ಕನ್ನಡಪ್ರಭ ವಾರ್ತೆ ತುಮಕೂರುಕರ್ನಾಟಕ ವಾಣಿಜ್ಯ ಮತ್ತುಕೈಗಾರಿಕಾ ಮಹಾಸಂಸ್ಥೆ ಹಾಗೂ ಜಿಲ್ಲಾ ವಾಣಿಜ್ಯ ಮತ್ತುಕೈಗಾರಿಕಾ ಸಂಸ್ಥೆ ಆಶ್ರಯದಲ್ಲಿ ಈ ತಿಂಗಳ 6 ಮತ್ತು 7ರಂದು ರಾಜ್ಯ ಮಟ್ಟದ ವಾಣಿಜ್ಯ ಮತ್ತುಕೈಗಾರಿಕಾ ಸಂಸ್ಥೆಗಳ ಸಮ್ಮೇಳನ ಹಾಗೂ ತುಮಕೂರು ಸಂಸ್ಥೆಯ ಬೆಳ್ಳಿಹಬ್ಬ ಆಚರಣಾ ಸಮಾರಂಭವನ್ನು ತುಮಕೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಅಧ್ಯಕ್ಷೆ ಉಮಾರೆಡ್ಡಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರದ ಹೊರವಲಯದ ಹೆಗ್ಗೆರೆಯ ಎಚ್.ಎಂ.ಗಂಗಾಧರಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಸಮ್ಮೇಳನ ಹಮ್ಮಿಕೊಂಡಿದ್ದು ೬ರಂದು ಬೆಳಿಗ್ಗೆ ೧೦.೩೦ಕ್ಕೆ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆರಾಜ್ಯ ಸಚಿವ ವಿ.ಸೋಮಣ್ಣ ಸಮ್ಮೇಳನ ಉದ್ಘಾಟಿಸುವರು. ಉಪ ಮುಖ್ಯಮಂತ್ರಿಡಾ.ಜಿ.ಪರಮೇಶ್ವರ್ ಹಾಗೂ ಹಲವು ಸಚಿವರು, ಜಿಲ್ಲೆಯ ಶಾಸಕರು ಭಾಗವಹಿಸುವರುಎಂದು ತಿಳಿಸಿದರು.ಬೆಂಗಳೂರು ದೇಶದ ಐಟಿ ರಾಜಧಾನಿಯೆಂದೇ ಹೆಸರು ಪಡೆದಿದೆ, ಆದರೆಕೈಗಾರಿಕಾ ಬೆಳವಣಿಗೆಗಳನ್ನು ಕೇವಲ ಬೆಂಗಳೂರಿಗೆ ಸೀಮಿತಗೊಳಿಸದೆ, ತುಮಕೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಮಂಗಳೂರಿನಂತಹ ಎರಡನೇ ಹಂತದ ನಗರಗಳಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಸರ್ಕಾರಒತ್ತು ನೀಡಬೇಕು. ಕೈಗಾರಿಕಾ ಕ್ಷೇತ್ರಗಳು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಯಾದಾಗ ರಾಜ್ಯದ ನಿರುದ್ಯೋಗ ಸಮಸ್ಯೆಗೆ ಪರಿಹಾರವನ್ನು ಕಂಡು ಕೊಳ್ಳಲು ಸಾಧ್ಯವಾಗುತ್ತದೆ. ಕರ್ನಾಟಕ ವಿದೇಶಿ ಹೂಡಿಕೆಗೆ ಅತ್ಯಂತ ಪ್ರಶಸ್ತವಾದ ರಾಜ್ಯವಾಗಿದ್ದು, ದೇಶದಲ್ಲಿಯೇ ಕೈಗಾರಿಕೋದ್ಯಮ ಸ್ನೇಹಿ ರಾಜ್ಯ ಎಂಬ ಖ್ಯಾತಿಯನ್ನು ಗಳಿಸಿದೆ ಎಂದರು.ಜಿಲ್ಲೆಗಳಲ್ಲಿ ಪ್ರಸ್ತುತ ಎದುರಿಸುತ್ತಿರುವ ವಾಣಿಜ್ಯ, ಕೈಗಾರಿಕಾ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಈ ಸಮ್ಮೇಳನ ವೇದಿಕೆಯಾಗಲಿದೆ. ರಾಜ್ಯದಲ್ಲಿ 38 ಲಕ್ಷ ಎಂಎಸ್‌ಎಂಇ ಉದ್ಯಮಗಳಿದ್ದು, ಇವು ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಜತೆಗೆ ಸಾವಿರಾರು ಕೋಟಿ ವಹಿವಾಟು ನಡೆಸುತ್ತಿವೆ. ಬೆಂಗಳೂರಿನಲ್ಲಿ ಮಾತ್ರವಲ್ಲದೆ, ಬೇರೆ ಜಿಲ್ಲೆಗಳಲ್ಲೂ ಇ-ಖಾತಾ ಜನರೇಟ್‌ ಆಗುತ್ತಿಲ್ಲ. ಖಾತೆಯಲ್ಲಿ ತಪ್ಪಾಗಿರುವುದಕ್ಕೆ ಸರಿಪಡಿಸಲು ಸಾಕಷ್ಟು ಸಮಯ ಹಿಡಿಯುತ್ತಿದೆ. ಖಾತಾ ಪಡೆಯಲು ವಿಳಂಬವಾಗಿ ಅನೇಕ ಕೈಗಾರಿಕೆಗಳು ನೋಂದಣಿ ಆಗುತ್ತಿಲ್ಲ ಎಂದರು.