ಸಹಕಾರ ಕ್ಷೇತ್ರದ ಬಲವರ್ಧನೆ, ಆಧುನಿಕ ತಂತ್ರಜ್ಞಾನದ ಅಳವಡಿಕೆ ಹಾಗೂ ಸಾರ್ವಜನಿಕ, ಖಾಸಗಿ ಮತ್ತು ಸಹಕಾರಿ ಸಂಸ್ಥೆ ಗಳ ನಡುವಿನ ಪಾಲುದಾರಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ನ.18ರಂದು ನಗರದ ಜನವಾಡ ರಸ್ತೆಯ ಝೀರಾ ಕನ್ವೆನ್ಷನ್ ಹಾಲ್ನಲ್ಲಿ ರಾಜ್ಯಮಟ್ಟದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮಹಾ ಮಂಡಳದ ರಾಜ್ಯ ನಿರ್ದೇಶಕ ಗುರುನಾಥ ಜ್ಯಾಂತಿಕರ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೀದರ್
ಸಹಕಾರ ಕ್ಷೇತ್ರದ ಬಲವರ್ಧನೆ, ಆಧುನಿಕ ತಂತ್ರಜ್ಞಾನದ ಅಳವಡಿಕೆ ಹಾಗೂ ಸಾರ್ವಜನಿಕ, ಖಾಸಗಿ ಮತ್ತು ಸಹಕಾರಿ ಸಂಸ್ಥೆ ಗಳ ನಡುವಿನ ಪಾಲುದಾರಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ನ.18ರಂದು ನಗರದ ಜನವಾಡ ರಸ್ತೆಯ ಝೀರಾ ಕನ್ವೆನ್ಷನ್ ಹಾಲ್ನಲ್ಲಿ ರಾಜ್ಯಮಟ್ಟದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮಹಾ ಮಂಡಳದ ರಾಜ್ಯ ನಿರ್ದೇಶಕ ಗುರುನಾಥ ಜ್ಯಾಂತಿಕರ್ ತಿಳಿಸಿದರು.ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.14ರಿಂದ 20ರವರೆಗೆ ದೇಶಾದ್ಯಂತ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಿಸಲಾಗುತ್ತಿದ್ದು, ನ.18ರಂದು ಸಾರ್ವಜನಿಕ, ಖಾಸಗಿ–ಸಹಕಾರಿ ಪಾಲುದಾರಿಕೆ ಬಲಪಡಿಸುವ ದಿನ’ ಆಚರಿಸಲಾಗುತ್ತಿದೆ ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮಹಾ ಮಂಡಳಿ, ಕರ್ನಾ ಟಕ ರಾಜ್ಯ ಸಹಕಾರ ಮಹಿಳಾ ಮಹಾಮಂಡಳ, ಬೀದರ್ ಜಿಲ್ಲಾ ಸೌಹಾ ರ್ದ ಸಹಕಾರಿಗಳ ಒಕ್ಕೂಟ, ಬೀದರ್ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಹಯೋಗದಲ್ಲಿ ಕಾರ್ಯ ಕ್ರಮ ನಡೆಯಲಿದೆ ಎಂದರು.ಅಂದು ಬೆಳಿಗ್ಗೆ 10 ಗಂಟೆಗೆ ಡಿಸಿಸಿ ಬ್ಯಾಂಕ್ ಆವರಣದಿಂದ ಸಹಕಾರ ಸಪ್ತಾಹದ ಜಾಗೃತಿ ಮೆರವಣಿಗೆ ಹೊರಡಲಿದೆ. ಕರ್ನಾ ಟಕ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಮಾಲಾ ಬಿ. ನಾರಾಯಣರಾವ್ ಜಾಥಾ ಉದ್ಘಾಟಿಸುವರು. ಈ ಜಾಥಾವು ಬಸವೇಶ್ವರ ವೃತ್ತ, ಭಗತ್ಸಿಂಗ್ ವೃತ್ತ ಹಾಗೂ ಡಾ.ಅಂಬೇಡ್ಕರ್ ವೃತ್ತ, ಸಿದ್ಧಾರ್ಥ ಕಾಲೇಜಿನ ಮೂಲಕ ಸಾಗಿ ಝೀರಾ ಕನ್ವೆನ್ಷನ್ ಹಾಲ್ ತಲುಪಲಿದೆ. ಬೆಳಿಗ್ಗೆ 11 ಗಂಟೆಗೆ ಸಹಕಾರ ಸಚಿವ ಲಕ್ಷ್ಮಣ ಸೌದಿ ಸಮಾರಂಭ ಉಸ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿಯ ಅಧ್ಯಕ್ಷ ಜಿ.ಟಿ ದೇವೆಗೌಡ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ರಾಜ್ಯಾಧ್ಯಕ್ಷ ಜಿ.ನಂಜನಗೌಡ, ಸಂಸದ ಸಾಗರ ಖಂಡ್ರೆ, ಜಿಲ್ಲೆಯ ಎಲ್ಲಾ ಶಾಸಕರು, ಎಂಎಲ್ಸಿಗಳು, ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಸಹಕಾರ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧೆಡೆಗಳಿಂದ ಒಂದು ಸಾವಿರಕ್ಕೂ ಹೆಚ್ಚು ಸಹಕಾರಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ವಿವರಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಹಿಳಾ ಮಹಾ ಮಂಡಳದ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಮಾತನಾಡಿ, ಸಹಕಾರ ಸಪ್ತಾಹವು ಕೇವಲ ಆಚರಣೆಗೆ ಸೀಮಿತವಾಗದೆ, ಸಹಕಾರ ಸಂಸ್ಥೆಗಳ ಸಾಧನೆ, ಸವಾಲು ಮತ್ತು ಭವಿಷ್ಯದ ಅವಕಾಶಗಳ ಕುರಿತು ಚರ್ಚಿ ಸಲು ವೇದಿಕೆಯಾಗಬೇಕು. ಸಹಕಾರ ಕ್ಷೇತ್ರದ ಮೂಲಕ ಗ್ರಾಮೀಣ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಬೀದರ್ ಜಿಲ್ಲಾ ಕೇಂದ್ರ (ಡಿ.ಸಿ.ಸಿ) ಬ್ಯಾಂಕ್ ಅಧ್ಯಕ್ಷ ಅಮರ ಖಂಡ್ರೆ, ಕರ್ನಾಟಕ ರಾಜ್ಯ ಸಹಕಾರಿ ಯುನಿಯನ್ ನಿರ್ದೇಶಕ ಅಭಿಷೇಕ ಪಾಟೀಲ, ಶರಣಗೌಡ ಪಾಟೀಲ, ಸಹಕಾರಿ ಇಲಾಖೆಯ ಜಂಟಿ ನಿಭಂಧಕ ಹೆಚ್.ಪಿ ಕುಮಾರ, ಉಪ ನಿಭಂಧಕಿ ಮಂಜುಳಾ ಎಸ್, ಪ್ರಾಂತಿಯ ಅಧಿಕಾರಿ ಸಂಜಯ ಕೊರಟಕರ್ ಉಪಸ್ಥಿತರಿದ್ದರು.