ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಉಡುಪಿ ಪಿಪಿಸಿಗೆ ಬಹುಮಾನ

| Published : Jan 19 2025, 02:17 AM IST

ಸಾರಾಂಶ

ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಇದರ ವತಿಯಿಂದ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಡುಪಿಯ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಬಹುಮಾನಗಳನ್ನು ಗೆದ್ದುಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಏಕಪಾತ್ರಾಭಿನಯದಲ್ಲಿ ಸುಜ್ಞಾನ್ ಶರ್ಮ ಅವರು ತೃತೀಯ ಸ್ಥಾನ, ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಸಿಯಾ ಚೇತನ್ ಶೆಟ್ಟಿ ಅವರು ಪ್ರಥಮ ಸ್ಥಾನ ಹಾಗೂ ರಸಪ್ರಶ್ನೆಯಲ್ಲಿ ಅನ್ವಿತಾ ಎಸ್. ಭಟ್ ಅವರು ತೃತೀಯ ಸ್ಥಾನ ಪಡೆದಿರುತ್ತಾರೆ. ಇವರು ಜಿಲ್ಲಾ ಮಟ್ಟದ ಸ್ಪರ್ಧೆಯಿಂದ ವಿಭಾಗ ಮಟ್ಟಕ್ಕೆ, ವಿಭಾಗ ಮಟ್ಟದ ಸ್ಪರ್ಧೆಯಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಈ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

ಈ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಗೌರವಾನ್ವಿತ ಕಾರ್ಯದರ್ಶಿ ಡಾ.ಪಿ.ಎಸ್. ಐತಾಳ್, ಪ್ರಾಂಶುಪಾಲರಾದ ಪ್ರತಿಮಾ ಬಾಳಿಗ, ಸಾಂಸ್ಕೃತಿಕ ಸ್ಪರ್ಧೆಗಳ ಸಂಯೋಜಕ ರಮಾನಂದ ರಾವ್ ಹಾಗೂ ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.