ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಮಾ.೧ರಂದು ಬೆಳಗ್ಗೆ ೯.೩೦ ಗಂಟೆಗೆ ರಾಜ್ಯ ಮಟ್ಟದ ಶೈಕ್ಷಣಿಕ ಅಧಿವೇಶನ, ಮಾತೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪ್ರದಾನ ಸಮಾರಂಭ ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ನಾಗೇಶ್ ತಿಳಿಸಿದರು.ಉದ್ಘಾಟನೆಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೆರವೇರಿಸುವರು. ಸಂಸದ ಎಚ್.ಡಿ.ಕುಮಾರಸ್ವಾಮಿ, ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭಾಗವಹಿಸುವರು. ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಅಧಿವೇಶನದ ದಿಕ್ಸೂಚಿ ಭಾಷಣ ಮಾಡುವರು. ಜಿಲ್ಲಾಧಿಕಾರಿ ಡಾ.ಕುಮಾರ ಶೈಕ್ಷಣಿಕ ಗೋಷ್ಠಿಯನನ್ನುದ್ದೇಶಿಸಿ ಮಾತನಾಡುವರು. ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಳ್ಳುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರಾಜ್ಯದ ೩೫ ಶೈಕ್ಷಣಿಕ ಜಿಲ್ಲೆಗಳಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಿರುವ ೬೬ ಜನ ಶಿಕ್ಷಕ-ಶಿಕ್ಷಕಿಯರಿಗೆ ಮಾತೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಶಿಕ್ಷಕರ ಪ್ರಮುಖ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.ಶೈಕ್ಷಣಿಕ ಅಧಿವವೇಶನದಲ್ಲಿ ೫ ಸಾವಿರಕ್ಕೂ ಹೆಚ್ಚಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಸರ್ಕಾರಿ ಶಾಲೆಗಳ ಸಬಲೀಕರಣ, ಗುಣಮಟ್ಟದ ಶಿಕ್ಷಣ, ಪ್ರಾಥಮಿಕ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕ, ತರಗತಿಗೊಬ್ಬ ಶಿಕ್ಷಕರಿರುವಂತೆ ಸರ್ಕಾರವನ್ನು ಒತ್ತಾಯಿಸುವುದರೊಂದಿಗೆ ಶಿಕ್ಷಕರ ಬೇಡಿಕೆಗಳನ್ನೂ ಸರ್ಕಾರದ ಮುಂದಿಡಲಾಗುವುದು ಎಂದರು.
ಗೋಷ್ಠಿಯಲ್ಲಿ ಚಂದ್ರಶೇಖರ್ ನುಗ್ಗಲಿ, ಜಿ.ವೈ.ಮಂಜುನಾಥ್, ಮಾಲತೇಶ್, ಪ್ರಮೀಳಾ, ಚಿಕ್ಕೇಗೌಡ, ಸಿದ್ದರಾಮು, ರವಿಶಂಕರ್, ರುದ್ರೇಶ್, ನಾಗೇಶ್ ಇದ್ದರು.ಇಂದು ಅಹವಾಲು ಸ್ವೀಕಾರಮಂಡ್ಯ: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ ಭಟ್ ಹಾಗೂ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಫೆ.28 ರಂದು ಮಧ್ಯಾಹ್ನ 2:30 ಗಂಟೆಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಕರಣಗಳ ವಿಲೇವಾರಿ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮತ್ತು ದೂರುಗಳ ವಿಚಾರಣೆ ಕುರಿತು ಸಭೆ ನಡೆಸಲಿದ್ದಾರೆ.