ಸಾರಾಂಶ
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆ ಹೆಚ್ಚಳ, ಖಾಲಿ ಇರುವ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಎಸ್ಎಫ್ಐ ರಾಜ್ಯ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಹೇಳಿದರು.ಎಸ್ಎಫ್ಐ ರಾಜ್ಯ ಮಟ್ಟದ ಹಾಸ್ಟೆಲ್ ವಿದ್ಯಾರ್ಥಿಗಳ ಸಮಾವೇಶದ ಲೋಗೋವನ್ನು ಬುಧವಾರ ಚಿತ್ರದುರ್ಗದ ವಿವಿಧ ಹಾಸ್ಟೆಲ್ ಗಳಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಅವರು, 4-5 ಅಕ್ಟೋಬರ್ 2025 ಎರಡು ದಿನಗಳ ಕಾಲ ನಡೆಯುವ ಸಮಾವೇಶದಲ್ಲಿ ರಾಜ್ಯದಲ್ಲಿರುವ ಹಾಸ್ಟೆಲ್ ವಿದ್ಯಾರ್ಥಿಗಳ ಸಮಸ್ಯೆಗಳನ್ನು, ಮೂಲಸೌಕರ್ಯಗಳ ಕುರಿತು ಚರ್ಚಿಸಲಾಗುವುದು. ರಾಜ್ಯದಲ್ಲಿರುವ ಎಸ್ಸಿ 3.5ಲಕ್ಷ ವಿದ್ಯಾರ್ಥಿಗಳಿಗೆ 2400 ವಸತಿ ನಿಲಯಗಳು, ಎಸ್.ಟಿ 1.5ಲಕ್ಷ ವಿದ್ಯಾರ್ಥಿಗಳಿಗೆ 1200 ವಸತಿ ನಿಲಯಗಳು, ಒಬಿಸಿ 2.5 ವಿದ್ಯಾರ್ಥಿಗಳಿಗೆ 2500 ನಿಲಯಗಳು ಸೇರಿ ಒಟ್ಟು 7.5 ವಿದ್ಯಾರ್ಥಿಗಳು ಮತ್ತು 6000ಕ್ಕೂ ಅಧಿಕ ನಿಲಯಗಳಿವೆ.
ನಿಲಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ನೇಮಕಾತಿಗಳು ವಿಳಂಬದ ಕಾರಣದಿಂದಾಗಿ ನಿಲಯ ಪಾಲಕರ, ಸ್ವಚ್ಚತಾ ಸಿಬ್ಬಂದಿ ಕೊರತೆ ಹೆಚ್ಚಿದೆ. ಟೆಂಡರ್ ಗಳ ಮೂಲಕ ಆಹಾರ ಸರಬರಾಜು ಮಾಡಲಾಗುತ್ತಿದೆ. ವಿದ್ಯಾರ್ಥಿಗಳನ್ನು ಜೈಲಿನಲ್ಲಿರುವ ಕೈದಿಗಳಿಗಿಂತ ಕಡೆಯಾಗಿ ಕಾಣಲಾಗುತ್ತದೆ. ಮೆಟ್ರಿಕ್ ವಿದ್ಯಾರ್ಥಿಗಳಿಗೆ 1750 ರು ಮತ್ತು ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ 1850 ರು ಆಹಾರ ಭತ್ಯೆ ನೀಡಲಾಗುತ್ತಿದೆ. ಇದರಿಂದ ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರ ಕೊಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸರ್ಕಾರ ಪ್ರತಿ ವಿದ್ಯಾರ್ಥಿಗೆ 4.500 ರು. ಆಹಾರ ಭತ್ಯಯನ್ನು ಹೆಚ್ಚಿಸಬೇಕು. ಇದರ ಭಾಗವಾಗಿ ಹಾವೇರಿಯಲ್ಲಿ ಎರಡು ದಿನಗಳ ಕಾಲ ರಾಜ್ಯಮಟ್ಟದ ಸಮಾವೇಶವನ್ನು ಮಾಡಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದೆಂದರು.ಎಸ್ಎಫ್ಐ ಮುಖಂಡ ಸಂಜುನಾಯ್ಕ ಮಾತನಾಡಿ, ಉತ್ತಮ ಶಿಕ್ಷಣಕ್ಕಾಗಿ ಹಾಸ್ಟೆಲ್ ಪ್ರಮುಖ ಪಾತ್ರ ವಹಿಸಿವೆ. ಎಸ್ಎಫ್ಐ ರಾಜ್ಯ ಮಟ್ಟದ ಹಾಸ್ಟೆಲ್ ವಿದ್ಯಾರ್ಥಿಗಳ ಸಮಾವೇಶದಲ್ಲಿ ಧಾರವಾಡ-ಹುಬ್ಬಳ್ಳಿ ಸೇರಿದಂತೆ ಇಡೀ ರಾಜ್ಯದ 200ಕ್ಕೂ ಅಧಿಕ ವಿದ್ಯಾರ್ಥಿ ಪ್ರತಿನಿಧಿಗಳು ಪಾಲ್ಗೊಂಡು ಹಾಸ್ಟೆಲ್ ವ್ಯವಸ್ಥೆಯ ಕುರಿತು ಸಮಗ್ರ ಚರ್ಚೆ, ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಸರ್ಕಾರದ ಸಚಿವರು, ನಾಲ್ಕು ಇಲಾಖೆಯ ಮುಖ್ಯ ಕಾರ್ಯದರ್ಶಿಗಳು, ಸಂಪನ್ಮೂಲ ವ್ಯಕ್ತಿಗಳು, ಉಪನ್ಯಾಸಕರು, ತಜ್ಞರು, ಅಖಿಲ ಭಾರತ ಅಧ್ಯಕ್ಷರು ಆಗಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಹಾಸ್ಟೆಲ್ ಗಳ ಮಧ್ಯೆ ವಿದ್ಯಾರ್ಥಿ ಚಳುವಳಿ ದೊಡ್ಡ ಆಂದೋಲನ ಪ್ರಾರಂಭಿಸುತ್ತಿದೆ ಎಂದರು.
ಎಸ್ಎಫ್ಐ ಮುಖಂಡ ರಕ್ಷಿತಾ ಎಸ್ ಎ, ಎಸ್ಎಫ್ಐ ಹಾಸ್ಟೆಲ್ ಘಟಕ ಅಧ್ಯಕ್ಷೆ ದೀಪಾ, ಕಾರ್ಯದರ್ಶಿ ಪ್ರೀತಿ, ಉಪಾಧ್ಯಕ್ಷೆ ಅಮೃತಾ ಎನ್ ಸಿ, ದೀಪಿಕಾ ಜೆ, ಸಂದ್ಯಾ ಜಿ ಎಸ್, ಸಹ ಕಾರ್ಯದರ್ಶಿ ರಾಧಿಕಾ ಟಿ, ದಿವ್ಯ ಎಸ್, ಅಧ್ಯಕ್ಷ ಯೋಗೆಶ್ ಕಾರ್ಯದರ್ಶಿ ನೌಕೇಶ್, ಉಪಾಧ್ಯಕ್ಷ ಆಕಾಶ ಕಣವೇಶ್ವರ, ತಿಪ್ಪೇಸ್ವಾಮಿ ಎಸ್, ರಾಜಶೇಖರ ಹಿರೇಮಠ, ಸುದರ್ಶನ ಕೆ ವಿ, ಸಹ ಕಾರ್ಯದರ್ಶಿ ರಾಜು ಬಿ, ಕಾರ್ತಿಕ ಬಿ ಎಸ್, ಕುಶಾಲ , ಮಹಾಲಕ್ಷ್ಮಿ, ದಿವ್ಯಾ ಎಸ್ ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))