ಸಾರಾಂಶ
ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಕಾರ್ಯಕ್ರಮ ನಡೆಯಿತು. ಉತ್ತಮ ಸಾಧಕರಾಗಿ ಸೇವೆ ಸಲ್ಲಿಸಿದ ವಿವಿಧ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಮಾರ್ಗದರ್ಶನ ನೀಡಿ ಶಾಲೆಯ ಅಭಿವೃದ್ಧಿಗೆ ಶ್ರಮಿಸಿ, ಉತ್ತಮ ಸಾಧಕರಾಗಿ, ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿದ ವಿವಿಧ ಶಿಕ್ಷಕರನ್ನು ಸನ್ಮಾನಿಸಲಾಯಿತು.ಸೂರ್ಯ ಫೌಂಡೇಶನ್ ಬೆಂಗಳೂರು, ಸ್ಪಾರ್ಕ್ ಅಕಾಡೆಮಿ ಬೆಂಗಳೂರು ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಅವರ ಸಹಕಾರದೊಂದಿಗೆ ಇಂಡೋಗ್ಲೋಬ್ ಸಂಸ್ಥೆ ಬೆಂಗಳೂರು ನಲ್ಲಿ ನಡೆದ 2024ರ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಕಾರ್ಯಕ್ರಮ ನಡೆಯಿತು.
ಸಮ್ಮೇಳನದಲ್ಲಿ ಮುಖ್ಯಶಿಕ್ಷಕರ ವಿಭಾಗದ ರಾಜ್ಯ ಪ್ರಶಸ್ತಿ ಶಿಕ್ಷಣ ಪ್ರಕಾಶ ಪ್ರಶಸ್ತಿಯನ್ನು ಕೊಡಗು ಜಿಲ್ಲೆಯ ಊರುಬೈಲು ಚೆಂಬು ಸ.ಹಿ.ಪ್ರಾ.ಶಾಲೆ ಮುಖ್ಯಶಿಕ್ಷಕ ಸೋಮಣ್ಣ ಕೆ. ಆರ್. ಸ್ವೀಕರಿಸಿದರು.