ತುಮಕೂರು ಜಿಲ್ಲಾ ವಾಣಿಜ್ಯ ಮತ್ತುಕೈಗಾರಿಕಾ ಸಂಸ್ಥೆ ಅಧ್ಯಕ್ಷ ಪಾಂಡುರಂಗ ಕುರಂದರವಾಡ ಮಾತನಾಡಿ, ಇದೇ ವೇಳೆ ಜಿಲ್ಲಾ ಸಂಸ್ಥೆಗೆ 25 ವರ್ಷ ತುಂಬಿದ ಸಂದರ್ಭದಲ್ಲಿ೭ರಂದು ರಜತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಆಚರಣೆ ಜೊತೆಗೆ ಸಮಸ್ಯೆಗಳ ಪರಿಹಾರದ ಬಗ್ಗೆ ಚರ್ಚೆ ಮಾಡುವುದು ಸಮ್ಮೇಳನದ ಆಶಯವಾಗಿದೆ. ಕೆಐಎಡಿಬಿಯ ಸಮಸ್ಯೆಗಳ ಬಗ್ಗೆ ಚರ್ಚಿಸಲು ಇಲಾಖೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದರೆಡ್ಡಿ ಭಾಗವಹಿಸುತ್ತಿದ್ದು, ಸದಸ್ಯರ ಜೊತೆ ಸಂವಾದ ಏರ್ಪಡಿಸಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

ತುಮಕೂರಿನ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಅವರು ತುಮಕೂರು ಕೈಗಾರಿಕೆಗಳ ಧೈಯ ಮತ್ತು ಅಭಿವೃದ್ದಿಯ ಬಗ್ಗೆ ಸಮ್ಮೇಳನದಲ್ಲಿ ಮಾತನಾಡಲಿದ್ದಾರೆ. ಇ-ಖಾತಾ ಮತ್ತು ಆಸ್ತಿ ತೆರಿಗೆಯ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ದೀಪಾ ಚೋಳನ್ ಹಾಗೂ ಇಲಾಖೆಯ ಅಧಿಕಾರಿಗಳು ಭಾಗವಹಿಸುತ್ತಿದ್ದು ಸದಸ್ಯರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದರು.ಸಮ್ಮೇಳನ ಆಚರಣಾ ಸಮಿತಿ ಅಧ್ಯಕ್ಷ ಸುಜ್ಞಾನ್ ಹಿರೇಮಠ್ ಮಾತನಾಡಿದರು. ಎಫ್‌ಕೆಸಿಸಿ ಉಪಾಧ್ಯಕ್ಷ ಟಿ. ಸಾಯಿರಾಮ್‌ಪ್ರಸಾದ್, ಕಾರ್ಯದರ್ಶಿ ಬಿ.ಪಿ.ಶಶಿಧರ್, ಟಿಡಿಸಿಸಿ ಮಾಜಿ ಅಧ್ಯಕ್ಷರಾದ ಟಿ.ಜೆ.ಗಿರೀಶ್, ಸುರೇಂದ್ರ ಶಾ, ವಿಶೇಷ ಆಹ್ವಾನಿತರಾದ ಟಿ.ಆರ್.ಸದಾಶಿವಯ್ಯ, ಎಸ್.ಸಿ.ಅಮರೇಶ್, ನಿರ್ದೇಶಕರಾದ ಡಿ.ಆರ್.ಮಲ್ಲೇಶಯ್ಯ,ಸದಾಶಿವ ಆರ್. ಅಮಿನ್, ಜಿ.ಆರ್.ಸುರೇಶ್, ಎಚ್.ಪಿ.ಮೋಹನ್‌ಕುಮಾರ್, ಆನಂದಕುಮಾರ್, ಮೊಹಮದ್ ವಾಜೀದ್, ಎನ್.ವಿ.ಅನ್ಸಿಕ್, ಟಿ.ಆರ್.ಆನಂದ್, ಜಿ.ಆರ್.ಮನು, ನಾಗೇಶ್‌ಬಾಬು, ಎ.ಎಸ್.ಬಸವರಾಜು ಹಿರೇಮಠ್, ಎ.ಎಂ.ರವಿಶಂಕರ್, ಸಿ.ವಿ.ಶ್ರೀನಿವಾಸಗುಪ್ತ ಮೊದಲಾದವರು ಹಾಜರಿದ್ದರು.