ಸಾರಾಂಶ
ಮಡಿಕೇರಿ ತಾಲೂಕಿನ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಗೆ ರಾಜ್ಯ ಮಟ್ಟದ ಗ್ರಾಮ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ಪ್ರಭ ವಾರ್ತೆ ನಾಪೋಕ್ಲು
ಮಡಿಕೇರಿ ತಾಲೂಕಿನ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಗೆ ರಾಜ್ಯಮಟ್ಟದ ಗ್ರಾಮ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸ್ಥಳೀಯ ಶಾಸಕರಾದ ನಾಡ ಭರತ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕುಶನ್ ರೈ ಬಿ ಎಸ್, ಪಿ ಡಿ ಓ ಚಂದ್ರಮೌಳಿ ಹಾಗೂ ಉಪಾಧ್ಯಕ್ಷರಾದ ರೇಖಾ ಬಿ ಎಸ್ ಹಾಜರಿದ್ದು ಪ್ರಶಸ್ತಿ ಸ್ವೀಕರಿಸಿದರು.ರಾಜ್ಯದ ವಿವಿಧ ಇಲಾಖೆಯ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳಿಗೆ ‘ಕಾಯಕ ರತ್ನ’ ಪ್ರಶಸ್ತಿ ಹಾಗೂ ಉತ್ತಮ ಆಡಳಿತ ನಿರ್ವಹಣೆಯ ಗ್ರಾಮ ಪಂಚಾಯಿತಿಗೆ ರಾಜ್ಯಮಟ್ಟದ ‘ಗ್ರಾಮ ಮಿತ್ರ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.