ಸಾರಾಂಶ
ಉಡುಪಿ: ಉಡುಪಿ ಜಿಲ್ಲಾ ಆಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಮತ್ತು ಉಡುಪಿ ಜಿಲ್ಲಾ ಕಿರಿಯರ ಅಥ್ಲೆಟಿಕ್ ಮೀಟ್ ಸಮಿತಿ ಆಯೋಜಿಸುವ ಕರ್ನಾಟಕ ರಾಜ್ಯ ಕಿರಿಯರ ಮತ್ತು 23ರ ವಯೋಮಿತಿಯ ಕ್ರೀಡಾಕೂಟದ ಕುರಿತು ಪೂರ್ವಭಾವಿ ಸಭೆ ಶನಿವಾರ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ, ಉಡುಪಿಯ ನಿಕಟಪೂರ್ವ ಶಾಸಕ ಕೆ ರಘುಪತಿ ಭಟ್ ಕ್ರೀಡಾಕೂಟ ಯಶಸ್ವಿಯಾಗಿ ನಡೆಸುವ ಕುರಿತು ಸಲಹೆ ಸೂಚನೆಗಳನ್ನು ನೀಡಿದರು.ನಗರಸಭಾ ಮಾಜಿ ಸದಸ್ಯ ಮಹೇಶ್ ಠಾಕೂರ್, ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಿ. ಎ. ರಾಜವೇಲು, ಜಿಲ್ಲಾ ಸಂಸ್ಥೆಯ ಅಧ್ಯಕ್ಷ ಶ್ರೀ ಹರಿಪ್ರಸಾದ್ ರೈ, ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ದಿನಕರ್ ಬಾಬು, ಯುವಜನ ಸೇವಾ ಹಾಗೂ ಯುವ ಸಬಲೀಕರಣ ಕ್ರೀಡಾ ಇಲಾಖೆಯ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಖಜಾಂಜಿ ಡಾ. ನಾರಾಯಣ ಪ್ರಭು, ಸದಸ್ಯರಾದ ಶ್ರೀ ಜಯರಾಮ್ ಶೆಟ್ಟಿ, ಕಾರ್ಯದರ್ಶಿ ದಿನೇಶ್ ಕುಮಾರ್, ಡಾ. ಕೆಂಪರಾಜ್ ಮತ್ತಿತರರಿದ್ದರು.