ಆಗಸ್ಟ್‌ 3ರಂದು ಕುರುಬ ಸಮಾಜದ ರಾಜ್ಯಮಟ್ಟದ ವಧು-ವರರ ಸಮಾವೇಶ: ರುದ್ರಣ್ಣ

| Published : Jul 03 2025, 11:49 PM IST

ಆಗಸ್ಟ್‌ 3ರಂದು ಕುರುಬ ಸಮಾಜದ ರಾಜ್ಯಮಟ್ಟದ ವಧು-ವರರ ಸಮಾವೇಶ: ರುದ್ರಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಹಾಲುಮತ ಮಹಾಸಭಾ ಜಿಲ್ಲಾ ಘಟಕ ಹಾಗೂ ಪ್ರದೇಶ ಕುರುಬರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಆ. 3 ರಂದು ಬೆಳಗ್ಗೆ 10ಕ್ಕೆ ನಗರದ ಮುಳಗುಂದ ರಸ್ತೆಯಲ್ಲಿರುವ ಶ್ರೀಕನಕ ಭವನದಲ್ಲಿ ಹಾಲುಮತ (ಕುರುಬ) ಸಮಾಜದ 7ನೇ ರಾಜ್ಯಮಟ್ಟದ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಹೇಳಿದರು.

ಗದಗ: ಹಾಲುಮತ ಮಹಾಸಭಾ ಜಿಲ್ಲಾ ಘಟಕ ಹಾಗೂ ಪ್ರದೇಶ ಕುರುಬರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಆ. 3 ರಂದು ಬೆಳಗ್ಗೆ 10ಕ್ಕೆ ನಗರದ ಮುಳಗುಂದ ರಸ್ತೆಯಲ್ಲಿರುವ ಶ್ರೀಕನಕ ಭವನದಲ್ಲಿ ಹಾಲುಮತ (ಕುರುಬ) ಸಮಾಜದ 7ನೇ ರಾಜ್ಯಮಟ್ಟದ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಗುರುವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಸಮಾವೇಶದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಹಾಗೂ ಗದಗ ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಿಂದ ಸುಮಾರು 250ಕ್ಕೂ ಹೆಚ್ಚು ವಧು-ವರರು ಆಗಮಿಸಲಿದ್ದಾರೆ. ವಧು-ವರರಿಗೆ ಹಾಲುಮತದ ಸಂಪ್ರದಾಯದಂತೆ ಉಡಿತುಂಬಿ ಪರಿಚಯಿಸಲಾಗುವುದು. ಇದೇ ಸಂದರ್ಭದಲ್ಲಿ ಸಮಾಜದ ಐವರು ಹಿರಿಯರಿಗೆ ಜೀವಮಾನ ಸಾಧನೆಗಾಗಿ ಸನ್ಮಾನಿಸಲಾಗುವುದು ಎಂದರು. ಸಮಾವೇಶದಲ್ಲಿ ಬೇರೆ ಬೇರೆ ಊರುಗಳಿಂದ ವಧು-ವರರು ಆಗಮಿಸುವುದರಿಂದ ಪಾಲಕರು ತಮ್ಮ ಮಕ್ಕಳಿಗೆ ಒಂದೇ ವೇದಿಕೆಯಲ್ಲಿ ಹಲವಾರು ಆಯ್ಕೆಗಳಿಗಾಗಿ ಇಲ್ಲಿ ಅವಕಾಶ ಕಲ್ಪಿಸಲಾಗುತ್ತದೆ. ಪಾಲಕರಿಗೆ ಸಮಯದ ಉಳಿತಾಯ ಹಾಗೂ ಸೂಕ್ತ ವಧು-ವರರನ್ನು ಆಯ್ಕೆ ಮಾಡುವ ಸದವಕಾಶವನ್ನು ಇಲ್ಲಿ ನಿರ್ಮಿಸಲಾಗುತ್ತದೆ. ಈಗಾಗಲೇ ಹೆಸರು ನೋಂದಾಯಿಸುವ ಕಾರ್ಯ ಆರಂಭವಾಗಿದ್ದು. ಆಸಕ್ತರು ಶ್ರೀ ದುರ್ಗಾದೇವಿ ಶಿಕ್ಷಣ ಸಮಿತಿ ಶ್ರೀ ಬನಶಂಕರಿ ದೇವಿ ದೇವಸ್ಥಾನದ ಆವರಣ ಗಂಗಾಪುರ ಪೇಟೆ ಗದಗದಲ್ಲಿ ಸದಸ್ಯತ್ವ ಶುಲ್ಕದೊಂದಿಗೆ ಹೆಸರನ್ನು ನೋಂದಾಯಿಸಬೇಕು. ನೋಂದಣಿಗಾಗಿ ವೆಂಕಟೇಶ ಇಮರಾಪೂರ ಮೊ.ಸಂ.9742842133, ಮುತ್ತು ಜಡಿ 9880831983 ಅವರನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ನಾಗರಾಜ ಮೆಣಸಗಿ ಮೊ.ಸಂ 9448746400, ಬಸವರಾಜ ನೀಲಗಾರ 8970974959, ಸೋಮನಗೌಡ ಪಾಟೀಲ 9845636775 ಅವರನ್ನು ಸಂಪರ್ಕಿಸಬಹುದು ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರದೇಶ ಕುರುಬ ಸಂಘದ ತಾಲೂಕು ಅಧ್ಯಕ್ಷ ನಾಗಪ್ಪ ಗುಗ್ಗರಿ, ಉಮಾ ದ್ಯಾವನೂರ, ಚನ್ನಮ್ಮ ಹುಳಕಣ್ಣವರ, ನಾಗರಾಜ ಮೆಣಸಗಿ, ಬಸವರಾಜ ನೀಲಗಾರ, ಸೋಮನಗೌಡ ಪಾಟೀಲ, ರಾಘು ವಗ್ಗನವರ, ಮುತ್ತು ಜಡಿ, ಸತೀಶ ಗಿಡ್ಡಹನಮಣ್ಣವರ, ಮಂಜುನಾಥ ಜಡಿ, ಹೇಮಂತ ಗಿಡ್ಡಹನಮಣ್ಣವರ, ಉಮೇಶ ಪೂಜಾರ, ಬಸವರಾಜ ಕುರಿ, ಕುಮಾರ ಮಾರನಬಸರಿ, ರವಿ ವಗ್ಗನವರ ಸೇರಿದಂತೆ ಮುಂತಾದವರು ಇದ್ದರು.