ಹಿಮ್ಸ್ ಆವರಣದಲ್ಲಿ ರಾಜ್ಯಮಟ್ಟದ ಕಾನೂನು ಅರಿವು

| Published : Nov 30 2024, 12:49 AM IST

ಸಾರಾಂಶ

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಹಿಮ್ಸ್) ಆವರಣದಲ್ಲಿ ಇಂದು (ನ.೩೦) ಬೆಳಿಗ್ಗೆ ೧೦ ಗಂಟೆಗೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ರಾಜ್ಯಮಟ್ಟದ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅಕ್ಷಯ್ ಡಿ.ಎಂ. ಗೌಡ ತಿಳಿಸಿದರು. ಎಲ್ಲಾ ಇಲಾಖೆಗಳಲ್ಲಿಯೂ ಹೊರಗುತ್ತಿಗೆ ನೌಕರರೆಂದರೆ ನಿರ್ಲಕ್ಷ್ಯತೋರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ನೀಡದೆ ಇರುವುದು ವಿಪರ್ಯಾಸ. ಹೀಗಾಗಿ ಸಂಘಟನೆ ಮೂಲಕ ನಮ್ಮ ಹಕ್ಕೊತ್ತಾಯಗಳನ್ನು ಸರ್ಕಾರದ ಮುಂದಿಡಲು ಮುಂದಾಗಿದ್ದೇವೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಹಿಮ್ಸ್) ಆವರಣದಲ್ಲಿ ಇಂದು (ನ.೩೦) ಬೆಳಿಗ್ಗೆ ೧೦ ಗಂಟೆಗೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ರಾಜ್ಯಮಟ್ಟದ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅಕ್ಷಯ್ ಡಿ.ಎಂ. ಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಎಲ್ಲಾ ಇಲಾಖೆಗಳಲ್ಲಿಯೂ ಹೊರಗುತ್ತಿಗೆ ನೌಕರರೆಂದರೆ ನಿರ್ಲಕ್ಷ್ಯತೋರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ನೀಡದೆ ಇರುವುದು ವಿಪರ್ಯಾಸ. ಹೀಗಾಗಿ ಸಂಘಟನೆ ಮೂಲಕ ನಮ್ಮ ಹಕ್ಕೊತ್ತಾಯಗಳನ್ನು ಸರ್ಕಾರದ ಮುಂದಿಡಲು ಮುಂದಾಗಿದ್ದೇವೆ ಎಂದರು.

ಹೊರಗುತ್ತಿಗೆ ನೌಕರರಿಗೂ ಸರ್ಕಾರದ ನೀತಿ ನಿಯಮ ಹಾಗೂ ಕಾನೂನಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಕಾರ್ಯಕ್ರಮದ ಉಪಸ್ಥಿತಿ ವಹಿಸಲಿದ್ದು, ಸಹಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಇದರ ಜೊತೆ ಸಂಸದ ಶ್ರೇಯಸ್ ಪಟೇಲ್, ಎಂಎಲ್‌ಸಿ ಸೂರಜ್ ರೇವಣ್ಣ ಭಾಗವಹಿಸಲಿದ್ದು, ಶಾಸಕ ಸ್ವರೂಪ ಪ್ರಕಾಶ್‌ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಸಾದ್, ಶೋಭಾ, ಲೋಕೇಶ್, ಇತರರು ಉಪಸ್ಥಿತರಿದ್ದರು.