ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ: ಚಾಮೆರ ನಕ್ಷ ದೇಚಮ್ಮ ಭಾಗಿ

| Published : Jan 18 2025, 12:47 AM IST

ಸಾರಾಂಶ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಆಯೋಜಿಸಲಾದ 20ನೇ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯ ಏಕೈಕ ಪ್ರತಿನಿಧಿಯಾಗಿ ಚಾಮೆರ ನಕ್ಷ ದೇಚಮ್ಮ ಭಾಗವಹಿಸಿ ಕವನ ವಾಚನ ಮಾಡಿದಳು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಆಯೋಜಿಸಲಾದ 20ನೇ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದ ಚಾಮೆರ ನಕ್ಷದೇಚಮ್ಮ, ಕವನ ವಾಚಿಸಿದಳು.

ಭೈರವಕ್ಯ ಜಗದ್ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ 80ನೇ ಜನ್ಮೋತ್ಸವದ ನೆನಪಿನಲ್ಲಿ ಮಠದಲ್ಲಿ, ಪರಮಪೂಜ್ಯ ಜಗದ್ಗುರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ, ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಗೋ. ಚನ್ನಬಸಪ್ಪ, ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು, ಮಕ್ಕಳ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಅಶೋಕ್, ಕನ್ನಡ ಸಾಹಿತ್ಯ ಪರಿಷತ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಮಂಜುನಾಥ ಸೇರಿದಂತೆ ಗಣ್ಯರು ಉಪಸ್ಥಿತಿಯಲ್ಲಿ ನಡೆದ ಸಮ್ಮೇಳನದಲ್ಲಿ ಚಾಮೆರ ನಕ್ಷ ದೇಚಮ್ಮ ಕೊಡಗು ಜಿಲ್ಲೆಯ ಏಕೈಕ ಪ್ರತಿನಿಧಿಯಾಗಿ ಭಾಗವಹಿಸಿ ಕವನ ವಾಚನ ಮಾಡಿದಳು.

ಚಾಮೆರ ದಿನೇಶ್ ಬೆಳ್ಯಪ್ಪ, ಪ್ರಿಯಾ ದಿನೇಶ್ ದಂಪತಿಯ ಮಗಳಾದ ಚಾಮೆರ ನಕ್ಷದೇಚಮ್ಮ, ಅರಮೇರಿ ಕಳಂಚೇರಿ ಎಸ್.ಎಂ.ಎಸ್. ವಿದ್ಯಾಪೀಠದ ನಾಲ್ಕನೇ ತರಗತಿ ವಿದ್ಯಾರ್ಥಿನಿ.