ಸಾರಾಂಶ
ಕನ್ನಡಪ್ರಭ ವಾರ್ತೆ ಹೊಸಪೇಟೆಸಿರಿಗನ್ನಡ ವೇದಿಕೆಯು ಎರಡೂವರೆ ದಶಕಗಳಿಂದಲೂ ಕನ್ನಡ ನಾಡು, ನುಡಿಯ ಸೇವೆ ಮಾಡುತ್ತಾ ಬಂದಿದ್ದು, ನಾಡಿನಾದ್ಯಂತ ಅನೇಕ ಕಾರ್ಯಕ್ರಮ ಆಯೋಜಿಸುವ ಮುಖೇನ ಕನ್ನಡದ ಕಂಪನ್ನು ಪಸರಿಸುತ್ತಿದೆ. ಮುಂಬರುವ ದಿನಗಳಲ್ಲಿ ವೇದಿಕೆ ವತಿಯಿಂದ ವಿಜಯನಗರ ಸಾಮ್ರಾಜ್ಯದ ಪುಣ್ಯಭೂಮಿ ಹೊಸಪೇಟೆಯಲ್ಲಿ ರಾಜ್ಯಮಟ್ಟದ ಸಮ್ಮೇಳನ ಆಯೋಜನೆ ಮಾಡಲು ಉದ್ದೇಶಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ಜಿ.ಎಸ್. ಗೋನಾಳ ಹೇಳಿದರು. ನಗರದ ಸಂಡೂರು ರಸ್ತೆಯಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾದ ಸಿರಿಗನ್ನಡ ವೇದಿಕೆ ಹೊಸಪೇಟೆ ತಾಲೂಕು ಘಟಕದ ಉದ್ಘಾಟನೆ, ಪದಗ್ರಹಣ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವೇದಿಕೆ ತಾಲೂಕು ಘಟಕದ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಜ್ಯೋತಿಷ್ಯ ರತ್ನಾಕರ ಎಂ. ವಿರೂಪಾಕ್ಷಯ್ಯ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧ್ಯಕ್ಷ ಕೆ.ಎಂ ಬಸವರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಯು. ರಾಘವೇಂದ್ರರಾವ್ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗೌರವಾಧ್ಯಕ್ಷ ಟಿ. ಯಮುನಪ್ಪ, ತಾಲೂಕು ಗೌರವಾಧ್ಯಕ್ಷ ಎಂ.ಎಂ. ವಿರೂಪಾಕ್ಷಯ್ಯ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ. ಮಲ್ಲಿಕಾರ್ಜುನ ಗೌಡ, ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರಯ್ಯ ರೋಣದಮಠ, ಆರೋಗ್ಯ ಇಲಾಖೆಯ ಧರ್ಮನಗೌಡ, ಕೊಪ್ಪಳ ಜಿಲ್ಲಾಧ್ಯಕ್ಷ ಮಂಜುನಾಥ ಚಿತ್ರಗಾರ, ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ಪದಗ್ರಹಣ ಮಾಡಿದ ನಂತರ ನಡೆದ ಶ್ರಾವಣ ಸಂಭ್ರಮ ಕವಿಗೋಷ್ಠಿಯಲ್ಲಿ ಹದಿನೈದಕ್ಕೂ ಹೆಚ್ಚು ಕವಿಗಳು ತಮ್ಮ ಕವನ ವಾಚಿಸಿದರು.ಜಿಲ್ಲಾ ಕಾರ್ಯದರ್ಶಿ ಎಂ. ಉಮಾಮಹೇಶ್ವರ, ಖಜಾಂಚಿ ಎಲ್. ಹಾಲ್ಯಾನಾಯ್ಕ, ಶೋಭಾ ಶಂಕರನಾದ, ನೂರ್ ಜಹಾನ್, ಜಗದೀಶ ಬೆನ್ನೂರು, ಜಿ. ಯರಿಸ್ವಾಮಿ, ವಿ.ಪರಶುರಾಮ, ಜಂಬುನಾಥ, ವಿಶಾಲ್ ಮ್ಯಾಸರ್, ರೇಖಾ ಕನ್ನಡತಿ, ಭಾರತಿ ಮೂಲಿಮನಿ, ಪ್ರಧಾನ ಕಾರ್ಯದರ್ಶಿ ಶಿವನಗೌಡ ಸಾತ್ಮರ್ ಕಾರ್ಯಕ್ರಮ ನಿರೂಪಿಸಿದರು. ಕೆ. ಅನುಷಾ ಪ್ರಾರ್ಥಿಸಿದರು, ವೆಂಕಟೇಶ್ ಬಡಿಗೇರ ಸ್ವಾಗತಿಸಿದರು. ಕೊನೆಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೋ. ದಾ. ವಿರೂಪಾಕ್ಷಗೌಡ ವಂದಿಸಿದರು.