ಮಾಸಾಂತ್ಯಕ್ಕೆ ರಾಜ್ಯ ಮಟ್ಟದ ಜನಪರ ಉತ್ಸವ

| Published : Feb 08 2025, 12:32 AM IST

ಸಾರಾಂಶ

ಉತ್ಸವದಲ್ಲಿ ಸ್ಥಳೀಯ ಹಾಗೂ ಹೊರ ಜಿಲ್ಲೆಗಳ ಕಲಾವಿದರ ತಂಡಗಳಿಂದ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಜೊತೆಗೆ ಖ್ಯಾತ ಲೇಖಕರು ಹಾಗೂ ಚಿಂತಕರಿಂದ ವಿವಿಧ ವಿಷಯಗಳ ಕುರಿತು ವಿಚಾರ ಸಂಕೀರ್ಣ ಏರ್ಪಡಿಸಲಾಗುವುದು. ಎರಡು ದಿನಗಳ ಕಾರ್ಯಕ್ರಮ ಇದಾಗಿದ್ದು, ರಾಜ್ಯದ ವಿವಿಧೆಡೆಗಳಿಂದ ಸುಮಾರು ೫೦ ಕಲಾ ತಂಡಗಳು ಭಾಗವಹಿಸಲಿವೆ.

ಕನ್ನಡಪ್ರಭ ವಾರ್ತೆ ಕೋಲಾರಫೆಬ್ರವರಿ ಅಂತ್ಯದ ವೇಳೆಗೆ ಕೋಲಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ರಾಜ್ಯ ಮಟ್ಟದ ಜನಪರ ಉತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜ್ಯ ಮಟ್ಟದ ಜನಪರ ಉತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಉತ್ಸವದ ಅಗತ್ಯ ಹಾಗೂ ಸೂಕ್ತ ಸಿದ್ಧತೆಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಪ್ರಾರಂಭಿಸಬೇಕು ಎಂದು ಸೂಚಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ

ಉತ್ಸವದಲ್ಲಿ ಸ್ಥಳೀಯ ಹಾಗೂ ಹೊರ ಜಿಲ್ಲೆಗಳ ಕಲಾವಿದರ ತಂಡಗಳಿಂದ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಜೊತೆಗೆ ಖ್ಯಾತ ಲೇಖಕರು ಹಾಗೂ ಚಿಂತಕರಿಂದ ವಿವಿಧ ವಿಷಯಗಳ ಕುರಿತು ವಿಚಾರ ಸಂಕೀರ್ಣ ಏರ್ಪಡಿಸಲಾಗುವುದು ಎಂದು ಮಾಹಿತಿ ನೀಡಿದರು. ಎರಡು ದಿನಗಳ ಕಾರ್ಯಕ್ರಮ ಇದಾಗಿದ್ದು, ರಾಜ್ಯದ ವಿವಿಧೆಡೆಗಳಿಂದ ಸುಮಾರು ೫೦ ಕಲಾ ತಂಡಗಳು ಭಾಗವಹಿಸಲಿವೆ. ಸುಮಾರು ೧೦ ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ಕಾರ್ಯಕ್ರಮವನ್ನು ಅದ್ಧೂರಿಯಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ

ಕಾರ್ಯಕ್ರಮವನ್ನು ಸರ್ಕಾರಿ ಜ್ಯೂನಿಯರ್ ಕಾಲೇಜು, ಮೈದಾನದಲ್ಲಿ ನಿರ್ಮಿಸಲಾಗುವುದು. ಈ ವೇದಿಕೆಯ ಕಾರ್ಯಕ್ರಮ ಸಿಎಂರಿಂದ ಉದ್ಘಾಟಿಸಲು ಯೋಜಿಸಲಾಗುತ್ತಿದೆ. ಜಿಲ್ಲಾ ರಂಗಮಂದಿರ ಸೇರಿದಂತೆ ಮೂರು ಪರ್ಯಾಯ ವೇದಿಕೆಗಳನ್ನು ಸಿದ್ಧಪಡಿಸಬೇಕು. ನಗರದ ಬಂಗಾರಪೇಟೆ ವೃತ್ತದಿಂದ ಮೆರವಣಿಗೆ ಆರಂಭವಾಗಿ ಬಸ್ ನಿಲ್ದಾಣದ ಮೂಲಕ ಮೆಕ್ಕೆ ವೃತ್ತ ಬಳಸಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಂತ್ಯವಾಗಲಿದೆ ಎಂದರು.ಸಭೆಯಲ್ಲಿ ಜಿಪಂ ಸಿಇಓ ಪ್ರವೀಣ್ ಪಿ.ಬಾಗೇವಾಡಿ, ಎಡಿಸಿ ಮಂಗಳಾ, ಜಾನಪದ ಅಕಾಡೆಮಿ ಅಧ್ಯಕ್ಷರಾದ ಗೊಲ್ಲಹಳ್ಳಿ ಶಿವಪ್ರಸಾದ್, ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್ ಇದ್ದರು.