರದಲ್ಲಿ ಸಾಧನೆ ಸಲ್ಲಿಸಿರುವ ಆರ್.ಎಲ್. ಜಾಲಪ್ಪ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ದೊಡ್ಡಬಳ್ಳಾಪುರದಲ್ಲಿ ಭಾನುವಾರ ನಡೆದ ಆರ್.ಎಲ್.ಜಾಲಪ್ಪ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ಜಾಲಪ್ಪ ಶತಮಾನೋತ್ಸವ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ಅನ್ನು ಆರ್.ಎಲ್. ಜಾಲಪ್ಪ ಅವರು ಸ್ಥಾಪಿಸಿರುವುದು ಇಂದಿಗೂ ಚಿರಾಯುವಾಗಿದೆ ಎಂದ ಅವರು, ಗ್ಯಾರಂಟಿ ಯೋಜನೆಗಳಿಂದ ಸುಮಾರು ನಾಲ್ಕುವರೆ ಕೋಟಿ ಜನ ಪ್ರಯೋಜನ ಪಡೆದಿದ್ದಾರೆ. ಬಡವರು, ದಲಿತರು ನೆಮ್ಮದಿಯಿಂದ ಜೀವನಮಾಡುತ್ತಿದ್ದಾರೆ. ಇಂದಿರಾಗಾಂಧಿ ಅವರ ಹೆಸರಿನಲ್ಲಿ ಪೌಷ್ಟಿಕ ಆಹಾರ ನೀಡುವ ಕುರಿತು ಚಿಂತನೆ ಮಾಡಲಾಗಿದೆ ಎಂದರು.
ಜಾಲಪ್ಪ ಹೆಸರಲ್ಲಿ ಪ್ರಶಸ್ತಿ ನೀಡಿ:ಮಾಜಿ ವಿಧಾನ ಪರಿಷತ್ ಸಭಾಪತಿ ವಿ.ಆರ್.ಸುದರ್ಶನ ಮಾತನಾಡಿ, ಜಾಲಪ್ಪ ಅವರು ಹಸಕಾರ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿದ್ದಾರೆ. ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರಶಸ್ತಿ ಸ್ಥಾಪನೆ ಮಾಡಬೇಕು. ಸರ್ಕಾರದ ವತಿಯಿಂದಲೇ ಜಿಲ್ಲೆಯಲ್ಲಿ ಜಾಲಪ್ಪ ಅವರ ಜನ್ಮಶತಮಾನೋತ್ಸವ ಆಚರಿಸಬೇಕು ಎಂದರು.
ಮಾಜಿ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್ ಮಾತನಾಡಿ, ವ್ಯವಸ್ಥೆಯಲ್ಲಿ ಯೋಗ್ಯತೆ ಇರುವವರಿಗೆ ಚಾರಿತ್ರ್ಯವಧೆ, ಮಾನಸಿಕ ಹಿಂಸೆ ಸಾಮಾನ್ಯ. ತಮ್ಮ ಅಗಾಧ ಪ್ರತಿಭೆ, ಕಾರ್ಯದಕ್ಷತೆಯಿಂದ ರಾಜಕೀಯದಲ್ಲಿ ಛಾಪು ಮೂಡಿಸಿದ ಧೀಮಂತ ನಾಯಕ ಆರ್.ಎಲ್. ಜಾಲಪ್ಪ ಅವರು ಒಂದು ಹಂತದಲ್ಲಿ ಮತ್ಸರಕ್ಕೆ ತುತ್ತಾಗಿ ಸಂಕಷ್ಟ ಅನುಭವಿಸಿದ್ದು ಇತಿಹಾಸ ಎಂದರು.ಫೋಟೋ-
19ಕೆಡಿಬಿಪಿ6- ದೊಡ್ಡಬಳ್ಳಾಪುರದಲ್ಲಿ ನಡೆದ ಜಾಲಪ್ಪ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಶತಮಾನೋತ್ಸವ ಭವನಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ಶಿಲಾನ್ಯಾಸ ನೆರವೇರಿಸಿದರು.